AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಬೆಂಗಳೂರಿನಲ್ಲಿ ಇನ್ನೂ ಆರಂಭವಾಗದ ಪಂದ್ಯ; ಮಳೆಯಿಂದ ರದ್ದಾಗುತ್ತಾ?

IPL 2025 Match 34: ಐಪಿಎಲ್ 2025ರ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಬೇಕಿತ್ತು. ಆದರೆ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಪಂದ್ಯ ವಿಳಂಬವಾಗಿದೆ. ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಈ ಪಂದ್ಯಕ್ಕೆ ಮಳೆ ತಡೆಯಾಗಿದ್ದು, ಪಂದ್ಯದ ಆರಂಭದಲ್ಲಿ ವಿಳಂಬ ಉಂಟಾಗಿದೆ. ಆದಾಗ್ಯೂ, ಮೈದಾನದ ಉತ್ತಮ ಒಳಚರಂಡಿ ವ್ಯವಸ್ಥೆಯಿಂದಾಗಿ ಮಳೆ ನಿಂತ ಬಳಿಕ ಪಂದ್ಯ ಶೀಘ್ರದಲ್ಲೇ ಆರಂಭವಾಗುವ ನಿರೀಕ್ಷೆ ಇದೆ.

IPL 2025: ಬೆಂಗಳೂರಿನಲ್ಲಿ ಇನ್ನೂ ಆರಂಭವಾಗದ ಪಂದ್ಯ; ಮಳೆಯಿಂದ ರದ್ದಾಗುತ್ತಾ?
ಚಿನ್ನಸ್ವಾಮಿ ಕ್ರೀಡಾಂಗಣ
Follow us
ಪೃಥ್ವಿಶಂಕರ
|

Updated on:Apr 18, 2025 | 7:46 PM

ಐಪಿಎಲ್ 2025  (IPL 2025)ರ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ (RCB vs PBKS) ತಂಡಗಳು ಇಂದು ಪರಸ್ಪರ ಮುಖಾಮುಖಿಯಾಗಲಿವೆ. ಉಭಯ ತಂಡಗಳ ನಡುವಿನ ಈ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M. Chinnaswamy Stadium) ನಡೆಯಲಿದೆ. ಈ ಆವೃತ್ತಿಯಲ್ಲಿ ಬೆಂಗಳೂರು ತಂಡವು ತವರಿನಲ್ಲಿ ಒಂದೇ ಒಂದು ಗೆಲುವು ದಾಖಲಿಸಲು ಸಾಧ್ಯವಾಗಿಲ್ಲ. ಆದ್ದರಿಂದ ಶತಾಯಗತಾಯ ಗೆಲ್ಲುವ ಇರಾದೆಯೊಂದಿಗೆ ರಜತ್ ಪಡೆ ಕಣಕ್ಕಿಳಕಿಯಲಿದೆ. ಆದರೆ ಈ ಪಂದ್ಯಕ್ಕೆ ಈ ಮೊದಲೇ ನೀಡಿದ್ದ ಮುನ್ಸೂಚನೆಯಂತೆ ಮಳೆಯಿಂದ ಅಡಚಣೆಯುಂಟಾಗಿದೆ. ಬೆಂಗಳೂರಿನಲ್ಲಿ ಮಳೆ ಸುರಿಯುತ್ತಿರುವ ಕಾರಣ ಪಂದ್ಯ ನಿಗದಿತ ಸಮಯಕ್ಕೆ ಆರಂಭವಾಗಿಲ್ಲ.

ಟಾಸ್ ವಿಳಂಬ

ಪೂರ್ವ ನಿಗದಿಯಂತೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ ಹಾಗೂ ಪಂಜಾಬ್ ನಡುವಿನ ಪಂದ್ಯ ಸಂಜೆ 7:30 ಕ್ಕೆ ಆರಂಭವಾಗಬೇಕಾಗಿತ್ತು. ಆದರೆ ಮಳೆಯಿಂದಾಗಿ ಪಂದ್ಯದ ಟಾಸ್ ಕೂಡ ನಡೆದಿಲ್ಲ. ವಾಸ್ತವವಾಗಿ ಪಂದ್ಯದ ಟಾಸ್ ಸಂಜೆ 7 ಗಂಟೆಗೆ ನಡೆಯಬೇಕಿತ್ತು. ಆದರೆ ಅದೂ ಕೂಡ ನಡೆದಿಲ್ಲ. ಹೀಗಾಗಿ ಈ ಪಂದ್ಯದ ಆರಂಭದಲ್ಲಿ ಈಗಾಗಲೇ ವಿಳಂಬವಾಗಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಧಾರಾಕಾರವಾಗಿ ಮಳೆಯಾಗದಿದ್ದರೂ, ತುಂತುರು ಮಳೆಯಾಗುತ್ತಿದೆ. ಹೀಗಾಗಿ ಮೈದಾನದ ಪಿಚ್ ಮೇಲೆ ಹಾಸಿರುವ ಹೊದಿಕೆಯನ್ನು ಸಹ ಇನ್ನು ತೆರವುಗೊಳಿಸಲಾಗಿಲ್ಲ.

