AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮೌನವಾಗಿರಲು ಸಾಧ್ಯವಿಲ್ಲ; ಐಪಿಎಲ್ ತಂಡಗಳಿಗೆ ಲಗಾಮ್ ಹಾಕಲು ಬಿಸಿಸಿಐ ತಯಾರಿ

BCCI response: 2025ರ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ದುರಂತದಿಂದ 11 ಜನರು ಮೃತಪಟ್ಟಿದ್ದಾರೆ. ಈ ಘಟನೆಯಿಂದಾಗಿ ಬಿಸಿಸಿಐ ತೀವ್ರ ಆಘಾತಕ್ಕೀಡಾಗಿದೆ ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರುವ ಬಗ್ಗೆ ಚಿಂತಿಸುತ್ತಿದೆ. ಬಿಸಿಸಿಐ ಕಾರ್ಯದರ್ಶಿ ಈ ದುರಂತಕ್ಕೆ ಕ್ಷಮೆಯಾಚಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

IPL 2025: ಮೌನವಾಗಿರಲು ಸಾಧ್ಯವಿಲ್ಲ; ಐಪಿಎಲ್ ತಂಡಗಳಿಗೆ ಲಗಾಮ್ ಹಾಕಲು ಬಿಸಿಸಿಐ ತಯಾರಿ
Ipl Teams
ಪೃಥ್ವಿಶಂಕರ
|

Updated on:Jun 07, 2025 | 5:24 PM

Share

2025 ರ ಐಪಿಎಲ್​ಗೆ (IPL 2025) ಸುಖಾಂತ್ಯವೇನೋ ಸಿಕ್ಕಿತು. ಆದರೆ 17 ವರ್ಷಗಳ ಬಳಿಕ ಚಾಂಪಿಯನ್ ಆದ ಖುಷಿ ಆರ್‌ಸಿಬಿ (RCB) ತಂಡಕ್ಕೆ 18 ಗಂಟೆಯೂ ಉಳಿಯಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಿಂದ 11 ಅಮಾಯಕ ಜೀವಗಳು ಬಲಿಯಾದವು. ಇನ್ನು ಕೆಲವರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಈ ಅವಘಡಕ್ಕೆ ಕಾರಣರಾದವರನ್ನು ಶಿಕ್ಷೆಗೊಳಪಡಿಸಲಾಗಿದೆಯಾದರೂ, ಈ ಅವಘಡ ನಡೆಯದಂತೆ ತಡೆಯಲು ಸಾಕಷ್ಟು ಅವಕಾಶಗಳಿದ್ದವು. ಆದರೆ ಸರ್ಕಾರ, ಆಯೋಜಕರು, ಫ್ರಾಂಚೈಸಿ ಹಾಗೂ ಕೆಎಸ್​ಸಿಎಯ ಬೇಜವಾಬ್ದಾರಿ ತನದಿಂದ ಸಾವು ನೋವು ಉಂಟಾಯಿತು. ಇದೀಗ ಇನ್ನು ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ತಡೆಯಲು ಬಿಸಿಸಿಐ (BCCI) ಮಹತ್ವದ ಹೆಜ್ಜೆ ಇಟ್ಟಿದೆ.

ಬೆಂಗಳೂರಿನಲ್ಲಿ ನಡೆದ ದುರಂತದಿಂದಾಗಿ ಐಪಿಎಲ್ ಸೃಷ್ಟಿಕರ್ತ ಬಿಸಿಸಿಐ ವಿಶ್ವ ಕ್ರಿಕೆಟ್ ಮುಂದೆ ತಲೆ ತಗ್ಗಿಸುವಂತ್ತಾಗಿದೆ. ಹೀಗಾಗಿ ಇನ್ನು ಮುಂದೆ ಈ ತಪ್ಪು ನಡೆಯದಂತೆ ತಡೆಯಲು ಮುಂದಾಗಿರುವುದಾಗಿ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಹೇಳಿದ್ದಾರೆ. ಬಿಸಿಸಿಐ ಶೀಘ್ರದಲ್ಲೇ ಈ ಬಗ್ಗೆ ಹೊಸ ಕಾನೂನನ್ನು ತರಲಿದೆ ಎಂದಿದ್ದಾರೆ.

