AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ದ್ರಾವಿಡ್ ಕೋಚ್: ವರದಿ

Rahul Dravid: ರಾಹುಲ್ ದ್ರಾವಿಡ್ ಐಪಿಎಲ್​ನಲ್ಲಿ ಏಕೈಕ ತಂಡದ ಪರ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಅದು ಕೂಡ ರಾಜಸ್ಥಾನ್ ರಾಯಲ್ಸ್ ಪರ ಎಂಬುದು ವಿಶೇಷ. ಇದೀಗ ಟೀಮ್ ಇಂಡಿಯಾವನ್ನು ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟಕ್ಕೇರಿಸಿರುವ ರಾಹುಲ್ ದ್ರಾವಿಡ್ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಿಕೊಳ್ಳಲು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಆಸಕ್ತಿ ಹೊಂದಿದೆ.

IPL 2025: ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ದ್ರಾವಿಡ್ ಕೋಚ್: ವರದಿ
Rahul Dravid
ಝಾಹಿರ್ ಯೂಸುಫ್
|

Updated on:Jul 23, 2024 | 9:51 AM

Share

ಟೀಮ್ ಇಂಡಿಯಾದ ಮಾಜಿ ಆಟಗಾರ ರಾಹುಲ್ ದ್ರಾವಿಡ್ (Rahul Dravid) ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗುವ ಸಾಧ್ಯತೆಯಿದೆ. ಈ ಬಗ್ಗೆ ಆರ್​ಆರ್ ಫ್ರಾಂಚೈಸಿ ಹಾಗೂ ದ್ರಾವಿಡ್ ನಡುವೆ ಮಾತುಕತೆ ನಡೆದಿದ್ದು, ಶೀಘ್ರದಲ್ಲೇ ಅಂತಿಮ ನಿರ್ಧಾರ ಪ್ರಕಟವಾಗಲಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ರಾಹುಲ್ ದ್ರಾವಿಡ್ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಿಕೊಳ್ಳಲು ಆಸಕ್ತಿ ಹೊಂದಿದೆ. ಈ ಬಗ್ಗೆ ಮಾತುಕತೆಯನ್ನು ಸಹ ನಡೆಸಿದ್ದಾರೆ. ಈ ಮಾತುಕತೆಯು ಅಂತಿಮ ಹಂತದಲ್ಲಿದ್ದು, ದ್ರಾವಿಡ್ ಕಡೆಯಿಂದ ಗ್ರೀನ್ ಸಿಗ್ನಲ್​ಗಾಗಿ ಆರ್​ಆರ್ ಫ್ರಾಂಚೈಸಿ ಕಾಯುತ್ತಿದೆ. ಹೀಗಾಗಿ ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಲಿದ್ದಾರಾ ಎಂಬುದರ ಸ್ಪಷ್ಟ ಮಾಹಿತಿ ಕೆಲವೇ ದಿನಗಳಲ್ಲಿ ಹೊರಬೀಳುವ ಸಾಧ್ಯತೆಯಿದೆ.

RR ತಂಡದ ಮಾಜಿ ನಾಯಕ:

ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ಮಾಜಿ ನಾಯಕ ಎಂಬುದು ವಿಶೇಷ. 2011 ರಿಂದ 2013ರವರೆಗೆ ಅವರು ಆರ್​ಆರ್ ತಂಡವನ್ನು ಮುನ್ನಡೆಸಿದ್ದರು. ಈ ವೇಳೆ 46 ಪಂದ್ಯಗಳನ್ನಾಡಿರುವ ದ್ರಾವಿಡ್ 7 ಅರ್ಧಶತಕಗಳೊಂದಿಗೆ 1276 ರನ್ ಕಲೆಹಾಕಿದ್ದರು.

ಇದಾದ ಬಳಿಕ 2014 ಮತ್ತು 2015 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಮೆಂಟರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಇದೀಗ ತನ್ನ ಮಾಜಿ ಆಟಗಾರರನ್ನೇ ಮುಖ್ಯ ಕೋಚ್ ಆಗಿ ನೇಮಿಸಿಕೊಳ್ಳಲು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಆಸಕ್ತಿ ಹೊಂದಿದೆ.

ರಾಜಸ್ಥಾನ್ ರಾಯಲ್ಸ್ ತಂಡದ ಈಗಿನ ಕೋಚ್ ಯಾರು?

ಶ್ರೀಲಂಕಾದ ಮಾಜಿ ಆಟಗಾರ ಕುಮಾರ ಸಂಗಕ್ಕಾರ ರಾಜಸ್ಥಾನ್ ರಾಯಲ್ಸ್ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಅವರು ಕೋಚ್ ಹುದ್ದೆಗಾಗಿ ನೇಮಕವಾಗಿರಲಿಲ್ಲ ಎಂಬುದು ವಿಶೇಷ. ಅಂದರೆ 2021 ರಲ್ಲಿ ಸಂಗಕ್ಕಾರ ರಾಜಸ್ಥಾನ್ ರಾಯಲ್ಸ್​ನ ನಿರ್ದೇಶಕರಾಗಿ ಆಯ್ಕೆಯಾಗಿದ್ದರು.

ಅದೇ ವರ್ಷ ಮುಖ್ಯ ಕೋಚ್ ಹುದ್ದೆಯಿಂದ ಆಂಡ್ರ್ಯೂ ಮೆಕ್​ ಡೊನಾಲ್ಡ್ ಹೊರನಡೆದಿದ್ದರಿಂದ ಕುಮಾರ ಸಂಗಕ್ಕಾರ ಆರ್​ಆರ್ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಲಾರಂಭಿಸಿದ್ದರು.

ಸಂಗಕ್ಕಾರ ಮುಂದಾಳತ್ವದಲ್ಲಿ 2022 ರಲ್ಲಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಫೈನಲ್​ಗೆ ಪ್ರವೇಶಿಸಿತ್ತು. ಹಾಗೆಯೇ ಐಪಿಎಲ್ 2024 ರಲ್ಲಿ ಆರ್​ಆರ್ ತಂಡವು ಪ್ಲೇಆಫ್​ ಆಡಿತ್ತು ಎಂಬುದು ವಿಶೇಷ.

ಇದನ್ನೂ ಓದಿ: IPL 2025: ಮುಂಬೈ ಇಂಡಿಯನ್ಸ್ ತಂಡಕ್ಕೆ ಸೂರ್ಯಕುಮಾರ್ ಯಾದವ್ ಗುಡ್ ಬೈ?

ಇದೀಗ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಟೀಮ್ ಇಂಡಿಯಾದ ಯಶಸ್ವಿ ಕೋಚ್ ಅನ್ನು ಮುಖ್ಯ ಕೋಚ್ ಆಗಿ ನೇಮಿಸಿಕೊಳ್ಳಲು ಮುಂದಾಗಿದೆ. ಅದರಂತೆ ಐಪಿಎಲ್ ಸೀಸನ್-18 ರಲ್ಲಿ ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ಜೊತೆ ಕಾಣಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

Published On - 9:51 am, Tue, 23 July 24

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