
ಐಪಿಎಲ್ 2025 ರ (IPL 2025) 52 ನೇ ಪಂದ್ಯವು ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ (RCB vs CSK) ನಡುವೆ ನಡೆಯಲಿದೆ. ಈ ಪಂದ್ಯ ಆರ್ಸಿಬಿಯ ತವರು ಮೈದಾನವಾದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈಗಾಗಲೇ ಟೂರ್ನಿಯಲ್ಲಿ ಏಳು ಗೆಲುವುಗಳೊಂದಿಗೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್‌ಗೆ ಅರ್ಹತೆ ಪಡೆಯುವ ಸಮೀಪದಲ್ಲಿದೆ. ಇದರ ಜೊತೆಗೆ ತವರಿನಲ್ಲಿ ಸತತ 3 ಪಂದ್ಯಗಳ ಸೋಲಿನ ಸರಣಿಯನ್ನು ಕಳೆದ ಪಂದ್ಯದಲ್ಲಿ ಮುರಿದಿದ್ದ ಆರ್ಸಿಬಿ, ಇದೀಗ ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸುತ್ತ ಎಂಬುದನ್ನು ಕಾದುನೋಡಬೇಕಾಗಿದೆ. ಇತ್ತ ಆಡಿರುವ 10 ಪಂದ್ಯಗಳಲ್ಲಿ 8 ಪಂದ್ಯಗಳನ್ನು ಸೋತಿರುವ ಸಿಎಸ್ಕೆ ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿರುವ ಕಾರಣ ಈ ಪಂದ್ಯ ಅವರಿಗೆ ಕೇವಲ ಔಪಚಾರಿಕವಾಗಿದೆ.
ಆರ್ಸಿಬಿ ಹಾಗೂ ಸಿಎಸ್ಕೆ ನಡುವಿನ ಐಪಿಎಲ್ 52ನೇ ಪಂದ್ಯ ಮೇ 3 ರಂದು ನಡೆಯಲಿದೆ.
ಆರ್ಸಿಬಿ ಹಾಗೂ ಸಿಎಸ್ಕೆ ನಡುವಿನ ಐಪಿಎಲ್ 52ನೇ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಆರ್ಸಿಬಿ ಹಾಗೂ ಸಿಎಸ್ಕೆ ನಡುವಿನ ಐಪಿಎಲ್ 52ನೇ ಪಂದ್ಯ ರಾತ್ರಿ 7:30 ಕ್ಕೆ ಆರಂಭವಾಗಲಿದೆ.
ಆರ್ಸಿಬಿ ಹಾಗೂ ಸಿಎಸ್ಕೆ ನಡುವಿನ ಐಪಿಎಲ್ 52ನೇ ಪಂದ್ಯವನ್ನು ಜಿಯೋ ಹಾಟ್‌ಸ್ಟಾರ್ ಹಾಗೂ ಸ್ಟಾರ್ ಸ್ಪೊರ್ಟ್ಸ್ ನೆಟ್ವರ್ಕ್ನ ವಿವಿಧ ಚಾನೆಲ್‌ಗಳಲ್ಲಿ ವೀಕ್ಷಿಸಬಹುದಾಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ (ನಾಯಕ), ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಲ್, ಸುಯಾಶ್ ಶರ್ಮಾ, ಲುಂಗಿ ಎನ್‌ಗಿಡಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ವಪ್ನಿಲ್ ಸಿಂಗ್, ಮನೋಜ್ ಭಾಂಡಗೆ, ರಸಿಖ್ ದಾರ್ ಸಲಾಂ, ನುವಾನ್ ತುಷಾರ, ಜಾಕೋಬ್ ಬೆಥೆಲ್, ಮೋಹಿತ್ ರಾಠಿ, ಸ್ವಸ್ತಿಕ್ ಚಿಕಾರಾ, ಅಭಿನಂದನ್ ಸಿಂಗ್.
ಚೆನ್ನೈ ಸೂಪರ್ ಕಿಂಗ್ಸ್: ಎಂಎಸ್ ಧೋನಿ (ನಾಯಕ, ವಿಕೆಟ್ ಕೀಪರ್), ಶೇಖ್ ರಶೀದ್, ಆಯುಷ್ ಮ್ಹಾತ್ರೆ, ದೀಪಕ್ ಹೂಡಾ, ಸ್ಯಾಮ್ ಕರನ್, ರವೀಂದ್ರ ಜಡೇಜಾ, ಡೆವಾಲ್ಡ್ ಬ್ರೆವಿಸ್, ಶಿವಂ ದುಬೆ, ನೂರ್ ಅಹ್ಮದ್, ಖಲೀಲ್ ಅಹ್ಮದ್, ಮತಿಶಾ ಪತಿರಾನ, ಅಂಶುಲ್ ಕಾಂಬೋಜ್, ಆರ್ ಅಶ್ವಿನ್, ಕಮಲೇಶ್ ನಾಗರಕೋಟಿ, ರಾಮಕೃಷ್ಣ ಘೋಷ್, ಜೇಮಿ ಓವರ್‌ಟನ್, ವಿಜಯ್ ಶಂಕರ್, ರಾಹುಲ್ ತ್ರಿಪಾಠಿ, ಶ್ರೇಯಸ್ ಗೋಪಾಲ್, ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಮುಖೇಶ್ ಚೌಧರಿ, ನಾಥನ್ ಎಲ್ಲಿಸ್, ಸಿ ಆಂಡ್ರೆ ಸಿದ್ಧಾರ್ಥ್, ವಂಶ್ ಬೇಡಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