
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಪುನರಾರಂಭಕ್ಕೆ ಸಿದ್ಧತೆಗಳು ಶುರುವಾಗಿದೆ. ಭಾರತ ಮತ್ತು ಪಾಕಿಸ್ತಾನ್ (India vs Pakistan) ನಡುವಣ ಯುದ್ಧ ಭೀತಿ ಹಿನ್ನಲೆಯಲ್ಲಿ ಮೇ 9 ರಂದು ಸ್ಥಗಿತಗೊಂಡಿದ್ದ ಟೂರ್ನಿಯನ್ನು ಈ ವಾರದೊಳಗೆ ಮತ್ತೆ ಶುರು ಮಾಡಲು ಬಿಸಿಸಿಐ ನಿರ್ಧರಿಸಿದೆ. ಭಾನುವಾರ ನಡೆದ ಬಿಸಿಸಿಐ ಪದಾಧಿಕಾರಿಗಳು ಮತ್ತು ಐಪಿಎಲ್ ಆಡಳಿತ ಮಂಡಳಿಯ ಸಭೆಯಲ್ಲಿ ಟೂರ್ನಿ ಆಯೋಜನೆಯ ರೂಪುರೇಷೆಗಳ ಬಗ್ಗೆ ಚರ್ಚಿಸಲಾಗಿದ್ದು, ಈ ಸಭೆಯ ಬಳಿಕ ಎಲ್ಲಾ ಫ್ರಾಂಚೈಸಿಗಳು ಟೂರ್ನಿಗೆ ಸಜ್ಜಾಗಿರುವಂತೆ ಸೂಚಿಸಲಾಗಿದೆ. ಅಲ್ಲದೆ ಕೆಲ ಮಾರ್ಪಡುಗಳೊಂದಿಗೆ ಟೂರ್ನಿಯನ್ನು ಪುನರಾರಂಭಿಸುವುದಾಗಿ ತಿಳಿಸಲಾಗಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಫೈನಲ್ ಪಂದ್ಯವು ಮೇ 25 ಕ್ಕೆ ನಿಗದಿ ಮಾಡಲಾಗಿತ್ತು. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಬೇಕಿದ್ದ ಈ ಪಂದ್ಯವನ್ನು ಇದೀಗ ಸ್ಥಳಾಂತರಿಸುವ ಬಗ್ಗೆ ಬಿಸಿಸಿಐ ಸಭೆಯಲ್ಲಿ ಚರ್ಚಿಸಲಾಗಿದೆ. ಏಕೆಂದರೆ ಹೊಸ ವೇಳಾಪಟ್ಟಿಯಿಂದಾಗಿ ಫೈನಲ್ ಪಂದ್ಯವು ಜೂನ್ 3 ರಂದು ನಡೆಯಲಿದೆ.
ಇದನ್ನೂ ಓದಿ: IPL 2025: ಮುಂದಿನ ಪಂದ್ಯಕ್ಕೆ RCB ನಾಯಕನೇ ಅಲಭ್ಯ..!
ಜೂನ್ 3 ರಂದು ಕೊಲ್ಕತ್ತಾದ ಸುತ್ತ ಮುತ್ತ ಮಳೆಯಾಗುವ ಮುನ್ಸೂಚನೆಯಿದ್ದು, ಹೀಗಾಗಿ ಅಂತಿಮ ಪಂದ್ಯವನ್ನು ಈಡನ್ ಗಾರ್ಡನ್ಸ್ ಮೈದಾನದಿಂದ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂಗೆ ಸ್ಥಳಾಂತರಿಸಲು ಯೋಚಿಸಲಾಗಿದೆ. ಹೀಗಾಗಿ ಐಪಿಎಲ್ 2025ರ ಫೈನಲ್ ಮ್ಯಾಚ್ ಅಹದಾಬಾದ್ನಲ್ಲಿ ನಡೆಯುವ ಸಾಧ್ಯತೆಯಿದೆ.
Published On - 7:24 am, Mon, 12 May 25