AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಪಂಜಾಬ್ ಕಿಂಗ್ಸ್ ತಂಡಕ್ಕೆ ಸೋಲು: RCB ಹಾದಿ ಸುಗಮ

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 66 ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ ತಂಡವು ಅಗ್ರ ಅಲಂಕರಿಸಿದರೆ, ಪಂಜಾಬ್ ಕಿಂಗ್ಸ್ ತಂಡವು ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಇನ್ನು ಆರ್​ಸಿಬಿ ತಂಡವು ಮೂರನೇ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್ ನಾಲ್ಕನೇ ಸ್ಥಾನವನ್ನು ಅಲಂಕರಿಸಿದೆ.

IPL 2025: ಪಂಜಾಬ್ ಕಿಂಗ್ಸ್ ತಂಡಕ್ಕೆ ಸೋಲು: RCB ಹಾದಿ ಸುಗಮ
Rcb - Pbks
ಝಾಹಿರ್ ಯೂಸುಫ್
|

Updated on:May 25, 2025 | 8:33 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 66ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಸೋಲನುಭವಿಸಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 206 ರನ್​ ಕಲೆಹಾಕಿದರೆ, ಈ ಗುರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ 19.3 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಡೆಲ್ಲಿ ಪಡೆ 6 ವಿಕೆಟ್​ಗಳ ಜಯ ಸಾಧಿಸಿದೆ.

ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಜಯ ಸಾಧಿಸುತ್ತಿದ್ದಂತೆ, ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಕ್ವಾಲಿಫೈಯರ್ ಹಾದಿ ಸುಗಮವಾಗಿದೆ. ಅಂದರೆ ಆರ್​ಸಿಬಿ ತಂಡವು ಮೊದಲ ಕ್ವಾಲಿಫೈಯರ್ ಪಂದ್ಯವಾಡಲು ಅರ್ಹತೆ ಪಡೆಯಬೇಕಿದ್ದರೆ, ಮುಂದಿನ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ ಸಾಕು.

ಒಂದು ವೇಳೆ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ, 19 ಅಂಕಗಳೊಂದಿಗೆ ದ್ವಿತೀಯ ಸ್ಥಾನಕ್ಕೇರಲಿದೆ. ಇದೇ ವೇಳೆ ಪಂಜಾಬ್ ಕಿಂಗ್ಸ್ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋತರೆ, ಆರ್​ಸಿಬಿ ತಂಡ ಮೊದಲ ಕ್ವಾಲಿಫೈಯರ್ ಪಂದ್ಯವಾಡುವುದು ಖಚಿತವಾಗಲಿದೆ.

ಇನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಗೆದ್ದರೂ ಆರ್​ಸಿಬಿ ತಂಡವು ಮೊದಲ ಕ್ವಾಲಿಫೈಯರ್ ಪಂದ್ಯವಾಡಲು ಅರ್ಹತೆ ಪಡೆಯಬಹುದು. ಇದಕ್ಕಾಗಿ ಆರ್​ಸಿಬಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನೆಟ್ ರನ್ ರೇಟ್ ಅನ್ನು ಗುರಿಯಾಗಿಸಿ ಅಮೋಘ ಗೆಲುವು ದಾಖಲಿಸಬೇಕಾಗುತ್ತದೆ.

ಹೀಗಾಗಿ ಆರ್​ಸಿಬಿ ತಂಡವು ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯವನ್ನು ಸಹ ಎದುರು ನೋಡಲಿದ್ದಾರೆ. ಈ ಮ್ಯಾಚ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊನೆಯ ಲೀಗ್​ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಜಯಗಳಿಸಿದರೆ ಸಾಕು. ಈ ಮೂಲಕ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಥವಾ ದ್ವಿತೀಯ ಸ್ಥಾನ ಅಲಂಕರಿಸಿ ಮೊದಲ ಕ್ವಾಲಿಫೈಯರ್ ಪಂದ್ಯವಾಡಬಹುದು.

