
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಚಂಡೀಗಢ್ನ ಮುಲ್ಲನ್ಪುರ್ನಲ್ಲಿ ನಡೆಯಲಿರುವ ಪ್ಲೇಆಫ್ ಸುತ್ತಿನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈ ಮ್ಯಾಚ್ನಲ್ಲಿ ಗೆದ್ದ ತಂಡ ಫೈನಲ್ಗೆ ಎಂಟ್ರಿ ಕೊಡಲಿದೆ. ಹೀಗಾಗಿ ಈ ಪಂದ್ಯಕ್ಕಾಗಿ ಆರ್ಸಿಬಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನು ಕಣಕ್ಕಿಳಿಸುವುದು ಖಚಿತ. ಅದಕ್ಕಾಗಿ ಆರ್ಸಿಬಿ ತನ್ನ ಆಡುವ ಬಳಗದಲ್ಲಿ 2 ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.
ಏಕೆಂದರೆ ಭುಜದ ನೋವಿನ ಕಾರಣ ಕಳೆದ ಕೆಲ ಪಂದ್ಯಗಳಿಂದ ಹೊರಗುಳಿದಿದ್ದ ಜೋಶ್ ಹೇಝಲ್ವುಡ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ನುವಾನ್ ತುಷಾರ ಪ್ಲೇಯಿಂಗ್ ಇಲೆವೆನ್ನಿಂದ ಹೊರಬೀಳಬಹುದು.
ಹಾಗೆಯೇ ಮುಂದಿನ ಪಂದ್ಯಕ್ಕೂ ಮುನ್ನ ಟಿಮ್ ಡೇವಿಡ್ ಸಂಪೂರ್ಣ ಫಿಟ್ ಆದರೆ, ಲಿಯಾಮ್ ಲಿವಿಂಗ್ಸ್ಟೋನ್ ಆಡುವ ಬಳಗದಿಂದ ಹೊರಗುಳಿಯಲಿದ್ದಾರೆ. ಒಂದು ವೇಳೆ ಟಿಮ್ ಡೇವಿಡ್ ಫಿಟ್ ಅಲ್ಲದಿದ್ದರೆ, ಟಿಮ್ ಸೈಫರ್ಟ್ಗೆ ಅವಕಾಶ ಸಿಗುವ ಸಾಧ್ಯತೆಯಿದೆ.
ಏಕೆಂದರೆ ಲಿಯಾಮ್ ಲಿವಿಂಗ್ಸ್ಟೋನ್ ಆರ್ಸಿಬಿ ಪರ 8 ಪಂದ್ಯಗಳನ್ನಾಡಿದ್ದು, ಈ ವೇಳೆ ಕಲೆಹಾಕಿರುವುದು ಕೇವಲ 87 ರನ್ಗಳು ಮಾತ್ರ. ಅದರಲ್ಲೂ ಎಲ್ಎಸ್ಜಿ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ್ದರು. ಹೀಗಾಗಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಿಂದ ಲಿವಿಂಗ್ಸ್ಟೋನ್ ಅವರನ್ನು ಕೈ ಬಿಡುವುದು ಖಚಿತ ಎನ್ನಬಹುದು.
ಇನ್ನುಳಿದಂತೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದ ಆಟಗಾರರೇ ಪಂಜಾಬ್ ಕಿಂಗ್ಸ್ ವಿರುದ್ಧ ಕೂಡ ಆಡಲಿದ್ದಾರೆ. ಅದರಂತೆ ಆರಂಭಿಕರಾಗಿ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಕಣಕ್ಕಿಳಿಯಲಿದ್ದಾರೆ. ಇನ್ನು ಟಿಮ್ ಡೇವಿಡ್ ಫಿಟ್ ಆಗಿರದಿದ್ದರೆ, ಮೂರನೇ ಕ್ರಮಾಂಕದಲ್ಲಿ ಟಿಮ್ ಸೈಫರ್ಟ್ ಅವರನ್ನು ಕಣಕ್ಕಿಳಿಸಬಹುದು.
ಇದನ್ನೂ ಓದಿ: ಕ್ರಿಕೆಟ್ ನಿಯಮವೇ ಗೊತ್ತಿಲ್ದೆ ಕ್ರೀಡಾ ಸ್ಫೂರ್ತಿ ಮೆರೆಯುತ್ತಿರುವ ಕ್ರಿಕೆಟಿಗರು
ನಾಲ್ಕನೇ ಕ್ರಮಾಂಕದಲ್ಲಿ ರಜತ್ ಪಾಟಿದಾರ್ ಹಾಗೂ ಐದನೇ ಕ್ರಮಾಂಕದಲ್ಲಿ ಮಯಾಂಕ್ ಅಗರ್ವಾಲ್ ಬ್ಯಾಟ್ ಬೀಸಲಿದ್ದಾರೆ. ಇನ್ನು ಆರನೇ ಕ್ರಮಾಂಕದಲ್ಲಿ ಕೃನಾಲ್ ಪಾಂಡ್ಯ ಕಾಣಿಸಿಕೊಂಡರೆ, ಫಿನಿಶರ್ ಪಾತ್ರ ರೊಮಾರಿಯೊ ಶೆಫರ್ಡ್ ಕಣಕ್ಕಿಳಿಯಲಿದ್ದಾರೆ. ಇನ್ನು ಬೌಲರ್ಗಳಾಗಿ ಜೋಶ್ ಹೇಝಲ್ವುಡ್, ಯಶ್ ದಯಾಳ್ ಹಾಗೂ ಭುವನೇಶ್ವರ್ ಕುಮಾರ್ ಕಣಕ್ಕಿಳಿಯುವುದು ಖಚಿತ. ಅದರಂತೆ ಆರ್ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ…