AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ 2025 ಪುನರಾರಂಭದ ಬಿಗ್ ಅಪ್​ಡೇಟ್

IPL 2025: ಭಾರತ ಮತ್ತು ಪಾಕಿಸ್ತಾನ್ ನಡುವೆ ಕದನ ವಿರಾಮ ಘೋಷಣೆಯಾದ ಹಿನ್ನಲೆ ಮುಂದಿನ ವಾರದಿಂದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಮತ್ತೆ ಶುರುವಾಗುವ ಸಾಧ್ಯತೆಯಿದೆ. ಪ್ರಸ್ತುತ ಮಾಹಿತಿ ಪ್ರಕಾರ, ಮುಂದಿನ ಶುಕ್ರವಾರದಿಂದ ಐಪಿಎಲ್​ಗೆ ಮತ್ತೆ ಚಾಲನೆ ನೀಡಲು ಬಿಸಿಸಿಐ ನಿರ್ಧರಿಸಿದೆ.

IPL 2025:  ಐಪಿಎಲ್ 2025 ಪುನರಾರಂಭದ ಬಿಗ್ ಅಪ್​ಡೇಟ್
Ipl 2025
ಝಾಹಿರ್ ಯೂಸುಫ್
|

Updated on:May 13, 2025 | 6:44 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಪುನರಾರಂಭಕ್ಕೆ ಸಿದ್ಧತೆಗಳು ಶುರುವಾಗಿದೆ. ಭಾರತ ಮತ್ತು ಪಾಕಿಸ್ತಾನ್ (India vs Pakistan) ನಡುವಣ ಯುದ್ಧ ಭೀತಿ ಹಿನ್ನಲೆಯಲ್ಲಿ ಮೇ 9 ರಂದು ಸ್ಥಗಿತಗೊಂಡಿದ್ದ ಟೂರ್ನಿಯನ್ನು ಈ ವಾರದೊಳಗೆ ಮತ್ತೆ ಶುರು ಮಾಡಲು ಬಿಸಿಸಿಐ ನಿರ್ಧರಿಸಿದೆ. ಭಾನುವಾರ ನಡೆದ ಬಿಸಿಸಿಐ ಪದಾಧಿಕಾರಿಗಳು ಮತ್ತು ಐಪಿಎಲ್ ಆಡಳಿತ ಮಂಡಳಿಯ ಸಭೆಯಲ್ಲಿ ಟೂರ್ನಿ ಆಯೋಜನೆಯ ರೂಪುರೇಷೆಗಳ ಬಗ್ಗೆ ಚರ್ಚಿಸಲಾಗಿದ್ದು, ಈ ಸಭೆಯ ಬಳಿಕ ಎಲ್ಲಾ ಫ್ರಾಂಚೈಸಿಗಳು ಟೂರ್ನಿಗೆ ಸಜ್ಜಾಗಿರುವಂತೆ ಸೂಚಿಸಲಾಗಿದೆ. ಅಲ್ಲದೆ ಕೆಲ ಮಾರ್ಪಡುಗಳೊಂದಿಗೆ ಟೂರ್ನಿಯನ್ನು ಪುನರಾರಂಭಿಸುವುದಾಗಿ ತಿಳಿಸಲಾಗಿದೆ.

ಐಪಿಎಲ್ 2025 ಪುನರಾರಂಭದ ಮುಖ್ಯಾಂಶಗಳು:

