IPL 2025: ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಮರು ಪಂದ್ಯ

IPL 2025 PBKS vs DC: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಟೂರ್ನಿಯು 58ನೇ ಪಂದ್ಯದ ಮೂಲಕ ಸ್ಥಗಿತಗೊಂಡಿದೆ. ಇದೀಗ 58ನೇ ಪಂದ್ಯದೊಂದಿಗೆ ಟೂರ್ನಿಯನ್ನು ಮರು ಆಯೋಜಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ ಎಂದು ವರದಿಯಾಗಿದೆ. ಅದರಂತೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮತ್ತೆ ಮುಖಾಮುಖಿಯಾಗಲಿದೆ.

IPL 2025: ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಮರು ಪಂದ್ಯ
Pbks Vs Dc

Updated on: May 10, 2025 | 2:08 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮುಂದಿನ ವಾರ ಮರು ನಿಗದಿಯಾಗುವ ಸಾಧ್ಯತೆಯಿದೆ. ಅದು ಕೂಡ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (PBKS vs DC) ನಡುವಣ ಪಂದ್ಯದೊಂದಿಗೆ ಎಂದು ವರದಿಯಾಗಿದೆ. ಅಂದರೆ ಧರ್ಮಶಾಲಾದಲ್ಲಿ ನಡೆದ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವನ್ನು ಅರ್ಧದಲ್ಲೇ ಸ್ಥಗಿತಗೊಳಿಸಲಾಗಿತ್ತು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ಪಂಜಾಬ್ ಕಿಂಗ್ಸ್ ತಂಡವು 10.1 ಓವರ್​ಗಳಲ್ಲಿ 122 ರನ್​ ಗಳಿಸಿದ್ದ ವೇಳೆ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು. ಇದೀಗ ಟೂರ್ನಿಯನ್ನು ಮುಂದಿನ ವಾರ ಪ್ರಾರಂಭಿಸಲು ಯೋಜನೆಗಳನ್ನು ರೂಪಿಸಲಾಗುತ್ತಿದೆ. ಇತ್ತ ಭೀತಿಯ ಕಾರಣ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯವನ್ನು ಸ್ಥಗಿತಗೊಳಿಸಿರುವ ಕಾರಣ ಈ ಮ್ಯಾಚ್​ ಅನ್ನು ಪುನಃ ಆಯೋಜಿಸಲು ಚಿಂತಿಸಲಾಗಿದೆ ಎಂದು ವರದಿಯಾಗಿದೆ.

ಅದರಂತೆ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವು ಮರು ನಿಗದಿಯಾಗುವ ಸಾಧ್ಯತೆ ಹೆಚ್ಚಿದೆ. ಅಲ್ಲದೆ ಈ ಪಂದ್ಯದೊಂದಿಗೆ ಐಪಿಎಲ್​ಗೆ ಮತ್ತೆ ಚಾಲನೆ ದೊರೆಯಲಿದೆ. ಈ ಮೂಲಕ ಲೀಗ್ ಹಂತದಲ್ಲಿ 13 ಪಂದ್ಯಗಳನ್ನು ಆಯೋಜಿಸಲು ಚಿಂತಿಸಲಾಗಿದೆ. ಇನ್ನುಳಿದ 4 ಪ್ಲೇಆಫ್ ಪಂದ್ಯಗಳ ವೇಳಾಪಟ್ಟಿ ಕೂಡ ಬದಲಾಗಲಿದೆ.

