AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಆರ್​ಸಿಬಿಗೆ ಜಿತೇಶ್ ನಾಯಕ, ಮಯಾಂಕ್​ಗೆ ತಂಡದಲ್ಲಿ ಸ್ಥಾನ; ಹೇಗಿದೆ ಪ್ಲೇಯಿಂಗ್ 11?

IPL 2025 RCB vs SRH match 65: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಆರ್‌ಸಿಬಿ ತಂಡದ ಖಾಯಂ ನಾಯಕ ರಜತ್ ಪಾಟಿದಾರ್ ಈ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಅವರ ಸ್ಥಾನದಲ್ಲಿ ಜಿತೇಶ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ.

IPL 2025: ಆರ್​ಸಿಬಿಗೆ ಜಿತೇಶ್ ನಾಯಕ, ಮಯಾಂಕ್​ಗೆ ತಂಡದಲ್ಲಿ ಸ್ಥಾನ; ಹೇಗಿದೆ ಪ್ಲೇಯಿಂಗ್ 11?
Rcb Vs Srh
ಪೃಥ್ವಿಶಂಕರ
|

Updated on:May 23, 2025 | 7:21 PM

Share

ಆರ್‌ಸಿಬಿ, ಐಪಿಎಲ್ 2025 (IPL 2025) ರ ಪ್ಲೇಆಫ್‌ಗೆ ಅರ್ಹತೆ ಪಡೆದುಕೊಂಡಿದೆ. ರಜತ್ ಪಾಟಿದಾರ್ ನಾಯಕತ್ವದಲ್ಲಿ, ಈ ಸೀಸನ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರದರ್ಶನ ಅದ್ಭುತವಾಗಿದೆ. ಇದೀಗ ಪ್ಲೇಆಫ್‌ಗೆ ಅರ್ಹತೆ ಪಡೆದುಕೊಂಡಿರುವ ಆರ್​ಸಿಬಿ ಮೊದಲೆರಡು ಸ್ಥಾನಗಳಲ್ಲಿ ಲೀಗ್ ಮುಗಿಸಲು ನೋಡುತ್ತಿದೆ. ಹೀಗಾಗಿ ಉಳಿದಿರುವ ಎರಡು ಪಂದ್ಯಗಳನ್ನು ಆರ್​ಸಿಬಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಅದರಂತೆ ಇಂದಿನ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ (SRH) ತಂಡವನ್ನು ಎದುರಿಸುತ್ತಿರುವ ಆರ್​ಸಿಬಿ, ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯುತ್ತಿದೆ. ಇತ್ತ ಲೀಗ್ ಹಂತದಲ್ಲೇ ಐಪಿಎಲ್ ಪ್ರಯಾಣ ಮುಗಿಸಿರುವ ಸನ್‌ರೈಸರ್ಸ್ ಹೈದರಾಬಾದ್ ಗೆಲುವಿನೊಂದಿಗೆ ಟೂರ್ನಿ ಮುಗಿಸಲು ಎದುರು ನೋಡುತ್ತಿದೆ.

ಟಾಸ್ ಗೆದ್ದ ಆರ್​ಸಿಬಿ

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಆರ್‌ಸಿಬಿ ತಂಡದ ಖಾಯಂ ನಾಯಕ ರಜತ್ ಪಾಟಿದಾರ್ ಈ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಅವರ ಸ್ಥಾನದಲ್ಲಿ ಜಿತೇಶ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಜಿತೇಶ್ ಆರ್‌ಸಿಬಿ ತಂಡದ ನಾಯಕತ್ವ ವಹಿಸುತ್ತಿರುವುದು ಇದೇ ಮೊದಲು. ಇದಕ್ಕೂ ಮೊದಲು ಅವರು ಸನ್‌ರೈಸರ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡದ ನಾಯಕತ್ವ ವಹಿಸಿದ್ದರು.

ಉಭಯ ತಂಡಗಳಲ್ಲೂ ಬದಲಾವಣೆ

ಟಾಸ್ ಸಮಯದಲ್ಲಿ ಆಡುವ ಹನ್ನೊಂದರ ಬಳಗದ ಬಗ್ಗೆ ಮಾತನಾಡಿದ ಜಿತೇಶ್, ಪಾಟಿದಾರ್ ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಲಿದ್ದಾರೆ ಮತ್ತು ದೇವದತ್ ಪಡಿಕ್ಕಲ್ ಬದಲಿಗೆ ಮಯಾಂಕ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಹಾಗೆಯೇ ಜೆಕಬ್ ಬೆಥೆಲ್ ಬದಲಿಗೆ ಫಿಲ್ ಸಾಲ್ಟ್ ಮತ್ತೊಮ್ಮೆ ತಂಡ ಸೇರಿಕೊಂಡಿದ್ದಾರೆ ಎಂದರು. ಇತ್ತ ಈ ಪಂದ್ಯಕ್ಕಾಗಿ ಸನ್‌ರೈಸರ್ಸ್ ಹೈದರಾಬಾದ್‌ ಕೂಡ ಪ್ಲೇಯಿಂಗ್-11 ರಲ್ಲಿ ಮೂರು ಬದಲಾವಣೆಗಳನ್ನು ಮಾಡಿದ್ದು, ಟ್ರಾವಿಸ್ ಹೆಡ್ ತಂಡಕ್ಕೆ ಮರಳಿದ್ದಾರೆ. ಉಳಿದಂತೆ ಅಭಿನವ್ ಮನೋಹರ್ ಮತ್ತು ಜಯದೇವ್ ಉನದ್ಕಟ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

RCB vs SRH Live Score, IPL 2025: ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ಕೆ

ಎರಡೂ ತಂಡಗಳ ಪ್ಲೇಯಿಂಗ್-11

ಸನ್ ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್, ಅನಿಕೇತ್ ವರ್ಮಾ, ಅಭಿನವ್ ಮನೋಹರ್, ಪ್ಯಾಟ್ ಕಮಿನ್ಸ್ (ನಾಯಕ), ಹರ್ಷಲ್ ಪಟೇಲ್, ಜಯದೇವ್ ಉನದ್ಕಟ್, ಇಶಾನ್ ಮಾಲಿಂಗ.

ಆರ್‌ಸಿಬಿ: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ಮಯಾಂಕ್ ಅಗರ್ವಾಲ್, ಜಿತೇಶ್ ಶರ್ಮಾ (ನಾಯಕ ಮತ್ತು ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಲ್, ಲುಂಗ್ ಎನ್‌ಗಿಡಿ, ಸುಯಾಶ್ ಶರ್ಮಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:19 pm, Fri, 23 May 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್