
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 66ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಸೋಲನುಭವಿಸಿದೆ. ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 206 ರನ್ ಕಲೆಹಾಕಿದರೆ, ಈ ಗುರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ 19.3 ಓವರ್ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಡೆಲ್ಲಿ ಪಡೆ 6 ವಿಕೆಟ್ಗಳ ಜಯ ಸಾಧಿಸಿದೆ.
ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಜಯ ಸಾಧಿಸುತ್ತಿದ್ದಂತೆ, ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಕ್ವಾಲಿಫೈಯರ್ ಹಾದಿ ಸುಗಮವಾಗಿದೆ. ಅಂದರೆ ಆರ್ಸಿಬಿ ತಂಡವು ಮೊದಲ ಕ್ವಾಲಿಫೈಯರ್ ಪಂದ್ಯವಾಡಲು ಅರ್ಹತೆ ಪಡೆಯಬೇಕಿದ್ದರೆ, ಮುಂದಿನ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ ಸಾಕು.
ಒಂದು ವೇಳೆ ಆರ್ಸಿಬಿ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ, 19 ಅಂಕಗಳೊಂದಿಗೆ ದ್ವಿತೀಯ ಸ್ಥಾನಕ್ಕೇರಲಿದೆ. ಇದೇ ವೇಳೆ ಪಂಜಾಬ್ ಕಿಂಗ್ಸ್ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋತರೆ, ಆರ್ಸಿಬಿ ತಂಡ ಮೊದಲ ಕ್ವಾಲಿಫೈಯರ್ ಪಂದ್ಯವಾಡುವುದು ಖಚಿತವಾಗಲಿದೆ.
ಇನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಗೆದ್ದರೂ ಆರ್ಸಿಬಿ ತಂಡವು ಮೊದಲ ಕ್ವಾಲಿಫೈಯರ್ ಪಂದ್ಯವಾಡಲು ಅರ್ಹತೆ ಪಡೆಯಬಹುದು. ಇದಕ್ಕಾಗಿ ಆರ್ಸಿಬಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನೆಟ್ ರನ್ ರೇಟ್ ಅನ್ನು ಗುರಿಯಾಗಿಸಿ ಅಮೋಘ ಗೆಲುವು ದಾಖಲಿಸಬೇಕಾಗುತ್ತದೆ.
ಹೀಗಾಗಿ ಆರ್ಸಿಬಿ ತಂಡವು ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯವನ್ನು ಸಹ ಎದುರು ನೋಡಲಿದ್ದಾರೆ. ಈ ಮ್ಯಾಚ್ನಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊನೆಯ ಲೀಗ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಜಯಗಳಿಸಿದರೆ ಸಾಕು. ಈ ಮೂಲಕ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಥವಾ ದ್ವಿತೀಯ ಸ್ಥಾನ ಅಲಂಕರಿಸಿ ಮೊದಲ ಕ್ವಾಲಿಫೈಯರ್ ಪಂದ್ಯವಾಡಬಹುದು.
ಇಂಡಿಯನ್ ಪ್ರೀಮಿಯರ್ ಲೀಗ್ನ ಪ್ಲೇಆಫ್ ಪಂದ್ಯಗಳು ಮೇ 29 ರಿಂದ ಶುರುವಾಗಲಿದೆ. ಆದರೆ ಇಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ಹಾಗೂ ಎಲಿಮಿನೇಟರ್ ಮ್ಯಾಚ್ಗಳನ್ನು ಆಡುವ ತಂಡಗಳಾವುವು ಎಂಬುದು ಇನ್ನೂ ಸಹ ನಿರ್ಧಾರವಾಗಿಲ್ಲ.
ಲೀಗ್ ಹಂತದ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಮೊದಲ ಕ್ವಾಲಿಫೈಯರ್ ಪಂದ್ಯವಾಡಲಿದ್ದಾರೆ. ಇನ್ನು ಮೂರನೇ ಮತ್ತು ನಾಲ್ಕನೇ ಸ್ಥಾನಗಳನ್ನು ಅಲಂಕರಿಸುವ ಟೀಮ್ಗಳು ಎಲಿಮಿನೇಟರ್ ಪಂದ್ಯವಾಡಲಿದೆ.
ಇಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್ಗೆ ಪ್ರವೇಶಿಸಿದರೆ, ಸೋತ ತಂಡ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಅಂದರೆ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡಕ್ಕೆ ಮತ್ತೊಂದು ಅವಕಾಶ ದೊರೆಯಲಿದೆ.
ಆದರೆ ಎಲಿಮಿನೇಟರ್ ಪಂದ್ಯದಲ್ಲಿ ಸೋಲುವ ತಂಡ ಪ್ಲೇಆಫ್ನಿಂದ ಹೊರಬೀಳಲಿದೆ. ಹೀಗಾಗಿಯೇ ಎಲಿಮಿನೇಟರ್ ಪಂದ್ಯವು ಮಾಡು ಇಲ್ಲವೇ ಮಡಿ ಪಂದ್ಯ. ಇದೇ ಕಾರಣದಿಂದಾಗಿ ಎಲ್ಲಾ ತಂಡಗಳು ಮೊದಲ ಕ್ವಾಲಿಫೈಯರ್ ಪಂದ್ಯವಾಡಲು ಅವಕಾಶವನ್ನು ಎದುರು ನೋಡುತ್ತಿದೆ.
ಇದನ್ನೂ ಓದಿ: IPL 2025: ಬಂದ್ಬಿಟ್ಟ… RCB ತಂಡಕ್ಕೆ ರಣ ಬೇಟೆಗಾರ ಬಂದೇ ಬಿಟ್ಟ..!
ಅದರಂತೆ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದ ತಂಡ ಫೈನಲ್ಗೆ ಎಂಟ್ರಿ ಕೊಟ್ಟರೆ, ಸೋತ ತಂಡ ಎರಡನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಇನ್ನು ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್ಗೆ ಅರ್ಹತೆ ಪಡೆಯಲಿದೆ. ಹೀಗಾಗಿಯೇ ಇದೀಗ ಮೊದಲ ಕ್ವಾಲಿಫೈಯರ್ ಅರ್ಹತೆಗಾಗಿ ನಾಲ್ಕು ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ.
Published On - 8:30 am, Sun, 25 May 25