AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: KKR vs PBKS ಪಂದ್ಯ ರದ್ದಾಗಿದ್ದರಿಂದ ಯಾರಿಗೆ ಲಾಭ?

IPL 2025 KKR vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 44ನೇ ಪಂದ್ಯವು ಮಳೆಗೆ ಆಹುತಿಯಾಗಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಬೇಕಿದ್ದ ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದವು.

IPL 2025: KKR vs PBKS ಪಂದ್ಯ ರದ್ದಾಗಿದ್ದರಿಂದ ಯಾರಿಗೆ ಲಾಭ?
Pbks Vs Kkr
ಝಾಹಿರ್ ಯೂಸುಫ್
|

Updated on: Apr 27, 2025 | 7:29 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ  44 ನೇ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಬೇಕಿದ್ದ ಪಂಜಾಬ್ ಕಿಂಗ್ಸ್ (PBKS) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ನಡುವಣ ಈ ಪಂದ್ಯವು ಕೇವಲ 21 ಓವರ್​ಗಳಿಗೆ ಸೀಮಿತವಾಯಿತು. ಇದಕ್ಕೂ ಮುನ್ನ ಈ ಮ್ಯಾಚ್​ನಲ್ಲಿ ಟಾಸ್ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಪಡೆ ಕಷ್ಟಕರವಾಗಿದ್ದ ಪಿಚ್​ನಲ್ಲಿ 201 ರನ್​ ಕಲೆಹಾಕುವಲ್ಲಿ ಯಶಸ್ವಿಯಾಗಿದ್ದರು.

ಆ ಬಳಿಕ ಇನಿಂಗ್ಸ್ ಆರಂಭಿಸಿದ ಕೊಲ್ಕತ್ತಾ ನೈಟ್ ರೈಡರ್ಸ್ ಒಂದು ಓವರ್​ನಲ್ಲಿ 7 ರನ್​ ಕಲೆಹಾಕಿತು. ಈ ವೇಳೆ ಸುರಿಯಾಲಾರಂಭಿಸಿದ ಮಳೆಗೆ ಇಡೀ ಪಂದ್ಯವನ್ನು ರದ್ದುಗೊಳಿಸಲಾಯಿತು. ಪಂದ್ಯ ರದ್ದಾದ ಕಾರಣ ಉಭಯ ತಂಡಗಳು ತಲಾ ಒಂದೊಂದು ಅಂಕಗಳನ್ನು ಹಂಚಿಕೊಂಡಿದೆ.

ಒಂದು ವೇಳೆ ಈ ಪಂದ್ಯವು ನಡೆದಿದ್ದರೆ ಪಂಜಾಬ್ ಕಿಂಗ್ಸ್ ತಂಡಕ್ಕೆ ಗೆಲ್ಲುವ ಅವಕಾಶ ಹೆಚ್ಚಿತ್ತು. ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ಕೆಕೆಆರ್ ತಂಡವು ಅತ್ಯಂತ ಕಳಪೆ ಪ್ರದರ್ಶನ ನೀಡುತ್ತಿದೆ. ಅದರಲ್ಲೂ ಬೃಹತ್ ಮೊತ್ತವನ್ನು ಚೇಸ್ ಮಾಡಿ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಹೀಗಾಗಿ ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಗೆಲ್ಲುವ ವಿಶ್ವಾಸದಲ್ಲಿತ್ತು. ಆದರೆ ಮಳೆಯಿಂದಾಗಿ ಇದೀಗ ಪಂಜಾಬ್ ಪಡೆ ಒಂದು ಅಂಕವನ್ನು ಕಳೆದುಕೊಂಡಿದೆ.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಪಂದ್ಯ ರದ್ದಾಗಿದ್ದರಿಂದ ಯಾರಿಗೆ ಲಾಭ?

ಪಂಜಾಬ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ನಡುವಣ ಪಂದ್ಯ ರದ್ದಾಗಿದ್ದರಿಂದ ಯಾರಿಗೆ ಲಾಭ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು. ಏಕೆಂದರೆ ಇತ್ತ ಪಂಜಾಬ್ ಕಿಂಗ್ಸ್ ತಂಡವು 9 ಪಂದ್ಯಗಳಿಂದ 11 ಅಂಕಗಳನ್ನು ಕಲೆಹಾಕಿದರೆ, ಅತ್ತ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ 9 ಪಂದ್ಯಗಳಿಂದ 10 ಅಂಕಗಳನ್ನು ಗಳಿಸಿದೆ.

ಈ ಎರಡು ತಂಡಗಳಿಗೆ ಮುಂದಿನ ಪಂದ್ಯಗಳ ಮೂಲಕ ಪಂಜಾಬ್ ಕಿಂಗ್ಸ್ ತಂಡವನ್ನು ಹಿಂದಿಕ್ಕಲು ಉತ್ತಮ ಅವಕಾಶವಿದೆ. ಅಂದರೆ ಪ್ರಸ್ತುತ ಅಂಕಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್ 4ನೇ ಸ್ಥಾನದಲ್ಲಿದ್ದರೆ, ಮುಂಬೈ ಹಾಗೂ ಲಕ್ನೋ ಕ್ರಮವಾಗಿ 5ನೇ ಮತ್ತು 6ನೇ ಸ್ಥಾನಗಳಲ್ಲಿದೆ.

