
ಐಪಿಎಲ್ 2025 (IPL 2025)ರ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ (RCB vs PBKS) ತಂಡಗಳು ಇಂದು ಪರಸ್ಪರ ಮುಖಾಮುಖಿಯಾಗಲಿವೆ. ಉಭಯ ತಂಡಗಳ ನಡುವಿನ ಈ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M. Chinnaswamy Stadium) ನಡೆಯಲಿದೆ. ಈ ಆವೃತ್ತಿಯಲ್ಲಿ ಬೆಂಗಳೂರು ತಂಡವು ತವರಿನಲ್ಲಿ ಒಂದೇ ಒಂದು ಗೆಲುವು ದಾಖಲಿಸಲು ಸಾಧ್ಯವಾಗಿಲ್ಲ. ಆದ್ದರಿಂದ ಶತಾಯಗತಾಯ ಗೆಲ್ಲುವ ಇರಾದೆಯೊಂದಿಗೆ ರಜತ್ ಪಡೆ ಕಣಕ್ಕಿಳಕಿಯಲಿದೆ. ಆದರೆ ಈ ಪಂದ್ಯಕ್ಕೆ ಈ ಮೊದಲೇ ನೀಡಿದ್ದ ಮುನ್ಸೂಚನೆಯಂತೆ ಮಳೆಯಿಂದ ಅಡಚಣೆಯುಂಟಾಗಿದೆ. ಬೆಂಗಳೂರಿನಲ್ಲಿ ಮಳೆ ಸುರಿಯುತ್ತಿರುವ ಕಾರಣ ಪಂದ್ಯ ನಿಗದಿತ ಸಮಯಕ್ಕೆ ಆರಂಭವಾಗಿಲ್ಲ.
ಪೂರ್ವ ನಿಗದಿಯಂತೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಹಾಗೂ ಪಂಜಾಬ್ ನಡುವಿನ ಪಂದ್ಯ ಸಂಜೆ 7:30 ಕ್ಕೆ ಆರಂಭವಾಗಬೇಕಾಗಿತ್ತು. ಆದರೆ ಮಳೆಯಿಂದಾಗಿ ಪಂದ್ಯದ ಟಾಸ್ ಕೂಡ ನಡೆದಿಲ್ಲ. ವಾಸ್ತವವಾಗಿ ಪಂದ್ಯದ ಟಾಸ್ ಸಂಜೆ 7 ಗಂಟೆಗೆ ನಡೆಯಬೇಕಿತ್ತು. ಆದರೆ ಅದೂ ಕೂಡ ನಡೆದಿಲ್ಲ. ಹೀಗಾಗಿ ಈ ಪಂದ್ಯದ ಆರಂಭದಲ್ಲಿ ಈಗಾಗಲೇ ವಿಳಂಬವಾಗಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಧಾರಾಕಾರವಾಗಿ ಮಳೆಯಾಗದಿದ್ದರೂ, ತುಂತುರು ಮಳೆಯಾಗುತ್ತಿದೆ. ಹೀಗಾಗಿ ಮೈದಾನದ ಪಿಚ್ ಮೇಲೆ ಹಾಸಿರುವ ಹೊದಿಕೆಯನ್ನು ಸಹ ಇನ್ನು ತೆರವುಗೊಳಿಸಲಾಗಿಲ್ಲ.
ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಧಾರಕಾರವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ ಇಂದಿನ ಪಂದ್ಯಕ್ಕೂ ಮಳೆ ಅಡ್ಡಿಪಡಿಸಬಹುದು ಎಂಬ ಆತಂಕ ಅಭಿಮಾನಿಗಳಲ್ಲಿ ಮೂಡಿತ್ತು. ಅದರಂತೆ ಇದೀಗ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಹವಾಮಾನ ವರದಿಯ ಪ್ರಕಾರ, ಏಪ್ರಿಲ್ 18 ರಂದು ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದಿರಲ್ಲಿದ್ದು ಲಘು ಮಳೆಯಾಗುವ ನಿರೀಕ್ಷೆಯಿತ್ತು. ಅದರ ಪ್ರಕಾರವೇ ಇದೀಗ ಬೆಂಗಳೂರಿನಲ್ಲಿ ತುಂತುರ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಸ್ವಲ್ಪ ತಡವಾದರೂ ಪಂದ್ಯ ನಡೆಯುವ ಸಾಧ್ಯತೆಗಳಿವೆ.
