AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಆರ್​ಸಿಬಿಯ ಕೊನೆಯ ಲೀಗ್ ಪಂದ್ಯ; ಎಲ್ಲಿ, ಯಾವಾಗ, ಯಾರು ಎದುರಾಳಿ?

RCB vs LSG IPL 2025 Final League Match: ಮೇ 27 ರಂದು, ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಐಪಿಎಲ್ 2025 ರ 70ನೇ ಮತ್ತು ಅಂತಿಮ ಲೀಗ್ ಪಂದ್ಯ ನಡೆಯಲಿದೆ. ಈ ಪಂದ್ಯವು ಆರ್‌ಸಿಬಿಗೆ ಅತ್ಯಂತ ಮುಖ್ಯವಾಗಿದೆ, ಏಕೆಂದರೆ ಗೆಲುವು ಅವರಿಗೆ ಟಾಪ್ 2 ಸ್ಥಾನವನ್ನು ಖಚಿತಪಡಿಸುತ್ತದೆ. ಲಕ್ನೋ ಈಗಾಗಲೇ ಪ್ಲೇಆಫ್‌ನಿಂದ ಹೊರಗುಳಿದಿದೆ. ಪಂದ್ಯದ ನೇರ ಪ್ರಸಾರ ಜಿಯೋಸಿನಿಮಾ ಮತ್ತು ಸ್ಟಾರ್ ಸ್ಪೋರ್ಟ್ಸ್ ಟಿವಿ ಚಾನೆಲ್‌ಗಳಲ್ಲಿ ಲಭ್ಯವಿರುತ್ತದೆ.

IPL 2025: ಆರ್​ಸಿಬಿಯ ಕೊನೆಯ ಲೀಗ್ ಪಂದ್ಯ; ಎಲ್ಲಿ, ಯಾವಾಗ, ಯಾರು ಎದುರಾಳಿ?
Rcb
ಪೃಥ್ವಿಶಂಕರ
|

Updated on: May 26, 2025 | 10:17 PM

Share

ಐಪಿಎಲ್ 2025 (IPL 2025) ಲೀಗ್‌ನ ಕೊನೆಯ ಪಂದ್ಯ ಅಂದರೆ 70 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ (RCB vs LSG) ನಡುವೆ ಮೇ 27 ರ ಮಂಗಳವಾರ ನಡೆಯಲಿದೆ. ಈ ಪಂದ್ಯವು ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ಆರ್‌ಸಿಬಿಗೆ ಬಹಳ ಮುಖ್ಯವಾಗಲಿದೆ, ಏಕೆಂದರೆ ಬೆಂಗಳೂರು ತಂಡ ಲಕ್ನೋವನ್ನು ಸೋಲಿಸುವ ಮೂಲಕ ಅಗ್ರ 2 ರಲ್ಲಿ ಸ್ಥಾನ ಪಡೆಯುವ ಇರಾದೆಯಲ್ಲಿದೆ. ಮತ್ತೊಂದೆಡೆ, ಲಕ್ನೋ ಸೂಪರ್ ಜೈಂಟ್ಸ್ ತಂಡವು ಈಗಾಗಲೇ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದ್ದು, ಕೇವಲ ಔಪಚಾರಿಕವಾಗಿದೆ. ಆದಾಗ್ಯೂ ಕಳೆದ ಪಂದ್ಯ ಗೆದ್ದಿರುವ ಲಕ್ನೋ ತಂಡ ಆರ್​ಸಿಬಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಈ ಸೀಸನ್‌ನಲ್ಲಿ ಆರ್​ಸಿಬಿ ಆಡಿದ 13 ಪಂದ್ಯಗಳಲ್ಲಿ 8 ಗೆಲುವು ಮತ್ತು 4 ಸೋಲುಗಳೊಂದಿಗೆ 17 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಇತ್ತ ಲಕ್ನೋ ಸೂಪರ್ ಜೈಂಟ್ಸ್ ಆಡಿದ 13 ಪಂದ್ಯಗಳಲ್ಲಿ 6 ಗೆಲುವು ಮತ್ತು 7 ಸೋಲುಗಳೊಂದಿಗೆ 12 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಹೀಗಾಗಿ ಆರ್​ಸಿಬಿ, ಲಕ್ನೋ ವಿರುದ್ಧ ಗೆದ್ದರೆ, 19 ಅಂಕಗಳೊಂದಿಗೆ ಟಾಪ್ 2 ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ.

ಆರ್​ಸಿಬಿ ಹಾಗೂ ಲಕ್ನೋ ನಡುವಿನ ಕೊನೆಯ ಲೀಗ್ ಪಂದ್ಯ ಯಾವಾಗ ನಡೆಯಲಿದೆ?