ಇಲ್ಲಿ ಪಂಜಾಬ್ ಕಿಂಗ್ಸ್ ತಂಡದ ನೆಟ್ ರನ್ ರೇಟ್ +0.177 ಇದ್ದು, ಇದೇ ವೇಳೆ ಮುಂಬೈ ಇಂಡಿಯನ್ಸ್ ತಂಡದ ನೆಟ್ ರನ್ ರೇಟ್ +0.673 ಇದೆ. ಒಂದು ವೇಳೆ ಕೆಕೆಆರ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆದ್ದಿದ್ದರೆ ನೆಟ್ ರನ್ ರೇಟ್ ಉತ್ತಮಗೊಳ್ಳುತ್ತಿತ್ತು. ಆದರೆ ಇದೀಗ ಪಂಜಾಬ್ ಕಿಂಗ್ಸ್ ತಂಡವನ್ನು ಮುಂದಿನ ಪಂದ್ಯಗಳ ಮೂಲಕ ಹಿಂದಿಕ್ಕುವಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿಗೆ ಉತ್ತಮ ಅವಕಾಶವಿದೆ.

ಏಕೆಂದರೆ ಉಭಯ ತಂಡಗಳು ಮುಂದಿನ ಪಂಧ್ಯಗಳಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ಪ್ಲೇಆಫ್ ತಲುಪುವ ಸಾಧ್ಯತೆಗಳು ಹೆಚ್ಚಿವೆ.

 ಪಂಜಾಬ್​​ಗೆ ಪ್ಲಸ್ ಪಾಯಿಂಟ್:

ಒಂದು ವೇಳೆ ಪಂಜಾಬ್ ಕಿಂಗ್ಸ್ ತಂಡವು ಮುಂದಿನ 5 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿದರೆ 17 ಅಂಕಗಳೊಂದಿಗೆ ಸೇಫ್ ಝೋನ್​ಗೆ ತಲುಪುವ ಸಾಧ್ಯತೆಯನ್ನು ಸಹ ತಳ್ಳಿ ಹಾಕುವಂತಿಲ್ಲ. ಅಂದರೆ ಐಪಿಎಲ್​ನ ಪ್ಲೇಆಫ್ ಕಟ್ ಆಫ್ ಪಾಯಿಂಟ್ 16 ಅಂಕಗಳು. ಇದೀಗ 11 ಅಂಕಗಳನ್ನು ಹೊಂದಿರುವ ಪಂಜಾಬ್ ಪಡೆ ಮುಂದಿನ ಮೂರು ಪಂದ್ಯಗಳಲ್ಲಿ ಜಯಗಳಿಸಿದರೆ 17 ಅಂಕಗಳನ್ನು ಪಡೆದು ಪ್ಲೇಆಫ್​ಗೆ ಎಂಟ್ರಿ ಕೊಡಬಹುದು.

ಒಂದು ವೇಳೆ ಮುಂದಿನ 5 ಮ್ಯಾಚ್​ಗಳಲ್ಲಿ 2 ಗೆಲುವು ದಾಖಲಿಸಿದೂ ಪಂಜಾಬ್ ಕಿಂಗ್ಸ್ ಸೇಫ್ ಝೋನ್​ನಲ್ಲಿ ಕಾಣಿಸಿಕೊಳ್ಳಬಹುದು. ಅಂದರೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆಯುವ ತಂಡ 14 ಅಂಕಗಳನ್ನು ಪಡೆಯುವಂತಹ ಸಂದರ್ಭ ಎದುರಾದರೆ, ಇತ್ತ ಪಂಜಾಬ್ ಕಿಂಗ್ಸ್ ತಂಡವು 15 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಲು ಅವಕಾಶ ಇರುತ್ತದೆ.

ಇದನ್ನೂ ಓದಿ: IPL 2025: ಅಣ್ಣಾ ಬಿಟ್ ಬಿಡಣ್ಣ… RCB ತಂಡದಲ್ಲಿ ಎಲ್ಲವೂ ಸರಿಯಿಲ್ವಾ?

ಆದರೆ ಇದೀಗ ಎಲ್ಲಾ ತಂಡಗಳಿಗೆ ಇನ್ನೂ 5 ಪಂದ್ಯಗಳಿದ್ದು, ಹೀಗಾಗಿ ಪ್ಲೇಆಫ್​ಗೆ ಪ್ರವೇಶಿಸಲು ಪ್ರತಿಯೊಂದು ತಂಡಕ್ಕೂ ಉತ್ತಮ ಅವಕಾಶವಿದೆ. ಈ ಅವಕಾಶಗಳ ಮೂಲಕ ಯಾವ ತಂಡ ಯಾರನ್ನು ಹಿಂದಿಕ್ಕಿ ಮುಂದಿನ ಹಂತಕ್ಕೇರಲಿದೆ ಎಂಬುದನ್ನು ಕಾದು ನೋಡಬೇಕಿದೆ.