ಮೂವರ ಸ್ಫೋಟಕ ಅರ್ಧಶತಕ… ಪಂದ್ಯಶ್ರೇಷ್ಠ ಪ್ರಶಸ್ತಿ ಸಿಕ್ಕಿದ್ದು ಬೌಲರ್ಗೆ..!
IPL 2025 KKR vs RCB: ಐಪಿಎಲ್ ಸೀಸನ್-18ರ ಮೊದಲ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಬಾರಂಭ ಮಾಡಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಆರ್ಸಿಬಿ ತಂಡವು 7 ವಿಕೆಟ್ಗಳ ಜಯ ಸಾಧಿಸಿದೆ. ಬ್ಯಾಟರ್ಗಳ ಅಬ್ಬರ ನಡುವೆ ಈ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶಿಸಿದ್ದು ಕೃನಾಲ್ ಪಾಂಡ್ಯ.

IPL 2025: ಐಪಿಎಲ್ನ ಬಲಿಷ್ಠ ಪಡೆದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೀಸನ್-18ರ ಅಭಿಯಾನವನ್ನು ಆರಂಭಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು.
ಅದರಂತೆ ಇನಿಂಗ್ಸ್ ಆರಂಭಿಸಿದ ಕೆಕೆಆರ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಮೊದಲ ಓವರ್ನಲ್ಲೇ ಕ್ವಿಂಟನ್ ಡಿಕಾಕ್ (4) ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ ಅಜಿಂಕ್ಯ ರಹಾನೆ ಮತ್ತೋರ್ವ ಆರಂಭಿಕ ಸುನಿಲ್ ನರೈನ್ ಜೊತೆಗೂಡಿ ಸ್ಪೋಟಕ ಇನಿಂಗ್ಸ್ ಆಡಿದರು.
26 ಎಸೆತಗಳಲ್ಲಿ 44 ರನ್ ಬಾರಿಸಿ ಸುನಿಲ್ ನರೈನ್ ಔಟಾದರೆ, ಮತ್ತೊಂದೆಡೆ ಅಜಿಂಕ್ಯ ರಹಾನೆ 31 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 56 ರನ್ ಚಚ್ಚಿದರು. ಈ ಅರ್ಧಶಥಕದ ನೆರವಿನಿಂದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 174 ರನ್ ಕಲೆಹಾಕಿತು.
175 ರನ್ಗಳ ಗುರಿ ಪಡೆದ ಆರ್ಸಿಬಿ ತಂಡಕ್ಕೆ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ವಿಸ್ಪೋಟಕ ಆರಂಭ ಒದಗಿಸಿದ್ದರು. ಪರಿಣಾಮ ಪವರ್ಪ್ಲೇನಲ್ಲೇ ಆರ್ಸಿಬಿ ತಂಡದ ಮೊತ್ತ 80 ಕ್ಕೆ ಬಂದು ನಿಂತಿತು. ಇದರ ಬೆನ್ನಲ್ಲೇ ಫಿಲ್ ಸಾಲ್ಟ್ 31 ಎಸೆತಗಳಲ್ಲಿ 56 ರನ್ ಬಾರಿಸಿ ಔಟಾದರು.
ಆದರೆ ಮತ್ತೊಂದೆಡೆ ಜವಾಬ್ದಾರಿಯುತ ಇನಿಂಗ್ಸ್ ಆಡಿದ ವಿರಾಟ್ ಕೊಹ್ಲಿ 36 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ ಅಜೇಯ 59 ರನ್ ಬಾರಿಸಿ 16.2 ಓವರ್ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಆರ್ಸಿಬಿ ತಂಡವು ಮೊದಲ ಪಂದ್ಯದಲ್ಲಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು.
ಬೌಲರ್ಗೆ ಪಂದ್ಯಶ್ರೇಷ್ಠ ಪ್ರಶಸ್ತಿ:
ಈ ಪಂದ್ಯದಲ್ಲಿ ಅಜಿಂಕ್ಯ ರಹಾನೆ (56), ಫಿಲ್ ಸಾಲ್ಟ್ (56) ಹಾಗೂ ವಿರಾಟ್ ಕೊಹ್ಲಿ (59) ಸ್ಪೋಟಕ ಅರ್ಧಶತಕ ಬಾರಿಸಿದ್ದರೂ, ಪಂದ್ಯಶ್ರೇಷ್ಠ ಪ್ರಶಸ್ತಿ ಸಿಕ್ಕಿದ್ದು ಕೃನಾಲ್ ಪಾಂಡ್ಯಗೆ ಎಂಬುದು ವಿಶೇಷ.
ಏಕೆಂದರೆ ಕೆಕೆಆರ್ ತಂಡದ ಸಿಡಿಲಬ್ಬರದ ಬ್ಯಾಟಿಂಗ್ ನಡುವೆ ಕೃನಾಲ್ ಪಾಂಡ್ಯ ಅದ್ಭುತ ಬೌಲಿಂಗ್ ಪ್ರದರ್ಶಿಸಿದ್ದರು. ಅದರಲ್ಲೂ 200ರ ಗಡಿದಾಟಬೇಕಿದ್ದ ಕೆಕೆಆರ್ ಮೊತ್ತವನ್ನು 175 ರನ್ಗಳ ಒಳಗೆ ನಿಯಂತ್ರಿಸುವಲ್ಲಿ ಕೃನಾಲ್ ಪ್ರಮುಖ ಪಾತ್ರವಹಿಸಿದ್ದರು.
ಇದನ್ನೂ ಓದಿ: IPL 2025: RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಗಾಯಾಳು
4 ಓವರ್ಗಳನ್ನು ಎಸೆದಿದ್ದ ಕೃನಾಲ್ ಪಾಂಡ್ಯ ಡೇಂಜರಸ್ ಅಜಿಂಕ್ಯ ರಹಾನೆ, ರಿಂಕು ಸಿಂಗ್, ವೆಂಕಟೇಶ್ ಅಯ್ಯರ್ ಅವರ ವಿಕೆಟ್ ಪಡೆದಿದ್ದಲ್ಲದೇ ಕೇವಲ 29 ರನ್ ಮಾತ್ರ ನೀಡಿದ್ದರು. ಈ ಅತ್ಯುತ್ತಮ ಬೌಲಿಂಗ್ ಪ್ರದರ್ಶನದ ಫಲವಾಗಿ ಐಪಿಎಲ್ ಸೀಸನ್-18ರ ಮೊದಲ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೃನಾಲ್ ಪಾಂಡ್ಯ ಪಾಲಾಯಿತು.
Published On - 7:30 am, Sun, 23 March 25