IPL 2025: ಐಪಿಎಲ್ ಆಟಗಾರನಿಗೆ ನೋಟಿಸ್ ನೀಡಿದ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್
IPL 2025 Corbin Bosch: ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸೌತ್ ಆಫ್ರಿಕಾ ವೇಗಿ ಕಾರ್ಬಿನ್ ಬಾಷ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಮುಂಬೈ ಇಂಡಿಯನ್ಸ್ ತಂಡವು ಬಾಷ್ ಅವರನ್ನು ಬದಲಿ ಆಟಗಾರನಾಗಿ ಆಯ್ಕೆ ಮಾಡಿಕೊಂಡಿದೆ. ಇದರ ಬೆನ್ನಲ್ಲೇ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಕಾರ್ಬಿನ್ ಬಾಷ್ಗೆ ಲೀಗಲ್ ನೋಟಿಸ್ ಕಳುಹಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕಣಕ್ಕಿಳಿಯಲು ಸಜ್ಜಾಗಿರುವ ಸೌತ್ ಆಫ್ರಿಕಾ ವೇಗಿ ಕಾರ್ಬಿನ್ ಬಾಷ್ಗೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಲೀಗಲ್ ನೋಟಿಸ್ ಕಳುಹಿಸಿದೆ. ಇದಕ್ಕೆ ಮುಖ್ಯ ಕಾರಣ ಕಾರ್ಬಿನ್ ಬಾಷ್ ಪಾಕಿಸ್ತಾನ್ ಸೂಪರ್ ಲೀಗ್ಗೆ ಕೈ ಕೊಟ್ಟಿರುವುದು. ಅಂದರೆ ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಬಾಷ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಹೀಗಾಗಿ ಅವರು ಪಾಕಿಸ್ತಾನ್ ಸೂಪರ್ ಲೀಗ್ಗಾಗಿ ಹೆಸರು ನೋಂದಾಯಿಸಿಕೊಂಡಿದ್ದರು. ಅದರಂತೆ ಪಿಎಸ್ಎಲ್ನ ಪೇಶಾವರ್ ಝಲ್ಮಿ ಫ್ರಾಂಚೈಸಿಯು ಬಾಷ್ ಅವರನ್ನು ಮುಂಬರುವ ಟೂರ್ನಿಗೆ ಆಯ್ಕೆ ಮಾಡಿಕೊಂಡಿದ್ದರು.
ಇದರ ನಡುವೆ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದ ಸೌತ್ ಆಫ್ರಿಕಾ ವೇಗಿ ಲಿಝಾಡ್ ವಿಲಿಯಮ್ಸ್ ಮೊಣಕಾಲಿನ ಗಾಯದ ಕಾರಣ ಈ ಬಾರಿಯ ಐಪಿಎಲ್ನಿಂದ ಹೊರಗುಳಿದಿದ್ದಾರೆ. ಲಿಝಾಡ್ ಅವರ ಬದಲಿಯಾಗಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಕಾರ್ಬಿನ್ ಬಾಷ್ ಅವರನ್ನು ಆಯ್ಕೆ ಮಾಡಿಕೊಂಡಿದೆ.
ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಚಾನ್ಸ್ ಸಿಕ್ಕಿದ್ದೇ ತಡ, ಕಾರ್ಬಿನ್ ಬಾಷ್ ಪಾಕಿಸ್ತಾನ್ ಸೂಪರ್ ಲೀಗ್ನಿಂದ ಹಿಂದೆ ಸರಿದಿದ್ದಾರೆ. ಅದರಂತೆ ಈ ಬಾರಿಯ ಐಪಿಎಲ್ನಲ್ಲಿ ಬಾಷ್ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯಲಿದ್ದಾರೆ.