ಆರ್​ಸಿಬಿ ಹಾಗೂ ಲಕ್ನೋ ನಡುವಿನ ಕೊನೆಯ ಲೀಗ್ ಪಂದ್ಯ ಮೇ 27 ರ ಮಂಗಳವಾರ ನಡೆಯಲಿದೆ.

ಆರ್​ಸಿಬಿ ಹಾಗೂ ಲಕ್ನೋ ನಡುವಿನ ಕೊನೆಯ ಲೀಗ್ ಪಂದ್ಯ ಎಲ್ಲಿ ನಡೆಯಲಿದೆ?

ಆರ್​ಸಿಬಿ ಹಾಗೂ ಲಕ್ನೋ ನಡುವಿನ ಕೊನೆಯ ಲೀಗ್ ಪಂದ್ಯ ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಆರ್​ಸಿಬಿ ಹಾಗೂ ಲಕ್ನೋ ನಡುವಿನ ಕೊನೆಯ ಲೀಗ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಉಭಯ ತಂಡಗಳ ನಡುವಿನ ಈ ಪಂದ್ಯ ಸಂಜೆ 7:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ ಸಂಜೆ 7:00 ಗಂಟೆಗೆ ನಡೆಯಲಿದೆ.

ಆರ್​ಸಿಬಿ ಹಾಗೂ ಲಕ್ನೋ ನಡುವಿನ ಕೊನೆಯ ಲೀಗ್ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬೇಕು?

ಆರ್​ಸಿಬಿ ಹಾಗೂ ಲಕ್ನೋ ನಡುವಿನ ಕೊನೆಯ ಲೀಗ್ ಪಂದ್ಯದ ನೇರ ಪ್ರಸಾರವನ್ನು ನೀವು ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದು. ಹಾಗೆಯೇ ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ನೆಟ್‌ವರ್ಕ್ 18 ಟಿವಿ ಚಾನೆಲ್‌ಗಳಲ್ಲಿ ಲಭ್ಯವಿರುತ್ತದೆ.

ರೋಹಿತ್, ಕೊಹ್ಲಿ, ಧೋನಿಗೆ ಸಿಕ್ಕ ಗೌರವ ಕನ್ನಡಿಗ ಮನೀಶ್ ಪಾಂಡೆಗೆ ಸಿಗಲಿಲ್ಲ; ಬಿಸಿಸಿಐ ವಿರುದ್ಧ ಮಹಿಳಾ ಕ್ರಿಕೆಟರ್ ಗರಂ

ಉಭಯ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಮಯಾಂಕ್ ಅಗರ್ವಾಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ, ಜೋಶ್ ಹೇಜಲ್‌ವುಡ್, ಯಶ್ ದಯಾಳ್, ರಸಿಖ್ ದಾರ್ ಸಲಾಂ, ಮನೋಜ್ ಭಾಂಡಗೆ, ಜೇಕಬ್ ಬೆಥೆಲ್, ಸ್ವಪ್ನಿಲ್ ಸಿಂಗ್, ಲಿಯಾಮ್ ಲಿವಿಂಗ್‌ಸ್ಟೋನ್, ನುವಾನ್ ತುಷಾರ, ಬ್ಲೆಸ್ಸಿಂಗ್ ಮುಜರಬಾನಿ, ಟಿಮ್ ಸೀಫರ್ಟ್, ಮೋಹಿತ್ ರಥಿ, ಸ್ವಸ್ತಿಕ್ ಚಿಕಾರಾ, ಅಭಿನಂದನ್ ಸಿಂಗ್.

ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್, ರವಿ ಬಿಷ್ಣೋಯ್, ನಿಕೋಲಸ್ ಪೂರನ್, ಅವೇಶ್ ಖಾನ್, ಆಕಾಶ್ ದೀಪ್, ಆಯುಷ್ ಬಡೋನಿ, ಮೊಹ್ಸಿನ್ ಖಾನ್, ಮಿಚೆಲ್ ಮಾರ್ಷ್, ಶಹಬಾಜ್ ಅಹ್ಮದ್, ಡೇವಿಡ್ ಮಿಲ್ಲರ್, ಅಬ್ದುಲ್ ಸಮದ್, ಐಡೆನ್ ಮರ್ಕ್ರಾಮ್, ಶಮರ್ ಜೋಸೆಫ್, ದಿಗ್ವೇಶ್ ಸಿಂಗ್, ಪ್ರಿನ್ಸ್ ಹೆಚ್.ಎಚ್. ಸಿದ್ಧಾರ್ಥ್, ಮ್ಯಾಥ್ಯೂ ಬ್ರಿಟ್ಜ್ಕೆ, ಅರ್ಶಿನ್ ಕುಲಕರ್ಣಿ, ಆರ್ಯನ್ ಜುಯಲ್, ಹಿಮ್ಮತ್ ಸಿಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