IPL 2025 Qualifier 1: ಟಾಸ್ ಗೆದ್ದ ಆರ್‌ಸಿಬಿ; ಆನೆ ಬಲ ತಂದ ಹೇಜಲ್‌ವುಡ್ ಆಗಮನ
IPL 2025 Qualifier 1, PBKS vs RCB: ಮೇ 29 ರಂದು ಮುಲ್ಲನ್‌ಪುರದಲ್ಲಿ ನಡೆಯುತ್ತಿರುವ ಐಪಿಎಲ್ 2025 ರ ಮೊದಲ ಅರ್ಹತಾ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಗೆಲುವು ಫೈನಲ್‌ಗೆ ನೇರ ಪ್ರವೇಶ ಖಚಿತಪಡಿಸುತ್ತದೆ. ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿದ್ದಾರೆ.

ಐಪಿಎಲ್ 2025 (IPL 2025) ರ ಮೊದಲ ಅರ್ಹತಾ ಪಂದ್ಯ ಇಂದು ಅಂದರೆ ಮೇ 29 ರ ಗುರುವಾರದಂದು ನಡೆಯುತ್ತಿದೆ. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) ತಂಡವನ್ನು ಎದುರಿಸುತ್ತಿದೆ. ಈ ಪಂದ್ಯವನ್ನು ಮುಲ್ಲನ್‌ಪುರದ ಮಹಾರಾಜ ಯದ್ವಿಂದರ್ ಸಿಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಲಿದೆ. ಆದ್ದರಿಂದ ಸೋತ ತಂಡಕ್ಕೆ ಫೈನಲ್ ತಲುಪಲು ಮತ್ತೊಂದು ಅವಕಾಶ ಸಿಗುತ್ತದೆ. ಪಂಜಾಬ್ ಮತ್ತು ಆರ್‌ಸಿಬಿ ಎರಡೂ ತಂಡಗಳು ಅಗ್ರ 2 ರಲ್ಲಿರುವುದರಿಂದ, ಫೈನಲ್ ತಲುಪಲು ಅವರಿಗೆ 1 ಹೆಚ್ಚುವರಿ ಅವಕಾಶ ಸಿಗುತ್ತದೆ. ಆದಾಗ್ಯೂ ಉಭಯ ತಂಡಗಳು ಮೊದಲ ಪ್ರಯತ್ನದಲ್ಲೇ ಫೈನಲ್ಗೇರಲು ಬಯಸುತ್ತಿವೆ. ಅದರಂತೆ ವಿಭಿನ್ನ ತಂತ್ರದೊಂದಿಗೆ ಕಣಕ್ಕಿಳಿಯುತ್ತಿವೆ.
ಟಾಸ್ ಗೆದ್ದ ಆರ್‌ಸಿಬಿ
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಾಡಿದರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಸಂತಸದ ಸುದ್ದಿಯೆಂದರೆ ಕ್ವಾಲಿಫೈಯರ್ -1 ರಲ್ಲಿ ಆರ್‌ಸಿಬಿಯನ್ನು ರಜತ್ ಪಾಟಿದಾರ್ ಮುನ್ನಡೆಸುತ್ತಿದ್ದಾರೆ. ಈ ಪಂದ್ಯದಲ್ಲಿ ಜೋಶ್ ಹೇಜಲ್‌ವುಡ್ ತಂಡಕ್ಕೆ ಮರಳಿರುವುದು ಕೂಡ ತಂಡಕ್ಕೆ ಆನೆ ಬಲ ತಂದುಕೊಟ್ಟಿದೆ. ಹೇಜಲ್‌ವುಡ್ ಆಗಮನದಿಂದಾಗಿ ನುವಾನ್ ತುಷಾರ ತಂಡದಿಂದ ಹೊರಬಿದ್ದಿದ್ದಾರೆ. ಅದೇ ಸಮಯದಲ್ಲಿ, ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಅವರು ಮಾರ್ಕೊ ಯಾನ್ಸೆನ್ ಬದಲಿಗೆ ಅಜ್ಮತುಲ್ಲಾ ಉಮರ್‌ಜೈ ಅವರನ್ನು ತಂಡಕ್ಕೆ ಸೇರಿಸಿಕೊಂಡಿರುವುದಾಗಿ ಮಾಹಿತಿ ನೀಡಿದರು.
RCB vs PBKS Live Score, IPL 2025: ಪಂಜಾಬ್ ವಿರುದ್ಧ ಟಾಸ್ ಗೆದ್ದ ಆರ್‌ಸಿಬಿ
ಉಭಯ ತಂಡಗಳು
ಪಂಜಾಬ್ ಕಿಂಗ್ಸ್: ಪ್ರಿಯಾಂಶ್ ಆರ್ಯ, ಪ್ರಭಾಸಿಮ್ರಾನ್ ಸಿಂಗ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೋನಿಸ್, ಅಜ್ಮತುಲ್ಲಾ ಉಮರ್ಜಾಯ್, ಹರ್‌ಪ್ರೀತ್ ಬ್ರಾರ್, ಅರ್ಷ್‌ದೀಪ್ ಸಿಂಗ್, ಕೈಲ್ ಜೇಮಿಸನ್.
ಇಂಪ್ಯಾಕ್ಟ್ ಪ್ಲೇಯರ್: ವಿಜಯ್‌ಕುಮಾರ್ ವೈಶಾಕ್, ಪ್ರವೀಣ್ ದುಬೆ, ಸೂರ್ಯಾಂಶ್ ಶೆಡ್ಗೆ, ಮುಶೀರ್ ಖಾನ್, ಕ್ಸೇವಿಯರ್ ಬಾರ್ಟ್ಲೆಟ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಿಲಿಪ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರೊಮಾರಿಯೊ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಲ್, ಜೋಶ್ ಹೇಜಲ್‌ವುಡ್, ಸುಯಾಶ್ ಶರ್ಮಾ.
ಇಂಪ್ಯಾಕ್ಟ್ ಪ್ಲೇಯರ್: ಮಯಾಂಕ್ ಅಗರ್ವಾಲ್, ರಸಿಖ್ ಸಲಾಂ, ಮನೋಜ್ ಭಾಂಡಗೆ, ಟಿಮ್ ಸೀಫರ್ಟ್, ಸ್ವಪ್ನಿಲ್ ಸಿಂಗ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:19 pm, Thu, 29 May 25
