AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025 RCB vs MI: ಸಹೋದರರ ಸವಾಲ್

Mumbai Indians vs Royal Challengers Bengaluru: ಐಪಿಎಲ್ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಒಟ್ಟು 33 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಮುಂಬೈ ಇಂಡಿಯನ್ಸ್ ತಂಡವು 19 ಪಂದ್ಯಗಳಲ್ಲಿ ವಿಜಯ ಸಾಧಿಸಿ ಆರ್​ಸಿಬಿ ವಿರುದ್ಧ ಪಾರುಪತ್ಯ ಮೆರೆದಿದೆ.

IPL 2025 RCB vs MI: ಸಹೋದರರ ಸವಾಲ್
Pandya Brothers
ಝಾಹಿರ್ ಯೂಸುಫ್
|

Updated on:Apr 07, 2025 | 10:20 AM

Share

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2025) 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಇದೀಗ ಸಹೋದರರ ನಡುವಣ ಕದನವಾಗಿ ಮಾರ್ಪಟ್ಟಿದೆ. ಏಕೆಂದರೆ ಆರ್​ಸಿಬಿ ತಂಡದಲ್ಲಿ ಕೃನಾಲ್ ಪಾಂಡ್ಯ ಇದ್ದರೆ, ಮುಂಬೈ ಇಂಡಿಯನ್ಸ್ ಬಳಗದಲ್ಲಿ ಹಾರ್ದಿಕ್ ಪಾಂಡ್ಯ ಇದ್ದಾರೆ.  ಹೀಗಾಗಿ ಇಂದಿನ ಪಂದವು ಅಣ್ತಮ್ಮಂದಿರ ನಡುವಣ ಕಾದಾಟವಾಗಿ ಗುರುತಿಸಿಕೊಂಡಿದೆ.

ಇಬ್ಬರೂ ಆಟಗಾರರು ಈ ಹಿಂದೆ ಮುಂಬೈ ಇಂಡಿಯನ್ಸ್ ಪರ ಜೊತೆಯಾಗಿ ಆಡಿದ್ದರು. ಆ ಬಳಿಕ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿದರೆ, ಕೃನಾಲ್ ಪಾಂಡ್ಯ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದರು.

ಇದೀಗ ಹಾರ್ದಿಕ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಮರಳಿದ್ದಾರೆ. ಇತ್ತ ಕಳೆದ ಬಾರಿ ಲಕ್ನೋ ಪರ ಆಡಿದ್ದ ಕೃನಾಲ್ ಪಾಂಡ್ಯ ಆರ್​ಸಿಬಿ ಜೊತೆ ಹೊಸ ಅಧ್ಯಾಯ ಆರಂಭಿಸಿದ್ದಾರೆ. ಹೀಗಾಗಿ ಈ ವರ್ಷದ ಮುಖಾಮುಖಿಯಲ್ಲಿ ಯಾರು ಮೇಲುಗೈ ಸಾಧಿಸಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿದೆ.

ಇದನ್ನೂ ಓದಿ
Image
ಹುಡುಗಿಯಾಗಿ ಬದಲಾದ ಟೀಮ್ ಇಂಡಿಯಾದ ಮಾಜಿ ಆಟಗಾರನ ಪುತ್ರ
Image
VIDEO: ವಿರಾಟ್ ಕೊಹ್ಲಿಗೆ ಬೌಲಿಂಗ್: ಭಾವುಕರಾಗಿ ಅರ್ಧದಲ್ಲೇ ನಿಂತ ಸಿರಾಜ್
Image
11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ವಿಶ್ವ ದಾಖಲೆ ಬರೆದ ನಸೀಮ್ ಶಾ
Image
MS Dhoni: ಕೇವಲ 3 ರನ್​: ಗ್ರೇಟ್​ ಫಿನಿಶರ್ ಫಿನಿಶ್..!

RCB vs MI ಹೆಡ್ ಟು ಹೆಡ್:

ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು 33 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಮುಂಬೈ ಇಂಡಿಯನ್ಸ್ ತಂಡವು 19 ಬಾರಿ ಗೆಲುವು ದಾಖಲಿಸಿದೆ. ಇನ್ನು ಆರ್​ಸಿಬಿ ತಂಡ ಮುಂಬೈ ವಿರುದ್ಧ ಗೆದ್ದಿರುವುದು ಕೇವಲ 14 ಪಂದ್ಯಗಳಲ್ಲಿ ಮಾತ್ರ.

