IPL 2025: ಪಂಜಾಬ್ಗೆ ಸತತ 2ನೇ ಜಯ; ತವರಿನಲ್ಲಿ ಸೋತ ಲಕ್ನೋ
Punjab Kings Dominate Lucknow: ಐಪಿಎಲ್ 2025 ರಲ್ಲಿ ಪಂಜಾಬ್ ಕಿಂಗ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಅದ್ಭುತ ಗೆಲುವು ಸಾಧಿಸಿದೆ. ಶ್ರೇಯಸ್ ಅಯ್ಯರ್ ಮತ್ತು ಪ್ರಭ್ಸಿಮ್ರಾನ್ ಸಿಂಗ್ ಅವರ ಅದ್ಭುತ ಬ್ಯಾಟಿಂಗ್‌ನಿಂದಾಗಿ ಪಂಜಾಬ್ ತಂಡವು ಸುಲಭ ಜಯ ಸಾಧಿಸಿತು. ಅರ್ಶ್‌ದೀಪ್ ಸಿಂಗ್ ಅವರ ಅತ್ಯುತ್ತಮ ಬೌಲಿಂಗ್‌ನಿಂದ ಲಕ್ನೋ ತಂಡವು 171 ರನ್ಗಳನ್ನು ಗಳಿಸಲಷ್ಟೇ ಶಕ್ತವಾಯಿತು. ಈ ಗುರಿಯನ್ನು ಪಂಜಾಬ್ ಸುಲಭವಾಗಿ ಬೆನ್ನಟ್ಟಿತು.

ಐಪಿಎಲ್ 2025 (IPL 2025) ರಲ್ಲಿ ಪಂಜಾಬ್ ಕಿಂಗ್ಸ್ (Punjab Kings) ಮತ್ತೊಮ್ಮೆ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಟೂರ್ನಿಯಲ್ಲಿ ಸತತ 2ನೇ ಗೆಲುವು ದಾಖಲಿಸಿದೆ. ನಾಯಕ ಬದಲಾದ ತಕ್ಷಣ, ತಂಡದ ಪ್ರದರ್ಶನದಲ್ಲೂ ಬದಲಾವಣೆ ಕಂಡುಬರುತ್ತಿದೆ. ಶ್ರೇಯಸ್ ಅಯ್ಯರ್ ಅವರ ನಾಯಕತ್ವದ ಇನ್ನಿಂಗ್ಸ್ ಮತ್ತು ಪ್ರಭ್ಸಿಮ್ರಾನ್ ಅವರ ಬಿರುಗಾಳಿಯ ಅರ್ಧಶತಕದ ಬಲದಿಂದ, ಪಂಜಾಬ್ ಕಿಂಗ್ಸ್ ತಂಡವು, ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಅವರ ತವರು ನೆಲದಲ್ಲಿ ಏಕಪಕ್ಷೀಯವಾಗಿ ಸೋಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ 171 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಪಂಜಾಬ್ ತಂಡ ಕೇವಲ 16.2 ಓವರ್‌ಗಳಲ್ಲಿ ಜಯದ ನಗೆ ಬೀರಿತು.
