AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ದುಡ್ಡು ವಾಪಸ್ ಕೊಡಿ… RCB ವಿರುದ್ಧ ಅಭಿಮಾನಿಗಳ ಆಕ್ರೋಶ

IPL 2025: ಐಪಿಎಲ್​ನ 18ನೇ ಆವೃತ್ತಿ ಮಾರ್ಚ್ 22 ರಿಂದ ಶುರುವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಫೈನಲ್ ಪಂದ್ಯವು ಮೇ 25 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಜರುಗಲಿದೆ.

ನಮ್ಮ ದುಡ್ಡು ವಾಪಸ್ ಕೊಡಿ... RCB ವಿರುದ್ಧ ಅಭಿಮಾನಿಗಳ ಆಕ್ರೋಶ
Rcb Team
ಝಾಹಿರ್ ಯೂಸುಫ್
|

Updated on: Mar 18, 2025 | 11:53 AM

Share

ರಂಗು ರಂಗಿನ ಕ್ರಿಕೆಟ್ ಟೂರ್ನಿ ಐಪಿಎಲ್ ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಅನ್​ಬಾಕ್ಸ್ ಹೆಸರಿನಲ್ಲಿ ರಂಗೀನ್ ಕಾರ್ಯಕ್ರಮ ಏರ್ಪಡಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಾರ್ಚ್ 17 ರಂದು ನಡೆದ ಈ ಕಾರ್ಯಕ್ರಮವು ಅದ್ಧೂರಿಯಾಗಿ ನಡೆದಿದೆ. ಇದಾಗ್ಯೂ ಲೈವ್ ಸ್ಟ್ರೀಮಿಂಗ್ ವಿರುದ್ಧ ಅಭಿಮಾನಿಗಳು ಆಕ್ರೋಶವನ್ನು ವ್ಯಕಪಡಿಸಿದ್ದಾರೆ.

ಕಳಪೆ ಲೈವ್ ಸ್ಟ್ರೀಮಿಂಗ್:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಅನ್‌ಬಾಕ್ಸ್ ಕಾರ್ಯಕ್ರಮದ ಸಮಯದಲ್ಲಿ ಕ್ರೀಡಾಂಗಣದಲ್ಲಿ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಉಪಸ್ಥಿತರಿದ್ದರು. ಖ್ಯಾತ ಡಿಜೆ ಟಿಮ್ಮಿ ಟ್ರಂಪೆಟ್ ಮತ್ತು ಸ್ಥಳೀಯ ಕಲಾವಿದರ ಪ್ರದರ್ಶನಗಳನ್ನು ಅಭಿಮಾನಿಗಳು ಮನಸೊರೆಗೊಂಡರು. ಆದರೆ ಇತ್ತ ಲೈವ್ ಸ್ಟ್ರೀಮಿಂಗ್ ವೀಕ್ಷಿಸುತ್ತಿದ್ದ ಅಭಿಮಾನಿಗಳಿಗೆ ಮಾತ್ರ ಕಳಪೆ ಸ್ಟ್ರೀಮಿಂಗ್​ನಿಂದಾಗಿ ಸಂಕಷ್ಟಕ್ಕೆ ಸಿಲುಕಿದರು.

ಇದನ್ನೂ ಓದಿ
Image
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
Image
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
Image
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
Image
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

99 ರೂ. ರಿಚಾರ್ಜ್​ನೊಂದಿಗೆ ಆರ್​ಸಿಬಿ ಈ ಕಾರ್ಯಕ್ರಮದ ನೇರ ಪ್ರಸಾರವನ್ನು ಪ್ರಸ್ತುತಪಡಿಸಿತ್ತು. ಆದರೆ ಲೈವ್ ಸ್ಟ್ರೀಮಿಂಗ್​ನಲ್ಲಿ ಬಫರಿಂಗ್, ವಿಳಂಬ ಕಂಡು ಬಂದಿದೆ. ಅಲ್ಲದೆ ಸ್ಟ್ರೀಮಿಂಗ್ ಗುಣಮಟ್ಟ ಸಹ ಕಳಪೆಯಿಂದ ಕೂಡಿತ್ತು.

ಇದೀಗ ಈ ಬಗ್ಗೆ ಆರ್​ಸಿಬಿ ಅಭಿಮಾನಿಗಳು ಸೋಷಿಯಲ್ ಮೀಡಿಯಾ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಅದರಲ್ಲೂ ಕೆಲವರು 99 ರೂ. ಪಾವತಿಸಿದರೂ ಉತ್ತಮ ಸ್ಟ್ರೀಮಿಂಗ್ ವ್ಯವಸ್ಥೆ ಮಾಡದ ಆರ್​ಸಿಬಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನು ಕೆಲವರು ಲೈವ್ ಸ್ಟ್ರೀಮಿಂಗ್​ ವೇಳೆ ಬಫರಿಂಗ್ ಸಮಸ್ಯೆ ಎದುರಿಸಿದ್ದಾಗಿ ತಿಳಿಸಿದ್ದು, ಹೀಗಾಗಿ ರಿಚಾರ್ಜ್ ಮೊತ್ತವನ್ನು ಹಿಂತಿರುಗಿಸುವಂತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಒಟ್ಟಿನಲ್ಲಿ ಆರ್​ಸಿಬಿ ಅನ್​ಬಾಕ್ಸ್ ಕಾರ್ಯಕ್ರಮ ಯಶಸ್ವಿಯಾದರೂ, ಇತ್ತ ಕಳಪೆ ಗುಣಮಟ್ಟದ ಲೈವ್ ಸ್ಟ್ರೀಮಿಂಗ್ ಪ್ರಸ್ತುತಪಡಿಸಿ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ರಾಯಲ್ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದೆ.

‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