ಆದಾಗ್ಯೂ ಎಂ ಚಿನ್ನಸ್ವಾಮಿ ಮೈದಾನದ ಒಳಚರಂಡಿ ವ್ಯವಸ್ಥೆ ಸಾಕಷ್ಟು ಉತ್ತಮವಾಗಿರುವ ಕಾರಣ ಎಷ್ಟೇ ಮಳೆ ಬಿದ್ದರೂ ಕೆಲವೇ ನಿಮಿಷಗಳಲ್ಲಿ ಮೈದಾನವನ್ನು ಸಂಪೂರ್ಣವಾಗಿ ಆಟಕ್ಕೆ ಸಿದ್ದಗೊಳಿಸಬಹುದು. ಮಳೆ ನಿಂತ ಬಳಿಕ ಆಟವನ್ನು ಪುನರಾರಂಭಿಸಲು 30 ನಿಮಿಷಗಳಿಗಿಂತ ಕಡಿಮೆ ಸಮಯ ತೆಗೆದುಕೊಳ್ಳುತ್ತದೆ. ಹೀಗಾಗಿ ಮಳೆ ಬಂದರೂ ಪಂದ್ಯದ ವೇಳೆಗೆ ನಿಲ್ಲಲಿ ಎಂಬುದು ಆರ್ಸಿಬಿ ಅಭಿಮಾನಿಗಳ ಆಶಯವಾಗಿದೆ.
RCB vs PBKS Live Score, IPL 2025: ಮಳೆಯಿಂದಾಗಿ ಟಾಸ್ ವಿಳಂಬ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ಜೋಶ್ ಹೇಜಲ್‌ವುಡ್, ರಸಿಖ್ ದಾರ್, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ನುವಾನ್ ತುಷಾರ, ಜೇಕಬ್ ಬೆಥೆಲ್, ಮನೋಜ್ ಭಾಂಡಗೆ, ದೇವದತ್ತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರಾ, ಲುಂಗಿ ಎನ್‌ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ.
ಪಂಜಾಬ್ ಕಿಂಗ್ಸ್: ಶಶಾಂಕ್ ಸಿಂಗ್, ಪ್ರಭಾಸಿಮ್ರಾನ್ ಸಿಂಗ್, ಶ್ರೇಯಸ್ ಅಯ್ಯರ್, ನೆಹಾಲ್ ವಧೇರಾ, ವಿಷ್ಣು ವಿನೋದ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಯುಜ್ವೇಂದ್ರ ಚಹಾಲ್, ಹರ್‌ಪ್ರೀತ್ ಬ್ರಾರ್, ಅರ್ಷ್‌ದೀಪ್ ಸಿಂಗ್, ವಿಜಯ್‌ಕುಮಾರ್ ವೈಶಾಕ್, ಯಶ್ ಠಾಕೂರ್, ಮಾರ್ಕೊ ಯಾನ್ಸೆನ್, ಪ್ರಿಯಾಂಶ್ ಆರ್ಯ, ಅಜ್ಮತುಲ್ಲಾ ಒಮರ್ಜಾಯ್, ಆರನ್ ಹಾರ್ಡಿ, ಕ್ಸೇವಿಯರ್ ಬಾರ್ಟ್ಲೆಟ್, ಕುಲದೀಪ್ ಸೇನ್, ಸೂರ್ಯಾಂಶ್ ಶೆಡ್ಜ್, ಮುಶೀರ್ ಖಾನ್, ಹರ್ನೂರ್ ಪನ್ನು, ಪೈಲಾ ಅವಿನಾಶ್, ಪ್ರವೀಣ್ ದುಬೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:40 pm, Fri, 18 April 25