ಹವಾಮಾನ ವರದಿ ಏನಿದೆ?

ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಧಾರಕಾರವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ ಇಂದಿನ ಪಂದ್ಯಕ್ಕೂ ಮಳೆ ಅಡ್ಡಿಪಡಿಸಬಹುದು ಎಂಬ ಆತಂಕ ಅಭಿಮಾನಿಗಳಲ್ಲಿ ಮೂಡಿತ್ತು. ಅದರಂತೆ ಇದೀಗ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಹವಾಮಾನ ವರದಿಯ ಪ್ರಕಾರ, ಏಪ್ರಿಲ್ 18 ರಂದು ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದಿರಲ್ಲಿದ್ದು ಲಘು ಮಳೆಯಾಗುವ ನಿರೀಕ್ಷೆಯಿತ್ತು. ಅದರ ಪ್ರಕಾರವೇ ಇದೀಗ ಬೆಂಗಳೂರಿನಲ್ಲಿ ತುಂತುರ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಸ್ವಲ್ಪ ತಡವಾದರೂ ಪಂದ್ಯ ನಡೆಯುವ ಸಾಧ್ಯತೆಗಳಿವೆ.

ಅತ್ಯಾಧುನಿಕ ಒಳಚರಂಡಿ ವ್ಯವಸ್ಥೆ

ಆದಾಗ್ಯೂ ಎಂ ಚಿನ್ನಸ್ವಾಮಿ ಮೈದಾನದ ಒಳಚರಂಡಿ ವ್ಯವಸ್ಥೆ ಸಾಕಷ್ಟು ಉತ್ತಮವಾಗಿರುವ ಕಾರಣ ಎಷ್ಟೇ ಮಳೆ ಬಿದ್ದರೂ ಕೆಲವೇ ನಿಮಿಷಗಳಲ್ಲಿ ಮೈದಾನವನ್ನು ಸಂಪೂರ್ಣವಾಗಿ ಆಟಕ್ಕೆ ಸಿದ್ದಗೊಳಿಸಬಹುದು. ಮಳೆ ನಿಂತ ಬಳಿಕ ಆಟವನ್ನು ಪುನರಾರಂಭಿಸಲು 30 ನಿಮಿಷಗಳಿಗಿಂತ ಕಡಿಮೆ ಸಮಯ ತೆಗೆದುಕೊಳ್ಳುತ್ತದೆ. ಹೀಗಾಗಿ ಮಳೆ ಬಂದರೂ ಪಂದ್ಯದ ವೇಳೆಗೆ ನಿಲ್ಲಲಿ ಎಂಬುದು ಆರ್​ಸಿಬಿ ಅಭಿಮಾನಿಗಳ ಆಶಯವಾಗಿದೆ.

RCB vs PBKS Live Score, IPL 2025: ಮಳೆಯಿಂದಾಗಿ ಟಾಸ್ ವಿಳಂಬ

ಉಭಯ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ಜೋಶ್ ಹೇಜಲ್‌ವುಡ್, ರಸಿಖ್ ದಾರ್, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ನುವಾನ್ ತುಷಾರ, ಜೇಕಬ್ ಬೆಥೆಲ್, ಮನೋಜ್ ಭಾಂಡಗೆ, ದೇವದತ್ತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರಾ, ಲುಂಗಿ ಎನ್‌ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ.

ಪಂಜಾಬ್ ಕಿಂಗ್ಸ್: ಶಶಾಂಕ್ ಸಿಂಗ್, ಪ್ರಭಾಸಿಮ್ರಾನ್ ಸಿಂಗ್, ಶ್ರೇಯಸ್ ಅಯ್ಯರ್, ನೆಹಾಲ್ ವಧೇರಾ, ವಿಷ್ಣು ವಿನೋದ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಯುಜ್ವೇಂದ್ರ ಚಹಾಲ್, ಹರ್‌ಪ್ರೀತ್ ಬ್ರಾರ್, ಅರ್ಷ್‌ದೀಪ್ ಸಿಂಗ್, ವಿಜಯ್‌ಕುಮಾರ್ ವೈಶಾಕ್, ಯಶ್ ಠಾಕೂರ್, ಮಾರ್ಕೊ ಯಾನ್ಸೆನ್, ಪ್ರಿಯಾಂಶ್ ಆರ್ಯ, ಅಜ್ಮತುಲ್ಲಾ ಒಮರ್ಜಾಯ್, ಆರನ್ ಹಾರ್ಡಿ, ಕ್ಸೇವಿಯರ್ ಬಾರ್ಟ್ಲೆಟ್, ಕುಲದೀಪ್ ಸೇನ್, ಸೂರ್ಯಾಂಶ್ ಶೆಡ್ಜ್, ಮುಶೀರ್ ಖಾನ್, ಹರ್ನೂರ್ ಪನ್ನು, ಪೈಲಾ ಅವಿನಾಶ್, ಪ್ರವೀಣ್ ದುಬೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:40 pm, Fri, 18 April 25

ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