ಇದಾಗ್ಯೂ ಕೊನೆಯ 6 ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ಪಂದ್ಯಗಳಲ್ಲಿ ವಿಜಯ ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಆರ್​ಸಿಬಿ ಕಡೆಯಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು. ಅದರಲ್ಲೂ ಈ ಪಂದ್ಯ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವುದರಿಂದ ಮುಂಬೈ ಇಂಡಿಯನ್ಸ್ ಕಡೆಯಿಂದಲೂ ಅಮೋಘ ಪ್ರದರ್ಶನ ಎದುರು ನೋಡಬಹುದು.

ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ, ರಯಾನ್ ರಿಕಲ್ಟನ್ (ವಿಕೆಟ್ ಕೀಪರ್) , ಹಾರ್ದಿಕ್ ಪಾಂಡ್ಯ (ನಾಯಕ) , ವಿಲ್ ಜ್ಯಾಕ್ಸ್ , ನಮನ್ ಧೀರ್ , ಸೂರ್ಯಕುಮಾರ್ ಯಾದವ್ , ತಿಲಕ್ ವರ್ಮಾ , ಮಿಚೆಲ್ ಸ್ಯಾಂಟ್ನರ್ , ರಾಜ್ ಬಾವಾ , ದೀಪಕ್ ಚಹರ್ , ಅಶ್ವನಿ ಕುಮಾರ್ , ವಿಘ್ನೇಶ್ ಪುತ್ತೂರ್ , ಜಸ್ಪ್ರೀತ್ ಬುಮ್ರಾ , ಕಾರ್ಬಿನ್ ಬಾಷ್, ಕರ್ಣ್ ಶರ್ಮಾ,  ಟ್ರೆಂಟ್ ಬೌಲ್ಟ್ , ರೀಸ್ ಟೋಪ್ಲಿ , ಮುಜೀಬ್ ಉರ್ ರೆಹಮಾನ್ , ಕೃಷ್ಣನ್ ಶ್ರೀಜಿತ್ , ಅರ್ಜುನ್ ತೆಂಡೂಲ್ಕರ್ , ಬೆವನ್ ಜೇಕಬ್ಸ್.

ಇದನ್ನೂ ಓದಿ: ಒಂದು ಬೌಂಡರಿಗೆ 19 ಎಸೆತಗಳು: ಐಪಿಎಲ್​ನಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಧೋನಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ) , ಜಿತೇಶ್ ಶರ್ಮಾ (ವಿಕೆಟ್ ಕೀಪರ್) , ಫಿಲಿಪ್ ಸಾಲ್ಟ್ , ವಿರಾಟ್ ಕೊಹ್ಲಿ , ದೇವದತ್ ಪಡಿಕ್ಕಲ್ , ಲಿಯಾಮ್ ಲಿವಿಂಗ್​ಸ್ಟೋನ್ , ಕೃನಾಲ್ ಪಾಂಡ್ಯ , ಟಿಮ್ ಡೇವಿಡ್ , ಭುವನೇಶ್ವರ್ ಕುಮಾರ್ , ಜೋಶ್ ಹ್ಯಾಝಲ್​ವುಡ್ , ಯಶ್ ದಯಾಳ್ , ರಾಸಿಖ್ ದಾರ್ ಸಲಾಮ್ , ಸುಯಾಶ್ ಶರ್ಮಾ , ಸ್ವಪ್ನಿಲ್ ಸಿಂಗ್ , ಅಭಿನಂದನ್ ಸಿಂಗ್ , ರೊಮಾರಿಯೋ ಶೆಫರ್ಡ್ , ಲುಂಗಿ ಎನ್​ಗಿಡಿ , ನುವಾನ್ ತುಷಾರ , ಮೋಹಿತ್ ರಥಿ , ಸ್ವಸ್ತಿಕ್ ಚಿಕಾರ.

Published On - 10:17 am, Mon, 7 April 25

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?