  • ಪ್ರಸ್ತುತ ಮಾಹಿತಿಯಂತೆ ಮೇ 17 ರಿಂದ ಟೂರ್ನಿ ಶುರುವಾಗಲಿದೆ.
  • 6 ಮೈದಾನಗಳ ಮೂಲಕ ಟೂರ್ನಿಯನ್ನು ಪೂರ್ಣಗೊಳಿಸಲು ಪ್ಲ್ಯಾನ್ ರೂಪಿಸಲಾಗಿದೆ.
  • ಫೈನಲ್ ಪಂದ್ಯವು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಿಂದ ಸ್ಥಳಾಂತರಿಸುವ ಬಗ್ಗೆ ಚರ್ಚಿಸಲಾಗಿದೆ.
  • ಮೇ 25ರ ಬದಲು ಜೂನ್ 3 ರಂದು ಫೈನಲ್ ಪಂದ್ಯವನ್ನು ಆಯೋಜಿಸಲು ತೀರ್ಮಾನ.
  • ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ಮ್ಯಾಚ್ ಆಯೋಜಿಸುವ ಬಗ್ಗೆ ಚರ್ಚೆ.
  • ಉಳಿದ ಪಂದ್ಯಗಳನ್ನು ಬೆಂಗಳೂರು, ಹೈದರಾಬಾದ್ ಹಾಗೂ ಚೆನ್ನೈನಲ್ಲಿ ನಡೆಸುವ ಬಗ್ಗೆ ಚರ್ಚಿಸಲಾಗಿದೆ.
  • ಪಂಜಾಬ್ ಕಿಂಗ್ಸ್ ತಂಡಕ್ಕೆ ಹೋಮ್ ಪಂದ್ಯಗಳಿರುವುದಿಲ್ಲ ಎಂದು ಸೂಚನೆ.
  • ಡಬಲ್ ಹೆಡರ್ ಪಂದ್ಯಗಳ ಮೂಲಕ ಟೂರ್ನಿಯನ್ನು ಬೇಗನೆ ಮುಗಿಸಲು ಪ್ಲ್ಯಾನ್.
  • ಅಭ್ಯಾಸ ಆರಂಭಿಸಲು ಎಲ್ಲಾ ಫ್ರಾಂಚೈಸಿಗಳಿಗೆ ಗ್ರೀನ್ ಸಿಗ್ನಲ್.
  • ಇಂದು ಅಥವಾ ನಾಳೆ ಹೊಸ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ.

ಐಪಿಎಲ್​ 2025 ಫೈನಲ್ ಪಂದ್ಯ ಸ್ಥಳಾಂತರವೇಕೆ?

ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಫೈನಲ್ ಪಂದ್ಯವು ಮೇ 25 ಕ್ಕೆ ನಿಗದಿ ಮಾಡಲಾಗಿತ್ತು. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಬೇಕಿದ್ದ ಈ ಪಂದ್ಯವನ್ನು ಇದೀಗ ಸ್ಥಳಾಂತರಿಸುವ ಬಗ್ಗೆ ಬಿಸಿಸಿಐ ಸಭೆಯಲ್ಲಿ ಚರ್ಚಿಸಲಾಗಿದೆ. ಏಕೆಂದರೆ ಹೊಸ ವೇಳಾಪಟ್ಟಿಯಿಂದಾಗಿ ಫೈನಲ್ ಪಂದ್ಯವು ಜೂನ್ 3 ರಂದು ನಡೆಯಲಿದೆ.

ಇದನ್ನೂ ಓದಿ: IPL 2025: ಮುಂದಿನ ಪಂದ್ಯಕ್ಕೆ RCB ನಾಯಕನೇ ಅಲಭ್ಯ..!

ಇದನ್ನೂ ಓದಿ
Image
ಬೋಲ್ಡ್ ಫೋಟೋಗೆ ಬೌಲ್ಡ್ ಆಗಿ ಸ್ಪಷ್ಟನೆ ನೀಡಿದ ವಿರಾಟ್ ಕೊಹ್ಲಿ
Image
IPL 2025: ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು
Image
IPL 2025: ಕರುಣ್ ನಾಯರ್ ಡಕೌಟ್: ಈ ಬಾರಿ ಮುಂಬೈ ಇಂಡಿಯನ್ಸ್ ಚಾಂಪಿಯನ್ಸ್?
Image
IPL ನಲ್ಲಿ ಬದಲಾವಣೆ: ರೌಂಡ್ ರಾಬಿನ್ ಸ್ವರೂಪ, ಒಂದು ತಂಡಕ್ಕೆ 18 ಪಂದ್ಯ

ಜೂನ್ 3 ರಂದು ಕೊಲ್ಕತ್ತಾದ ಸುತ್ತ ಮುತ್ತ ಮಳೆಯಾಗುವ ಮುನ್ಸೂಚನೆಯಿದ್ದು, ಹೀಗಾಗಿ ಅಂತಿಮ ಪಂದ್ಯವನ್ನು ಈಡನ್ ಗಾರ್ಡನ್ಸ್ ಮೈದಾನದಿಂದ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂಗೆ ಸ್ಥಳಾಂತರಿಸಲು ಯೋಚಿಸಲಾಗಿದೆ. ಹೀಗಾಗಿ ಐಪಿಎಲ್ 2025ರ ಫೈನಲ್ ಮ್ಯಾಚ್ ಅಹದಾಬಾದ್​ನಲ್ಲಿ ನಡೆಯುವ ಸಾಧ್ಯತೆಯಿದೆ.

Published On - 7:24 am, Mon, 12 May 25

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