ಮೊದಲ ಕ್ವಾಲಿಫೈಯರ್ ಪಂದ್ಯವಾಡಲೇಕೆ ಪೈಪೋಟಿ?

ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಪಂದ್ಯಗಳು ಮೇ 29 ರಿಂದ ಶುರುವಾಗಲಿದೆ. ಆದರೆ ಇಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ಹಾಗೂ ಎಲಿಮಿನೇಟರ್ ಮ್ಯಾಚ್​ಗಳನ್ನು ಆಡುವ ತಂಡಗಳಾವುವು ಎಂಬುದು ಇನ್ನೂ ಸಹ ನಿರ್ಧಾರವಾಗಿಲ್ಲ.

ಲೀಗ್ ಹಂತದ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಮೊದಲ ಕ್ವಾಲಿಫೈಯರ್ ಪಂದ್ಯವಾಡಲಿದ್ದಾರೆ. ಇನ್ನು ಮೂರನೇ ಮತ್ತು ನಾಲ್ಕನೇ ಸ್ಥಾನಗಳನ್ನು ಅಲಂಕರಿಸುವ ಟೀಮ್​ಗಳು ಎಲಿಮಿನೇಟರ್ ಪಂದ್ಯವಾಡಲಿದೆ.

ಇಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್​ಗೆ ಪ್ರವೇಶಿಸಿದರೆ, ಸೋತ ತಂಡ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಅಂದರೆ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡಕ್ಕೆ ಮತ್ತೊಂದು ಅವಕಾಶ ದೊರೆಯಲಿದೆ.

ಆದರೆ ಎಲಿಮಿನೇಟರ್ ಪಂದ್ಯದಲ್ಲಿ ಸೋಲುವ ತಂಡ ಪ್ಲೇಆಫ್​ನಿಂದ ಹೊರಬೀಳಲಿದೆ. ಹೀಗಾಗಿಯೇ ಎಲಿಮಿನೇಟರ್ ಪಂದ್ಯವು ಮಾಡು ಇಲ್ಲವೇ ಮಡಿ ಪಂದ್ಯ. ಇದೇ ಕಾರಣದಿಂದಾಗಿ ಎಲ್ಲಾ ತಂಡಗಳು ಮೊದಲ ಕ್ವಾಲಿಫೈಯರ್ ಪಂದ್ಯವಾಡಲು ಅವಕಾಶವನ್ನು ಎದುರು ನೋಡುತ್ತಿದೆ.

ಇದನ್ನೂ ಓದಿ: IPL 2025: ಬಂದ್ಬಿಟ್ಟ… RCB ತಂಡಕ್ಕೆ ರಣ ಬೇಟೆಗಾರ ಬಂದೇ ಬಿಟ್ಟ..!

ಅದರಂತೆ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದ ತಂಡ ಫೈನಲ್​ಗೆ ಎಂಟ್ರಿ ಕೊಟ್ಟರೆ, ಸೋತ ತಂಡ ಎರಡನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಇನ್ನು ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡ 2ನೇ ಕ್ವಾಲಿಫೈಯರ್​ ಪಂದ್ಯದಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್​ಗೆ ಅರ್ಹತೆ ಪಡೆಯಲಿದೆ. ಹೀಗಾಗಿಯೇ ಇದೀಗ ಮೊದಲ ಕ್ವಾಲಿಫೈಯರ್​ ಅರ್ಹತೆಗಾಗಿ ನಾಲ್ಕು ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ.

Published On - 8:30 am, Sun, 25 May 25

Follow Us
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತೊಂದು ಶಾಕ್!
ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತೊಂದು ಶಾಕ್!
ದೇಶದಲ್ಲಿ ಹೆಚ್ಚಿದ H1N1 ಭೀತಿ: 'ಆತಂಕ ಬೇಡ' ಎಂದ ಯು.ಟಿ. ಖಾದರ್
ದೇಶದಲ್ಲಿ ಹೆಚ್ಚಿದ H1N1 ಭೀತಿ: 'ಆತಂಕ ಬೇಡ' ಎಂದ ಯು.ಟಿ. ಖಾದರ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