AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ನಮ್ಮ ಬೌಲರ್​ಗಳು ಸಖತ್ತಾಗಿ ಬೌಲಿಂಗ್ ಮಾಡಿದ್ದಾರೆ: ರಜತ್ ಪಾಟಿದಾರ್ ಅಚ್ಚರಿಯ ಹೇಳಿಕೆ

Royal Challengers Bengaluru vs Gujarat Titans: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ RCB ತಂಡವು 20 ಓವರ್​ಗಳಲ್ಲಿ 169 ರನ್ ಗಳಿಸಿದರೆ, ಈ ಗುರಿಯನ್ನು GT ತಂಡವು 17.5 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಗುಜರಾತ್ ಟೈಟಾನ್ಸ್​ ತಂಡ 8 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

IPL 2025: ನಮ್ಮ ಬೌಲರ್​ಗಳು ಸಖತ್ತಾಗಿ ಬೌಲಿಂಗ್ ಮಾಡಿದ್ದಾರೆ: ರಜತ್ ಪಾಟಿದಾರ್ ಅಚ್ಚರಿಯ ಹೇಳಿಕೆ
Rajat Patidar
Follow us
ಝಾಹಿರ್ ಯೂಸುಫ್
|

Updated on:Apr 03, 2025 | 7:01 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 14ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸೋಲನುಭವಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಜಿಟಿ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ವಿರಾಟ್ ಕೊಹ್ಲಿ ಕೇವಲ 7 ರನ್​ಗಳಿಸಿ ಔಟಾದರೆ, ಆ ಬಳಿಕ ಬಂದ ದೇವದತ್ ಪಡಿಕ್ಕಲ್ 4 ರನ್​ಗಳಿಸಿ ಬೌಲ್ಡ್ ಆದರು. ಇನ್ನು ಫಿಲ್ ಸಾಲ್ಟ್ ಇನಿಂಗ್ಸ್ 14 ರನ್​ಗಳಿಗೆ ಸೀಮಿತವಾಯಿತು.

ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಲಿಯಾಮ್ ಲಿವಿಂಗ್​ಸ್ಟೋನ್ 40 ಎಸೆತಗಳಲ್ಲಿ 54 ರನ್​ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್ ಕಲೆಹಾಕಿತು.

170 ರನ್​ಗಳ ಗುರಿ ಪಡೆದ ಗುಜರಾತ್ ಟೈಟಾನ್ಸ್ ಪರ ಸಾಯಿ ಸುದರ್ಶನ್ 49 ರನ್ ಬಾರಿಸಿ ಉತ್ತಮ ಆರಂಭ ಒದಗಿಸಿದ್ದರು. ಇನ್ನು ಜೋಸ್ ಬಟ್ಲರ್ ಕೇವಲ 39 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 73 ರನ್ ಬಾರಿಸಿದರು. ಈ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಗುಜರಾತ್ ಟೈಟಾನ್ಸ್ ತಂಡವು 17.5 ಓವರ್​ಗಳಲ್ಲಿ 170 ರನ್​ ಬಾರಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಇದನ್ನೂ ಓದಿ
Image
ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದುವೇ ಅಸಲಿ ಕಾರಣ
Image
RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್
Image
David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!
Image
VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ

ಈ ಸೋಲಿನ ಬಳಿಕ ಮಾತನಾಡಿದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್, ನಮ್ಮ ತಂಡವು ಉತ್ತಮವಾಗಿ ಬೌಲಿಂಗ್ ಮಾಡಿದೆ ಎಂದಿರುವುದು ಅಚ್ಚರಿಗೆ ಕಾರಣವಾಗಿತ್ತು. ಏಕೆಂದರೆ ಈ ಪಂದ್ಯವನ್ನು ಗುಜರಾತ್ ಟೈಟಾನ್ಸ್ ತಂಡವು 17.5 ಓವರ್​ಗಳಲ್ಲಿ ಮುಗಿಸಿದರೆ, ಇತ್ತ ಆರ್​ಸಿಬಿ ಬೌಲರ್​ಗಳು ಪಡೆದಿರುವುದು ಕೇವಲ 2 ವಿಕೆಟ್ ಮಾತ್ರ.

