IPL 2025: ಮೊದಲ ಬಾರಿಗೆ ಬದಲಾದ ಸಮಯದಲ್ಲಿ ಪಂದ್ಯವನ್ನಾಡಲಿದೆ ಆರ್‌ಸಿಬಿ; ಎದುರಾಳಿ ಯಾರು?
RCB vs RR: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಐಪಿಎಲ್ 2025ರ 28ನೇ ಪಂದ್ಯ ಏಪ್ರಿಲ್ 13 ರಂದು ಮಧ್ಯಾಹ್ನ 3:30 ಕ್ಕೆ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋ ಸಿನಿಮಾಗಳಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಆರ್‌ಸಿಬಿ ತಮ್ಮ ತವರಿನಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವುದರಿಂದ ಈ ಪಂದ್ಯ ಅವರಿಗೆ ಮಹತ್ವದ್ದಾಗಿದೆ.

2025 ರ ಐಪಿಎಲ್‌ನಲ್ಲಿ (IPL 2025) ಉತ್ತಮ ಆರಂಭ ಪಡೆದುಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಆದ್ಯಾಕೋ ತವರಿನಲ್ಲಿ ಎಡವುತ್ತಿರುವಂತೆ ಕಾಣುತ್ತಿದೆ. ತವರಿನ ಹೊರಗೆ ಆಡಿದ ಮೂರು ಪಂದ್ಯಗಳನ್ನು ಗೆದ್ದಿರುವ ರಜತ್ ಪಡೆ ತವರಿನಲ್ಲಿ ನಡೆದಿರುವ ಎರಡು ಪಂದ್ಯಗಳಲ್ಲಿ ಸೋತಿದೆ. ಕಳೆದ ಪಂದ್ಯದಲ್ಲಿ ಆರ್‌ಸಿಬಿ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ತಮ್ಮ ತವರು ಮೈದಾನ ಎಂ ಚಿನ್ನಸ್ವಾಮಿಯಲ್ಲಿ ಸೋಲು ಅನುಭವಿಸಿತ್ತು. ಹೀಗಾಗಿ ಸೋಲಿನ ಆಘಾತದಲ್ಲಿರುವ ಆರ್‌ಸಿಬಿ ಇದೀಗ ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು ಅವರ ತವರು ಮೈದಾನದಲ್ಲಿ ಎದುರಿಸಲು ಸಜ್ಜಾಗಿದೆ. ಈ ಪಂದ್ಯವನ್ನು ಆರ್‌ಸಿಬಿ, ರಾಜಸ್ಥಾನ್ ತಂಡದ ತವರು ಮೈದಾನದಲ್ಲಿ ಆಡುತ್ತಿರುವ ಕಾರಣ, ಗೆಲುವಿನ ಫೇವರೇಟ್ ಎನಿಸಿಕೊಂಡಿದೆ. ಈ ಉಭಯ ತಂಡಗಳ ಕಾಳಗ ಎಷ್ಟು ಗಂಟೆಗೆ ಆರಂಭವಾಗಲಿದೆ. ನೇರಪ್ರಸಾರದ ಯಾವ ಚಾನೆಲ್ನಲ್ಲಿ ಎಂಬುದರ ಪೂರ್ಣ ವಿವರ ಇಲ್ಲಿದೆ.
ಆರ್‌ಸಿಬಿ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 28ನೇ ಪಂದ್ಯ ಯಾವಾಗ ನಡೆಯಲಿದೆ?
ಆರ್‌ಸಿಬಿ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 28ನೇ ಪಂದ್ಯ ಏಪ್ರಿಲ್ 13 ರಂದು ನಡೆಯಲಿದೆ.
ಆರ್‌ಸಿಬಿ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 28ನೇ ಪಂದ್ಯ ಎಲ್ಲಿ ನಡೆಯಲಿದೆ?
ಆರ್‌ಸಿಬಿ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 28ನೇ ಪಂದ್ಯ ರಾಜಸ್ಥಾನದ ತವರು ಮೈದಾನವಾದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಆರ್‌ಸಿಬಿ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 28ನೇ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಆರ್‌ಸಿಬಿ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 28ನೇ ಪಂದ್ಯ ಮಧ್ಯಾಹ್ನ 3:30 ಕ್ಕೆ ಆರಂಭವಾಗಲಿದೆ. ಟಾಸ್ 3 ಗಂಟೆಗೆ ನಡೆಯಲಿದೆ. ಆರ್‌ಸಿಬಿ ಇದುವರೆಗೆ ಆಡಿರುವ 5 ಪಂದ್ಯಗಳು ರಾತ್ರಿ ಪಂದ್ಯಗಳಾಗಿದ್ದವು. ಆದರೆ ಇದೇ ಮೊದಲ ಬಾರಿಗೆ ಆರ್‌ಸಿಬಿ ಮಧ್ಯಾಹ್ನದ ಪಂದ್ಯವನ್ನು ಆಡಲಿದೆ.
ಆರ್‌ಸಿಬಿ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 28ನೇ ಪಂದ್ಯ ಯಾವ ಚಾನೆಲ್ನಲ್ಲಿ ನೇರಪ್ರಸಾರ?
ಆರ್‌ಸಿಬಿ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 28ನೇ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಹಾಗೂ ಜಿಯೋ ಹಾಟ್ಸ್ಟಾರ್ನಲ್ಲಿ ವೀಕ್ಷಿಸಬಹುದಾಗಿದೆ.
IPL 2025: ಸಿಕ್ಸರ್ ಮೂಲಕ 99ನೇ ಅರ್ಧಶತಕ ಪೂರೈಸಿದ ಕೊಹ್ಲಿ; ವಿಡಿಯೋ ನೋಡಿ
ಉಭಯ ತಂಡಗಳು
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಧ್ರುವ್ ಜುರೆಲ್, ರಿಯಾನ್ ಪರಾಗ್, ಶಿಮ್ರೋನ್ ಹೆಟ್ಮೆಯರ್, ಸಂದೀಪ್ ಶರ್ಮಾ, ಜೋಫ್ರಾ ಆರ್ಚರ್, ವನಿಂದು ಹಸರಂಗ, ಮಹೇಶ್ ತೀಕ್ಷಣ, ಆಕಾಶ್ ಮಧ್ವಲ್, ಕುಮಾರ್ ಕಾರ್ತಿಕೇಯ, ತುಷಾರ್ ದೇಶಪಾಂಡೆ, ನಿತೀಶ್ ರಾಣಾ, ಫಜಲ್ಹಕ್ ಫಾರೂಕಿ, ಶುಭಂ ದುಬೆ, ಯುಧ್ವೀರ್ ಚರಕ್, ವೈಭವ್ ಸೂರ್ಯವಂಶಿ, ಕುನಾಲ್ ರಾಥೋಡ್, ಕ್ವೆನಾ ಮಫಕಾ, ಅಶೋಕ್ ಶರ್ಮಾ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ಜೋಶ್ ಹೇಜಲ್‌ವುಡ್, ರಸಿಖ್ ದಾರ್, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ನುವಾನ್ ತುಷಾರ, ಜೇಕಬ್ ಬೆಥೆಲ್, ಮನೋಜ್ ಭಾಂಡಗೆ, ದೇವದತ್ತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರಾ, ಲುಂಗಿ ಎನ್‌ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