IPL 2025: RCB ಪ್ಲೇಯಿಂಗ್​ ಇಲೆವೆನ್​ನಲ್ಲಿ 2 ಬದಲಾವಣೆ ಖಚಿತ

IPL 2025 RCB vs LSG: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಸೀಸನ್-18 ರಲ್ಲಿ ಈವರೆಗೆ 11 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಮೂರು ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಲಿದೆ. ಅಲ್ಲದೆ ಮೊದಲ ಕ್ವಾಲಿಫೈಯರ್ ಪಂದ್ಯವಾಡಲು ಅರ್ಹತೆ ಪಡೆಯಲಿದೆ.

IPL 2025: RCB ಪ್ಲೇಯಿಂಗ್​ ಇಲೆವೆನ್​ನಲ್ಲಿ 2 ಬದಲಾವಣೆ ಖಚಿತ
RCB

Updated on: May 08, 2025 | 1:54 PM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 59ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡವು 2 ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ದೇವದತ್ ಪಡಿಕ್ಕಲ್ ಗಾಯದ ಕಾರಣ ಟೂರ್ನಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಈ ಭಾರಿ ಪಡಿಕ್ಕಲ್ ಬದಲಿಗೆ ಮತ್ತೋರ್ವ ಆಟಗಾರನ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುವುದು ಖಚಿತ.

ಇಲ್ಲಿ ಆರ್​ಸಿಬಿ ತಂಡದ ಆರಂಭಿಕರಾಗಿ ಜೇಕಬ್ ಬೆಥೆಲ್ ಹಾಗೂ ವಿರಾಟ್ ಕೊಹ್ಲಿ ಮುಂದುವರೆಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ರಜತ್ ಪಾಟಿದಾರ್ ಕಣಕ್ಕಿಳಿಯುವ ಸಾಧ್ಯತೆಯಿದೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಮಯಾಂಕ್ ಅಗರ್ವಾಲ್​ಗೆ ಚಾನ್ಸ್ ನೀಡಬಹುದು.

ಇನ್ನು ಐದನೇ ಕ್ರಮಾಂಕದಲ್ಲಿ ಕೃನಾಲ್ ಪಾಂಡ್ಯ ಕಣಕ್ಕಿಳಿದರೆ, ಆರನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಕಾಣಿಸಿಕೊಳ್ಳಬಹುದು. ಇನ್ನುಳಿದಂತೆ 7ನೇ ಮತ್ತು 8ನೇ ಕ್ರಮಾಂಕಗಳಲ್ಲಿ ಟಿಮ್ ಡೇವಿಡ್ ಹಾಗೂ ರೊಮಾರಿಯೊ ಶೆಫರ್ಡ್ ಕಣಕ್ಕಿಳಿಯುವುದು ಖಚಿತ.

ಇದನ್ನೂ ಓದಿ
ಬೋಲ್ಡ್ ಫೋಟೋಗೆ ಬೌಲ್ಡ್ ಆಗಿ ಸ್ಪಷ್ಟನೆ ನೀಡಿದ ವಿರಾಟ್ ಕೊಹ್ಲಿ
IPL 2025: ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು
IPL 2025: ಕರುಣ್ ನಾಯರ್ ಡಕೌಟ್: ಈ ಬಾರಿ ಮುಂಬೈ ಇಂಡಿಯನ್ಸ್ ಚಾಂಪಿಯನ್ಸ್?
IPL ನಲ್ಲಿ ಬದಲಾವಣೆ: ರೌಂಡ್ ರಾಬಿನ್ ಸ್ವರೂಪ, ಒಂದು ತಂಡಕ್ಕೆ 18 ಪಂದ್ಯ

ಹಾಗೆಯೇ ಬೌಲರ್​ಗಳಾಗಿ ಭುವನೇಶ್ವರ್ ಕುಮಾರ್ ಹಾಗೂ ಯಶ್ ದಯಾಳ್ ಪ್ಲೇಯಿಂಗ್ ಇಲೆವೆನ್​ನಲ್ಲಿರಲಿದ್ದಾರೆ. ಇನ್ನು ಕಳೆದ ಪಂದ್ಯದ ವೇಳೆ ಭುಜದ ನೋವಿನ ಕಾರಣ ವಿಶ್ರಾಂತಿ ಪಡೆದಿದ್ದ ಜೋಶ್ ಹ್ಯಾಝಲ್​ವುಡ್ ಸಂಪೂರ್ಣ ಫಿಟ್​ನೆಸ್ ಸಾಧಿಸಿದ್ದರೆ, ಲುಂಗಿ ಎನ್​ಗಿಡಿ ಬದಲಿಗೆ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಇಂಪ್ಯಾಕ್ಟ್ ಸಬ್ ಆಗಿ ಸುಯಶ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  1. ವಿರಾಟ್ ಕೊಹ್ಲಿ
  2. ಜೇಕಬ್ ಬೆಥೆಲ್
  3. ರಜತ್ ಪಾಟಿದಾರ್
  4. ಮಯಾಂಕ್ ಅಗರ್ವಾಲ್
  5. ಕೃನಾಲ್ ಪಾಂಡ್ಯ
  6. ಜಿತೇಶ್ ಶರ್ಮಾ
  7. ಟಿಮ್ ಡೇವಿಡ್
  8. ರೊಮಾರಿಯೊ ಶೆಫರ್ಡ್
  9. ಭುವನೇಶ್ವರ್ ಕುಮಾರ್
  10. ಯಶ್ ದಯಾಳ್
  11. ಜೋಶ್ ಹ್ಯಾಝಲ್​ವುಡ್.

ಇದನ್ನೂ ಓದಿ: IPL 2025: ಈ 4 ತಂಡಗಳು ಪ್ಲೇಆಫ್​ ಆಡುವುದು ಖಚಿತ ಎಂದ ಮಾರ್ಕ್​ ಬೌಚರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ಮಯಾಂಕ್ ಅಗರ್ವಾಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಝಲ್‌ವುಡ್, ಯಶ್ ದಯಾಳ್, ಸುಯಶ್ ಶರ್ಮಾ, ಸ್ವಪ್ನಿಲ್ ಸಿಂಗ್, ರಾಸಿಖ್ ದರ್ ಸಲಾಮ್, ಜೇಕಬ್ ಬೆಥೆಲ್, ರೊಮಾರಿಯೊ ಶೆಫರ್ಡ್, ಲುಂಗಿ ಎನ್‌ಗಿಡಿ, ನುವಾನ್ ತುಷಾರ, ಮೋಹಿತ್ ರಾಠಿ, ಸ್ವಸ್ತಿಕ್ ಚಿಕಾರ, ಅಭಿನಂದನ್ ಸಿಂಗ್.