ಇದನ್ನೂ ಓದಿ
ಬೋಲ್ಡ್ ಫೋಟೋಗೆ ಬೌಲ್ಡ್ ಆಗಿ ಸ್ಪಷ್ಟನೆ ನೀಡಿದ ವಿರಾಟ್ ಕೊಹ್ಲಿ
IPL 2025: ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು
IPL 2025: ಕರುಣ್ ನಾಯರ್ ಡಕೌಟ್: ಈ ಬಾರಿ ಮುಂಬೈ ಇಂಡಿಯನ್ಸ್ ಚಾಂಪಿಯನ್ಸ್?
IPL ನಲ್ಲಿ ಬದಲಾವಣೆ: ರೌಂಡ್ ರಾಬಿನ್ ಸ್ವರೂಪ, ಒಂದು ತಂಡಕ್ಕೆ 18 ಪಂದ್ಯ

ಟೂರ್ನಿ ಯಾವಾಗ ಶುರು?

ಭಾರತದಲ್ಲಿ ಪರಿಸ್ಥಿತಿಯು ಸಹಜತೆಗೆ ಮರಳಿದರೆ, ಇಂಡಿಯನ್ ಪ್ರೀಮಿಯರ್ ಲೀಗ್​ನ 58ನೇ ಪಂದ್ಯವು ಮುಂದಿನ ವಾರದಿಂದ ಶುರುವಾಗಲಿದೆ. ಇಲ್ಲದಿದ್ದರೆ, ಟೂರ್ನಿಯನ್ನು ವಿದೇಶಕ್ಕೆ ಸ್ಥಳಾಂತರಿಸಬಹುದು. ಅಂದರೆ ಯುಎಇ ಅಥವಾ ಸೌತ್ ಆಫ್ರಿಕಾದಲ್ಲಿ ಟೂರ್ನಿಯ ಉಳಿದ ಪಂದ್ಯಗಳನ್ನು ಆಯೋಜಿಸಬಹುದು.

ಈ ಹಿಂದೆ 2020 ರಲ್ಲಿ ಮತ್ತು 2021 ರಲ್ಲಿ ಕೊರೋನಾ ಭೀತಿ ಹಿನ್ನಲೆಯಲ್ಲಿ ಐಪಿಎಲ್​ ಅನ್ನು ಯುಎಇನಲ್ಲಿ ಆಯೋಜಿಸಲಾಗಿತ್ತು. ಹಾಗೆಯೇ 2009 ರಲ್ಲಿ ಭಾರತದಲ್ಲಿನ ಸಾರ್ವತ್ರಿಕ ಚುನಾವಣೆ ನಿಮ್ಮಿತ್ತ ಟೂರ್ನಿಯ ಕೆಲ ಪಂದ್ಯಗಳನ್ನು ಸೌತ್ ಆಫ್ರಿಕಾದಲ್ಲಿ ನಡೆಸಲಾಗಿತ್ತು.

ಇದನ್ನೂ ಓದಿ: IPL 2025: ಐಪಿಎಲ್ ತಡವಾದ್ರೆ, RCB ತಂಡದ ನಾಲ್ವರು ಅಲಭ್ಯ

ಇದೀಗ ಐಪಿಎಲ್​ನ ಕೊನೆಯ ಹಂತದ ಪಂದ್ಯಗಳು ಮಾತ್ರ ಬಾಕಿಯಿವೆ. ಹೀಗಾಗಿ ಮುಂದಿನ ವಾರದಲ್ಲಿ ಟೂರ್ನಿಯನ್ನು ಎಲ್ಲಿ ಆಯೋಜಿಸಬೇಕೆಂಬುದರ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದೆ. ಭಾರತ ಮತ್ತು ಪಾಕ್ ನಡುವಣ ಉದ್ವಿಗ್ನತೆ ಕೊನೆಗೊಂಡರೆ, ಟೂರ್ನಿಯು ಭಾರತದಲ್ಲೇ ಜರುಗಲಿದ್ದು, ಇಲ್ಲದಿದ್ದರೆ ಯುಎಇ ಅಥವಾ ಸೌತ್ ಆಫ್ರಿಕಾದಲ್ಲಿ ಐಪಿಎಲ್​ನ ಕೊನೆಯ ಹಂತದ ಪಂದ್ಯಗಳು ನಡೆಯಲಿದೆ.