ಪ್ರಮುಖ ಬ್ಯಾಟರ್ಗಳ ವೈಫಲ್ಯ
ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ತಂಡ ಅರ್ಶ್‌ದೀಪ್ ಸಿಂಗ್ ಮಾರಕ ಬೌಲಿಂಗ್ ಮುಂದೆ ಸಂಪೂರ್ಣ ಶರಣಾಯಿತು. ನಿಯಮಿತ ಅಂತರದಲ್ಲಿ ವಿಕೆಟ್ ಕಳೆದುಕೊಳ್ಳುತ್ತ ಸಾಗಿದ ಲಕ್ನೋ, 20 ಓವರ್‌ಗಳಲ್ಲಿ ಏಳು ವಿಕೆಟ್‌ಗಳನ್ನು ಕಳೆದುಕೊಂಡು 172 ರನ್‌ಗಳ ಗುರಿಯನ್ನು ನೀಡಿತು. ತಂಡದ ಪರ ನಿಕೋಲಸ್ ಪೂರನ್ 44 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಇವರಲ್ಲದೆ, ಆಯುಷ್ ಬಡೋನಿ 41, ಐಡೆನ್ ಮಾರ್ಕ್ರಾಮ್ 28, ಅಬ್ದುಲ್ ಸಮದ್ 27 ಮತ್ತು ಡೇವಿಡ್ ಮಿಲ್ಲರ್ 19 ರನ್ ಗಳಿಸಿದರು. ಇವರನ್ನು ಹೊರತುಪಡಿಸಿ ಮಿಚೆಲ್ ಮಾರ್ಷ್ ಮತ್ತು ಆವೇಶ್ ಖಾನ್ ಖಾತೆ ತೆರೆಯಲು ಸಹ ಸಾಧ್ಯವಾಗಲಿಲ್ಲ. ಲಕ್ನೋ ಪರ ಅರ್ಶ್‌ದೀಪ್ ಮೂರು ವಿಕೆಟ್ ಪಡೆದರೆ, ಲಾಕಿ ಫರ್ಗುಸನ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕೊ ಜಾನ್ಸೆನ್ ಮತ್ತು ಯುಜ್ವೇಂದ್ರ ಚಾಹಲ್ ತಲಾ ಒಂದು ವಿಕೆಟ್ ಪಡೆದರು.
IPL 2025: ಬೆಂಗಳೂರಿನಲ್ಲಿ ಆರ್ಸಿಬಿ ಪ್ಲೇಯಿಂಗ್ 11 ಬದಲಾಗುತ್ತಾ? ಗುಜರಾತ್ ತಂಡ ಹೇಗಿರಲಿದೆ?
ಪ್ರಭ್ಸಿಮ್ರಾನ್ ಮತ್ತು ಶ್ರೇಯಸ್ ಅಬ್ಬರ
172 ರನ್‌ಗಳ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ತಂಡದ ಆರಂಭ ಕಳಪೆಯಾಗಿತ್ತು. ಪ್ರಿಯಾಂಶ್ ಆರ್ಯ ಕೇವಲ 8 ರನ್ ಗಳಿಸಿ ಔಟಾದರು. ಆದರೆ ಆ ನಂತರ ಪ್ರಭ್ಸಿಮ್ರಾನ್ ಮತ್ತು ಶ್ರೇಯಸ್ ಅಯ್ಯರ್ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿ ಲಕ್ನೋ ತಂಡವನ್ನು ಆರಂಭದಲ್ಲೇ ಪಂದ್ಯದಿಂದ ಹೊರಗಟ್ಟಿದರು. ಇಬ್ಬರೂ ಬ್ಯಾಟ್ಸ್‌ಮನ್‌ಗಳು ಎರಡನೇ ವಿಕೆಟ್‌ಗೆ 84 ರನ್‌ಗಳ ಜೊತೆಯಾಟ ನಡೆಸಿದರು. ಪ್ರಭ್ಸಿಮ್ರನ್ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಅಂತಿಮವಾಗಿ 34 ಎಸೆತಗಳಲ್ಲಿ 69 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಪ್ರಭ್ ಅವರ ಇನ್ನಿಂಗ್ಸ್ನಲ್ಲಿ 3 ಸಿಕ್ಸರ್ ಮತ್ತು 9 ಬೌಂಡರಿಗಳು ಸೇರಿದ್ದವು. ಇದಾದ ನಂತರ ನಾಯಕ ಶ್ರೇಯಸ್ ಅಯ್ಯರ್ 30 ಎಸೆತಗಳಲ್ಲಿ 4 ಸಿಕ್ಸರ್ ಮತ್ತು 3 ಬೌಂಡರಿಗಳ ಸಹಾಯದಿಂದ ಅಜೇಯ 52 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ನಾಲ್ಕನೇ ಕ್ರಮಾಂಕದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದ ನೆಹಾಲ್ ವಧೇರಾ ಕೂಡ ಕೇವಲ 25 ಎಸೆತಗಳಲ್ಲಿ ಅಜೇಯ 43 ರನ್ ಗಳಿಸಿದರು. ಅವರ ಇನ್ನಿಂಗ್ಸ್ನಲ್ಲೂ 4 ಸಿಕ್ಸರ್ ಮತ್ತು 3 ಬೌಂಡರಿಗಳು ಸೇರಿದ್ದವು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