ಕಾರ್ಬಿನ್ ಬಾಷ್ ಅವರ ಈ ನಡೆಯಿಂದ ಸಿಟ್ಟುಗೊಂಡಿರುವ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಇದೀಗ ಪಿಎಸ್ಎಲ್ನಿಂದ ಹಿಂದೆ ಸರಿಯಲು ಕಾರಣವೇನು ಎಂಬುದರ ಬಗ್ಗೆ ಸ್ಪಷ್ಟನೆಯನ್ನು ಕೋರಿದೆ. ಅಲ್ಲದೆ ಇದು ಒಪ್ಪಂದ ನಿಯಮದ ಉಲ್ಲಂಘನೆಯಾಗಿದ್ದು, ಇದರ ಪರಿಣಾಮಗಳ ಬಗ್ಗೆ ಪಿಸಿಬಿ ತನ್ನ ಲೀಗಲ್ ನೋಟಿಸ್ನಲ್ಲಿ ಉಲ್ಲೇಖಿಸಿದೆ.
ಇನ್ನು ಕಾರ್ಬಿನ್ ಬಾಷ್ ಕಡೆಯಿಂದ ನಿಗದಿತ ಸಮಯದೊಳಗೆ ಪ್ರತಿಕ್ರಿಯೆಯನ್ನು ನಿರೀಕ್ಷಿಸುತ್ತಿರುವುದಾಗಿ ತಿಳಿಸಿರುವ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್, ಈ ವಿಷಯದ ಬಗ್ಗೆ ಪಿಸಿಬಿ ಯಾವುದೇ ಹೆಚ್ಚಿನ ಪ್ರತಿಕ್ರಿಯೆಗಳನ್ನು ನೀಡುವುದಿಲ್ಲ ಎಂದು ಮಾಧ್ಯಮಗಳಿಗೆ ತಿಳಿಸಿದೆ.
ಒಟ್ಟಿನಲ್ಲಿ ಪಾಕಿಸ್ತಾನ್ ಸೂಪರ್ ಲೀಗ್ಗೆ ಆಯ್ಕೆಯಾಗಿ, ಆ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಚಾನ್ಸ್ ಸಿಗುತ್ತಿದ್ದಂತೆ ಪಿಎಸ್ಎಲ್ಗೆ ಕೈ ಕೊಟ್ಟಿರುವ ಕಾರ್ಬಿನ್ ಬಾಷ್ ಐಪಿಎಲ್ ಆರಂಭಕ್ಕೂ ಮುನ್ನವೇ ಸಖತ್ ಸುದ್ದಿಯಲ್ಲಿದ್ದಾರೆ.
ಇದನ್ನೂ ಓದಿ: ವಿಶ್ವ ದಾಖಲೆ… ಮುಂಬೈ ಇಂಡಿಯನ್ಸ್ ಮುಡಿಗೆ 12ನೇ ಟ್ರೋಫಿ
ಮುಂಬೈ ಇಂಡಿಯನ್ಸ್ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ, ತಿಲಕ್ ವರ್ಮಾ, ಟ್ರೆಂಟ್ ಬೌಲ್ಟ್, ನಮನ್ ಧೀರ್, ರಾಬಿನ್ ಮಿಂಝ್, ಕರ್ಣ್ ಶರ್ಮಾ, ದೀಪಕ್ ಚಹರ್, ರೀಸ್ ಟೋಪ್ಲಿ, ರಿಯಾನ್ ರಿಕೆಲ್ಟನ್, ವಿಲ್ ಜ್ಯಾಕ್ಸ್, ಮಿಚೆಲ್ ಸ್ಯಾಂಟ್ನರ್, ಕರ್ಣ್ ಶರ್ಮಾ, ರಾಜ್ವ ಶರ್ಮಾ, ಸತ್ಯನಾರಾಯಣ ರಾಜು, ರಾಜ್ ಬಾವ, ಕೃಷ್ಣನ್ ಶ್ರೀಜಿತ್, ಅಶ್ವಾಣಿ ಕುಮಾರ್, ಬೆವನ್ ಜೇಕಬ್ಸ್, ಅರ್ಜುನ್ ತೆಂಡೂಲ್ಕರ್, ಮುಜೀಬ್ ಉರ್ ರೆಹಮಾನ್, ಕಾರ್ಬಿನ್ ಬಾಷ್.