IPL 2025: ಮಳೆಯಿಂದಾಗಿ ಪಂದ್ಯ ರದ್ದಾದ್ರೆ RCB ತಂಡದ ಕತೆಯೇನು?
IPL 2025 RCB vs LSG: ಐಪಿಎಲ್ನ ಕೊನೆಯ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಮಳೆಯಿಂದಾಗಿ ರದ್ದಾದರೆ, ಆರ್ಸಿಬಿ ತಂಡದ ಕತೆಯೇನು? ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಇ್ಲಲಿದೆ ಉತ್ತರ...

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 70ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಆರ್ಸಿಬಿ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್ನಲ್ಲಿ ಗದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನಕ್ಕೇರಲಿದೆ. ಈ ಮೂಲಕ ಮೊದಲ ಕ್ವಾಲಿಫೈಯರ್ ಪಂದ್ಯವಾಡಲು ಅರ್ಹತೆ ಪಡೆಯಬಹುದು.
ಇಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ಲಾಭವೆಂದರೆ, ಸೋತರೂ ಟೂರ್ನಿಯಿಂದ ಹೊರಬೀಳುವುದಿಲ್ಲ ಎಂಬುದು. ಅಂದರೆ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್ಗೆ ಪ್ರವೇಶಿಸಿದರೆ, ಸೋಲುವ ತಂಡ ದ್ವಿತೀಯ ಕ್ವಾಲಿಫೈಯರ್ ಪಂದ್ಯವಾಡಲಿದೆ. ಈ ಮೂಲಕ ಮತ್ತೊಮ್ಮೆ ಫೈನಲ್ಗೇರಲು ಅವಕಾಶ ಪಡೆಯಲಿದೆ.
ಹೀಗಾಗಿಯೇ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಕ್ವಾಲಿಫೈಯರ್ನ ಅರ್ಹತೆಯನ್ನು ಎದುರು ನೋಡುತ್ತಿದೆ. ಇದಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆದ್ದರೆ ಸಾಕು. ಆದರೆ ಈ ಪಂದ್ಯಕ್ಕೆ ಮಳೆ ಅಡ್ಡಿಯಾಗಿ, ಮ್ಯಾಚ್ ರದ್ದಾದರೆ ಏನು ಕತೆ ಎಂಬ ಪ್ರಶ್ನೆ ಮೂಡುವುದು ಸಹಜ.
RCB vs LSG ಪಂದ್ಯ ರದ್ದಾದರೆ?
ಭಾರತದಲ್ಲಿ ಮಾನ್ಸೂನ್ ಅಬ್ಬರ ಜೋರಾಗಿದೆ. ಕರ್ನಾಟಕ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿಯೇ ದೂರದ ಲಕ್ನೋನಲ್ಲಿ ನಡೆಯಲಿರುವ ಪಂದ್ಯಕ್ಕೂ ಮಳೆ ಆತಂಕ ಎದುರಾಗಿದೆ. ಒಂದು ವೇಳೆ ಆರ್ಸಿಬಿ-ಎಲ್ಎಸ್ಜಿ ನಡುವಣ ಪಂದ್ಯವು ಮಳೆಯಿಂದಾಗಿ ರದ್ದಾದರೆ, ಉಭಯ ತಂಡಗಳು ತಲಾ ಒಂದೊಂದು ಅಂಕಗಳನ್ನು ಹಂಚಿಕೊಳ್ಳಲಿದೆ.
ಇದರಿಂದ ಆರ್ಸಿಬಿ ತಂಡಕ್ಕೆ ಮೊದಲ ಕ್ವಾಲಿಫೈಯರ್ ಪಂದ್ಯವಾಡಲು ಅವಕಾಶ ಸಿಗುವುದಿಲ್ಲ. ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಂದಿರುವ ಪ್ರಸ್ತುತ ಅಂಕ 17. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯವು ಮಳೆಯಿಂದಾಗಿ ರದ್ದಾದರೆ ಒಂದು ಪಾಯಿಂಟ್ ಮಾತ್ರ ಸಿಗಲಿದೆ. ಇದರಿಂದ ಆರ್ಸಿಬಿ ತಂಡದ ಒಟ್ಟು ಅಂಕಗಳು 18 ಕ್ಕೇರಲಿದೆ.
ಆದರೆ ಇಲ್ಲಿ ನೆಟ್ ರನ್ ರೇಟ್ನಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. ಇದರಿಂದ 18 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ತಂಡವು ಮೊದಲ ಕ್ವಾಲಿಫೈಯರ್ ಪಂದ್ಯವಾಡಲು ಅರ್ಹತೆ ಪಡೆಯಲಿದೆ. ಅಲ್ಲದೆ ಆರ್ಸಿಬಿ, ಮುಂಬೈ ಇಂಡಿಯನ್ಸ್ ವಿರುದ್ಧ ಎಲಿಮಿನೇಟರ್ ಪಂದ್ಯವಾಡಬೇಕಾಗುತ್ತದೆ.
ಅಂದರೆ ಇಂದಿನ ಪಂದ್ಯವು ಮಳೆಯಿಂದ ರದ್ದಾದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯಬೇಕಾಗುತ್ತದೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯ ನಡೆಯುವುದು ಆರ್ಸಿಬಿ ಪಾಲಿಗೆ ಅನಿವಾರ್ಯ.
ಇದನ್ನೂ ಓದಿ: ಜಯಸೂರ್ಯನ ಭರ್ಜರಿ ದಾಖಲೆ ಸೂರ್ಯನ ಪಾಲು
ಅದರಂತೆ ಇಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯಗಳಿಸಿ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆಯಲಿದೆಯಾ? ಅಥವಾ ಸೋತು, ಎಲಿಮಿನೇಟರ್ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆಯಾ ಕಾದು ನೋಡಬೇಕಿದೆ.
Published On - 11:08 am, Tue, 27 May 25
