IPL 2025: 3+4 ಸೂತ್ರದೊಂದಿಗೆ ಕಣಕ್ಕಿಳಿಯಲಿದೆ RCB

IPL 2025: ಐಪಿಎಲ್​ನ 18ನೇ ಆವೃತ್ತಿ ಮಾರ್ಚ್ 22 ರಿಂದ ಆರಂಭವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಫೈನಲ್ ಪಂದ್ಯವು ಮೇ 25 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಜರುಗಲಿದೆ.

IPL 2025: 3+4 ಸೂತ್ರದೊಂದಿಗೆ ಕಣಕ್ಕಿಳಿಯಲಿದೆ RCB

Updated on: Mar 20, 2025 | 6:54 AM

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮಾರ್ಚ್ 22 ರಿಂದ ಆರಂಭವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಹಾಲಿ ಚಾಂಪಿಯನ್ ಕೆಕೆಆರ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕಾಗಿ ಆರ್​ಸಿಬಿ ಪಡೆ 3+4 ಸೂತ್ರದೊಂದಿಗೆ ಪ್ಲೇಯಿಂಗ್ ಇಲೆವೆನ್ ರೂಪಿಸುವುದು ಬಹುತೇಕ ಖಚಿತ. ಅಂದರೆ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮೂವರು ಆಲ್​ರೌಂಡರ್​ಗಳನ್ನು ಹಾಗೂ ನಾಲ್ವರು ಬೌಲರ್​ಗಳನ್ನು ಬಳಸಿಕೊಳ್ಳಲಿದ್ದಾರೆ.

ಅದರಂತೆ ಆರ್​ಸಿಬಿ ಪರ ಆರಂಭಿಕರಾಗಿ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ನಾಯಕ ರಜತ್ ಪಾಟಿದಾರ್ ಬ್ಯಾಟ್ ಬೀಸಲಿದ್ದಾರೆ.

ನಾಲ್ಕನೇ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್​ಸ್ಟೋನ್ ಆಡಲಿದ್ದು, ಐದನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಜಿತೇಶ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಆರನೇ ಕ್ರಮಾಂಕದಲ್ಲಿ ಟಿಮ್ ಡೇವಿಡ್​ಗೆ ಚಾನ್ಸ್ ಸಿಗಲಿದೆ. ಏಳನೇ ಕ್ರಮಾಂಕದಲ್ಲಿ ಕೃನಾಲ್ ಪಾಂಡ್ಯ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು.

ಇದನ್ನೂ ಓದಿ
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

ವೇಗಿಗಳಾಗಿ ಭುವನೇಶ್ವರ್ ಕುಮಾರ್, ಯಶ್ ದಯಾಳ್ ಹಾಗೂ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿಯಲಿದ್ದಾರೆ, ಇನ್ನು ಸ್ಪಿನ್ನರ್ ಆಗಿ ಸುಯಶ್ ಶರ್ಮಾಗೆ ಚಾನ್ಸ್ ಸಿಗಬಹುದು. ಇನ್ನು ರಾಸಿಖ್ ಸಲಾಂ ಹಾಗೂ ದೇವದತ್ ಪಡಿಕ್ಕಲ್ ಅವರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಳಸಿಕೊಳ್ಳುವ ಸಾಧ್ಯತೆಯಿದೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ…

  1. ವಿರಾಟ್ ಕೊಹ್ಲಿ (ಆರಂಭಿಕ)
  2. ಫಿಲ್ ಸಾಲ್ಟ್ (ಆರಂಭಿಕ)
  3. ರಜತ್ ಪಾಟಿದಾರ್ (ನಾಯಕ)
  4. ಲಿಯಾಮ್ ಲಿವಿಂಗ್​ಸ್ಟೋನ್ (ಆಲ್​ರೌಂಡರ್)
  5. ಜಿತೇಶ್ ಶರ್ಮಾ (ವಿಕೆಟ್ ಕೀಪರ್)
  6. ಟಿಮ್ ಡೇವಿಡ್ (ಆಲ್​ರೌಂಡರ್)
  7. ಕೃನಾಲ್ ಪಾಂಡ್ಯ (ಆಲ್​ರೌಂಡರ್)
  8. ಭುವನೇಶ್ವರ್ ಕುಮಾರ್ (ವೇಗಿ)
  9. ಜೋಶ್ ಹ್ಯಾಝಲ್​ವುಡ್ (ವೇಗಿ)
  10. ಯಶ್ ದಯಾಳ್ (ವೇಗಿ)
  11. ಸುಯಶ್ ಶರ್ಮಾ (ಸ್ಪಿನ್ನರ್)

ಇದನ್ನೂ ಓದಿ: IPL 2025: ಬರೆದಿಟ್ಕೊಳ್ಳಿ, ಈ ಸಲ ಕಪ್ ಇವರದ್ದೆ… ಎಬಿಡಿ ಭವಿಷ್ಯ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.