AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮಳೆಯಿಂದಾಗಿ RCB vs PBKS ಪಂದ್ಯ ರದ್ದಾದ್ರೆ ಯಾರು ಫೈನಲ್​ಗೆ?

IPL 2025 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಕಣಕ್ಕಿಳಿಯಲಿದೆ. ಹಾಗೆಯೇ ಎಲಿಮಿನೇಟರ್​ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ.

IPL 2025: ಮಳೆಯಿಂದಾಗಿ RCB vs PBKS ಪಂದ್ಯ ರದ್ದಾದ್ರೆ ಯಾರು ಫೈನಲ್​ಗೆ?
Rcb Vs Pbks
ಝಾಹಿರ್ ಯೂಸುಫ್
|

Updated on:May 29, 2025 | 10:33 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರ ಪ್ಲೇಆಫ್ ಪಂದ್ಯಗಳು ಇಂದಿನಿಂದ ಶುರುವಾಗಲಿದೆ. ಚಂಡೀಗಢ್​ನ ಮುಲ್ಲನ್​ಪುರ್​ನಲ್ಲಿ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ವೇಳೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.

ಒಂದು ವೇಳೆ ಮಳೆ ಬಂದು ಪಂದ್ಯ ರದ್ದಾದರೆ, ಯಾರು ಫೈನಲ್​ಗೆ ಎಂಬ ಪ್ರಶ್ನೆ ಮೂಡುವುದು ಸಹಜ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್​ಗೆ ಎಂಟ್ರಿ ಕೊಡಲಿದೆ. ಇನ್ನು ಸೋಲುವ ತಂಡ ಎರಡನೇ ಕ್ವಾಲಿಫೈಯರ್ ಪಂದ್ಯವಾಡಬೇಕಾಗುತ್ತದೆ.

ಆದರೆ ಇಲ್ಲಿ ಕ್ವಾಲಿಫೈಯರ್ ಹಾಗೂ ಎಲಿಮಿನೇಟರ್​ ಪಂದ್ಯಗಳಿಗೆ ಬಿಸಿಸಿಐ ಮೀಸಲು ದಿನದಾಟವನ್ನು ಘೋಷಿಸಿಲ್ಲ. ಹೀಗಾಗಿಯೇ ಇಂದಿನ ಪಂದ್ಯವು ಮಳೆಗೆ ಆಹುತಿಯಾದರೆ, ಯಾರು ಫೈನಲ್​ಗೇರಲಿದ್ದಾರೆ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ಯಾರು ಫೈನಲ್​ಗೆ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವಣ ಪಂದ್ಯವು ಮಳೆಯಿಂದಾಗಿ ರದ್ದಾದರೆ, ಅಂಕಗಳನ್ನು ಹಂಚಲಾಗುವುದಿಲ್ಲ. ಬದಲಾಗಿ ಲೀಗ್ ಹಂತದಲ್ಲಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸುವ ತಂಡ ಫೈನಲ್​ಗೆ ಅರ್ಹತೆ ಪಡೆಯಲಿದೆ.

ಈ ಬಾರಿಯ ಐಪಿಎಲ್​ನ ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆ ಪಾಯಿಂಟ್ಸ್​ ಟೇಬಲ್​ನಲ್ಲಿ ಮೊದಲ ಸ್ಥಾನ ಅಲಂಕರಿಸಿದ್ದು ಪಂಜಾಬ್ ಕಿಂಗ್ಸ್. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ದ್ವಿತೀಯ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಅಂದರೆ ಇಂದಿನ ಪಂದ್ಯವು ಮಳೆಯಿಂದಾಗಿ ರದ್ದಾದರೆ, ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ ತಂಡವು ಫೈನಲ್​ಗೆ ಅರ್ಹತೆ ಪಡೆಯಲಿದೆ.

ಹೆಚ್ಚುವರಿ 120 ನಿಮಿಷಗಳು:

ಐಪಿಎಲ್​ ಪಂದ್ಯಗಳಿಗೆ ಮಳೆ ಭೀತಿ ಎದುರಾಗಿರುವ ಕಾರಣ ಬಿಸಿಸಿಐ ಹೆಚ್ಚುವರಿ 120 ನಿಮಿಷಗಳ ಕಾಲಾವಕಾಶವನ್ನು ನೀಡಿದೆ. ಅಂದರೆ ಮಳೆಯ ನಡುವೆ ಪಂದ್ಯವನ್ನು ಆಯೋಜಿಸಲು 2 ಗಂಟೆಗಳ ಕಾಲ ಹೆಚ್ಚುವರಿ ಸಮಯ ತೆಗೆದುಕೊಳ್ಳಲಿದ್ದಾರೆ. ಇದರಿಂದಾಗಿ 9.30 ರವರೆಗೆ ಪಂದ್ಯ ಆರಂಭವಾಗದಿದ್ದರೂ ಯಾವುದೇ ಓವರ್ ಕಡಿತ ಇರುವುದಿಲ್ಲ. ಅಲ್ಲದೆ ಹೆಚ್ಚುವರಿ 120 ನಿಮಿಷಗಳ ಮೂಲಕ ಸಂಪೂರ್ಣ ಪಂದ್ಯವನ್ನು ಆಯೋಜಿಸಲಿದ್ದಾರೆ. ಅಂದರೆ 11.30 ಕ್ಕೆ ಮುಗಿಯುವ ಪಂದ್ಯವು 1.30 ರವರೆಗೆ ಆಯೋಜಿಸಲಿದ್ದಾರೆ.

ಫೈನಲ್ ಪಂದ್ಯಕ್ಕೆ ಮೀಸಲು ದಿನದಾಟ:

ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಮ್ಯಾಚ್​ಗೆ ಮೀಸಲು ದಿನದಾಟವನ್ನು ನೀಡಲಾಗುತ್ತದೆ. ಅಂದರೆ ಜೂನ್ 3 ರಂದು ಪಂದ್ಯ ನಡೆಯದಿದ್ದರೆ, ಜೂನ್ 4 ರಂದು ಮತ್ತೆ ಅಂತಿಮ ಪಂದ್ಯವನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: IPL 2025: ಪ್ಲೇಆಫ್ ಪಂದ್ಯಗಳಿಂದ 8 ಆಟಗಾರರು ಔಟ್

ಒಂದು ವೇಳೆ ಜೂನ್ 4 ರಂದು ಸಹ ಪಂದ್ಯವನ್ನು ಆಯೋಜಿಸುವಂತಹ ಪರಿಸ್ಥಿತಿ ಕಂಡು ಬರದಿದ್ದರೆ, ಜಂಟಿ ವಿಜೇತರು ಎಂದು ಘೋಷಿಸಲಾಗುತ್ತದೆ. ಅಂದರೆ ಫೈನಲ್​ಗೆ ಅರ್ಹತೆ ಪಡೆದ ಎರಡೂ ತಂಡಗಳನ್ನು ಚಾಂಪಿಯನ್ಸ್ ಎಂದು ಪರಿಗಣಿಸಲಾಗುತ್ತದೆ.

Published On - 10:32 am, Thu, 29 May 25

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?