ಬಿಸಿಸಿಐ ಕಾರ್ಯದರ್ಶಿ ಹೇಳಿದ್ದೇನು?

ಭವಿಷ್ಯದಲ್ಲಿ ಐಪಿಎಲ್ ವಿಜಯೋತ್ಸವ ಆಚರಣೆಗೆ ಮಾರ್ಗಸೂಚಿಗಳನ್ನು ಜಾರಿಗೆ ತರುವ ಬಗ್ಗೆ ಬಿಸಿಸಿಐ ಚಿಂತಿಸುತ್ತಿದೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಕ್ರಿಕ್‌ಬಜ್‌ಗೆ ತಿಳಿಸಿದ್ದಾರೆ. ‘ಇಂತಹ ದುರಂತಗಳ ನಡೆಯದಂತೆ ಬಿಸಿಸಿಐ ಏನನ್ನಾದರೂ ಮಾಡಬೇಕಾಗುತ್ತದೆ. ನಾವು ಮೌನವಾಗಿರಲು ಸಾಧ್ಯವಿಲ್ಲ. ಇದು ಆರ್‌ಸಿಬಿಯ ಖಾಸಗಿ ಕಾರ್ಯಕ್ರಮವಾಗಿತ್ತು, ಆದರೆ ಬಿಸಿಸಿಐ ಆಗಿ ನಾವು ಭಾರತದಲ್ಲಿ ಕ್ರಿಕೆಟ್‌ಗೆ ಜವಾಬ್ದಾರರಾಗಿದ್ದೇವೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳಲು ನಾವು ಪ್ರಯತ್ನಿಸುತ್ತೇವೆ ಎಂದು ಹೇಳಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಭೀಕರ ಘಟನೆಗೆ ಪ್ರತಿಕ್ರಿಯೆಯಾಗಿ ಬಿಸಿಸಿಐ ಕಾರ್ಯದರ್ಶಿ ಈ ಹೇಳಿಕೆ ನೀಡಿದ್ದಾರೆ. ಜೂನ್ 5, ಬುಧವಾರ, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ಪ್ರಾಣ ಕಳೆದುಕೊಂಡರು ಮತ್ತು ಅನೇಕರು ಗಾಯಗೊಂಡರು. ಈ ಘಟನೆಯ ನಂತರ, ಕರ್ನಾಟಕ ರಾಜ್ಯ ಸರ್ಕಾರವು ಪೊಲೀಸರು ಮತ್ತು ಆರ್‌ಸಿಬಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದೆ. ಹಲವರನ್ನು ಬಂಧಿಸಲಾಗಿದೆ.

ಹೊರಗೆ ಅಭಿಮಾನಿಗಳ ಸಾವು, ಒಳಗೆ ಆರ್​ಸಿಬಿ ಸಂಭ್ರಮಾಚರಣೆ; ಬಿಸಿಸಿಐ ಅಸಮಾಧಾನ

ಬಿಸಿಸಿಐ ಈಗ ಏನು ಮಾಡುತ್ತದೆ?

ಈಗ ಸುದ್ದಿ ಏನೆಂದರೆ, ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಇಂತಹ ಘಟನೆಗಳನ್ನು ತಡೆಯಲು ಬಿಸಿಸಿಐ ಒಂದು ಮಾರ್ಗಸೂಚಿಯನ್ನು ರಚಿಸಲಿದೆ. ಈ ಮಾರ್ಗಸೂಚಿ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಬಹಿರಂಗಪಡಿಸಲಾಗಿಲ್ಲ. ಆದಾಗ್ಯೂ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಮತ್ತು ಶೀಘ್ರದಲ್ಲೇ ಚರ್ಚಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ಸೈಕಿಯಾ ಹೇಳಿದ್ದಾರೆ. ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಕೂಡ ಆರ್‌ಸಿಬಿಯ ವಿಜಯೋತ್ಸವದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಇಂಗ್ಲೆಂಡ್ ಪ್ರವಾಸಕ್ಕೆ ಹೊರಡುವ ಮೊದಲು, ಅವರು ಅಂತಹ ರೋಡ್ ಶೋಗಳನ್ನು ಕಟ್ಟುನಿಟ್ಟಾಗಿ ವಿರೋಧಿಸುವುದಾಗಿ ಹೇಳಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:35 pm, Fri, 6 June 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