ಆದರೆ ಪಂದ್ಯದ ಬಳಿಕ ಮಾತನಾಡಿದ ರಜತ್ ಪಾಟಿದಾರ್, ನಮ್ಮ ಗುರಿ 200 ರನ್​ ಆಗಿರಲಿಲ್ಲ. ಪವರ್​ಪ್ಲೇನಲ್ಲಿ ವಿಕೆಟ್ ಕಳೆದುಕೊಂಡಿದ್ದ ಪರಿಣಾಮ ನಾವು 190 ರನ್​ಗಳನ್ನು ಗುರಿಯಾಗಿಸಿಕೊಂಡಿದ್ದೆವು. ಆದರೆ ಆರಂಭಿಕ ವಿಕೆಟ್‌ಗಳನ್ನು ಕಳೆದುಕೊಂಡಿರುವುದು ನಮ್ಮೆಲ್ಲಾ ಯೋಜನೆಗಳನ್ನು ಹಾಳುಗೆಡವಿತು. ನಾವು ಪವರ್​ಪ್ಲೇನಲ್ಲಿ 3 ವಿಕೆಟ್ ಕಳೆದುಕೊಂಡಿರುವುದು ದೊಡ್ಡ ತಪ್ಪು ಎಂದು ಭಾವಿಸುತ್ತೇನೆ. ಏಕೆಂದರೆ ಆ ಬಳಿಕ ಪಿಚ್​ ಬ್ಯಾಟಿಂಗ್​ಗೆ ಸಹಕಾರಿಯಾಗಿತ್ತು. ಇದಾಗ್ಯೂ ನಮ್ಮ ಬೌಲರ್​ಗಳು ಅತ್ಯುತ್ತಮವಾಗಿ ಬೌಲಿಂಗ್ ಮಾಡಿದರು ಎಂದು ರಜತ್ ಪಾಟಿದಾರ್ ಹೇಳಿದ್ದಾರೆ.

170 ರನ್​ಗಳ ಗುರಿ ನೀಡಿದ ಬಳಿಕ ನಮ್ಮ ಬೌಲರ್​ಗಳು ಅದನ್ನು ರಕ್ಷಿಸಲು ಅದ್ಭುತವಾಗಿ ಪ್ರಯತ್ನಿಸಿದರು. ಈ ಚೇಸ್ ಅನ್ನು 18 ನೇ ಓವರ್‌ವರೆಗೆ ಕೊಂಡೊಯ್ದಿರುವುದೇ ಅದ್ಭುತ ಎಂದು ಪಾಟಿದಾರ್ ಆರ್​ಸಿಬಿ ಬೌಲರ್​ಗಳನ್ನು ಹಾಡಿ ಹೊಗಳಿದ್ದಾರೆ.

ಇದನ್ನೂ ಓದಿ: IPL 2025: ಬ್ಯಾನ್ ಬ್ಯಾನ್ ಬ್ಯಾನ್… ಐಪಿಎಲ್ ಆಟಗಾರರಿಗೆ ಬ್ಯಾನ್ ಭೀತಿ

ಆದರೆ ಆರ್​ಸಿಬಿ ಪರ ವಿಕೆಟ್ ಪಡೆದಿರುವುದು ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹ್ಯಾಝಲ್​ವುಡ್ ಮಾತ್ರ. ಅದು ಕೂಡ ಕೇವಲ 2 ವಿಕೆಟ್​ಗಳು ಮಾತ್ರ. ಅತ್ತ ಗುಜರಾತ್ ಟೈಟಾನ್ಸ್ ತಂಡವು 13 ಎಸೆತಗಳನ್ನು ಬಾಕಿಯಿರಿಸಿ ನಿರಾಯಾಸವಾಗಿ ಪಂದ್ಯವನ್ನು ಗೆದ್ದುಕೊಂಡಿದ್ದಾರೆ. ಇದಾಗ್ಯೂ ರಜತ್ ಪಾಟಿದಾರ್ ಆರ್​ಸಿಬಿ ಬೌಲರ್​ಗಳನ್ನು ಹಾಡಿ ಹೊಗಳಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.

Published On - 6:55 am, Thu, 3 April 25

ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್