AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ರಿಯಾನ್ ಪರಾಗ್ ಕ್ಯಾಪ್ಟನ್

IPL 2025: ಐಪಿಎಲ್ ಸೀಸನ್-18ರ ಮೊದಲ ಮೂರು ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ರಿಯಾನ್ ಪರಾಗ್ ಮುನ್ನಡೆಸಲಿದ್ದಾರೆ. ತಂಡದ ನಾಯಕ ಸಂಜು ಸ್ಯಾಮ್ಸನ್ ಫಿಟ್​ನೆಸ್ ಸಮಸ್ಯೆಯನ್ನು ಎದುರಿಸುತ್ತಿದ್ದು, ಹೀಗಾಗಿ ಸನ್​ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್​ ಕಿಂಗ್ಸ್ ವಿರುದ್ಧದ ಪಂದ್ಯಗಳಲ್ಲಿ ಆರ್​ಆರ್ ತಂಡ ರಿಯಾನ್ ಸಾರಥ್ಯದಲ್ಲಿ ಕಣಕ್ಕಿಳಿಯಲಿದೆ.

IPL 2025: ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ರಿಯಾನ್ ಪರಾಗ್ ಕ್ಯಾಪ್ಟನ್
Riyan Parag (1)
ಝಾಹಿರ್ ಯೂಸುಫ್
|

Updated on: Mar 20, 2025 | 11:54 AM

Share

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಶನಿವಾರದಿಂದ (ಮಾ.22) ಶುರುವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಆರ್​ಸಿಬಿ ಮತ್ತು ಕೆಕೆಆರ್ ತಂಡಗಳು ಕಣಕ್ಕಿಳಿಯಲಿವೆ. ಇನ್ನು ಮಾರ್ಚ್ 23 ರಂದು ಜರುಗಲಿರುವ 2ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ರಿಯಾನ್ ಪರಾಗ್ ಮುನ್ನಡೆಸಲಿದ್ದಾರೆ.

ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರಿಗೆ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ವಿಕೆಟ್ ಕೀಪಿಂಗ್‌ಗೆ ಅನುಮತಿ ನೀಡಿಲ್ಲ. ಅಲ್ಲದೆ ಸ್ಯಾಮ್ಸನ್ ಬ್ಯಾಟ್ಸ್‌ಮನ್/ಇಂಪ್ಯಾಕ್ಟ್ ಪ್ಲೇಯರ್ ಆಗಿ ಮಾತ್ರ ಆಡಲು ಲಭ್ಯವಿರುತ್ತಾರೆ. ಹೀಗಾಗಿ ಮೊದಲ ಮೂರು ಪಂಧ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಯುವ ಆಟಗಾರ ರಿಯಾನ್ ಪರಾಗ್ ಮುನ್ನಡೆಸಲಿದ್ದಾರೆ.

ಕಳೆದ ತಿಂಗಳು ಬೆರಳಿನ ಶಸ್ತ್ರಚಿಕಿತ್ಸೆಯ ಒಳಗಾಗಿದ್ದ ಸ್ಯಾಮ್ಸನ್ ಕೀಪಿಂಗ್ ಮಾಡುವಷ್ಟು ಫಿಟ್​ನೆಸ್ ಹೊಂದಿಲ್ಲ. ಹೀಗಾಗಿ ಅವರನ್ನು ಮೊದಲ ಮೂರು ಪಂದ್ಯಗಳಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಅಥವಾ ಬ್ಯಾಟರ್ ಆಗಿ ಮಾತ್ರ ಕಣಕ್ಕಿಳಿಸಲು ರಾಜಸ್ಥಾನ್ ರಾಯಲ್ಸ್​​ಗೆ ಸೂಚಿಸಲಾಗಿದೆ.

ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಕಡೆಯಿಂದ ಸಿಕ್ಕ ಈ ಸೂಚನೆಯ ಬೆನ್ನಲ್ಲೇ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ರಿಯಾನ್ ಪರಾಗ್ ಅವರನ್ನು ನಾಯಕನಾಗಿ ಆಯ್ಕೆ ಮಾಡಿಕೊಂಡಿದೆ.  ಇನ್ನು ಸಂಜು ಸ್ಯಾಮ್ಸನ್ ಬದಲಿಗೆ ರಾಜಸ್ಥಾನ್ ರಾಯಲ್ಸ್ ಧ್ರುವ್ ಜುರೇಲ್ ಅವರನ್ನು ವಿಕೆಟ್ ಕೀಪರ್ ಆಗಿ ಬಳಸಿಕೊಳ್ಳಲಿದೆ.

ರಾಜಸ್ಥಾನ್ ರಾಯಲ್ಸ್ ಡ್ರೆಸ್ಸಿಂಗ್ ರೂಮ್ ವಿಡಿಯೋ:

ರಾಜಸ್ಥಾನ್ ರಾಯಲ್ಸ್ ತಂಡ: ಸಂಜು ಸ್ಯಾಮ್ಸನ್ (ನಾಯಕ), ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಶಿಮ್ರೋನ್ ಹೆಟ್ಮೆಯರ್, ಸಂದೀಪ್ ಶರ್ಮಾ, ಜೋಫ್ರಾ ಆರ್ಚರ್, ವನಿಂದು ಹಸರಂಗ, ಮಹೇಶ್ ತೀಕ್ಷಣ, ಆಕಾಶ್ ಮಧ್ವಾಲ್, ಕುಮಾರ್ ಕಾರ್ತಿಕೇಯ ಸಿಂಗ್, ನಿತೀಶ್ ರಣಾ, ತುಷಾರ್ ದೇಶಪಾಂಡೆ, ಶುಭಂ ದುಬೆ, ಯದುವೀರ್ ಚರಕ್, ಫಝಲ್ ಹಕ್ ಫಾರೂಕಿ, ವೈಭವ್ ಸೂರ್ಯವಂಶಿ, ಕ್ವೇನಾ ಮಫಕಾ, ಕುನಾಲ್ ರಾಥೋರ್, ಅಶೋಕ್ ಶರ್ಮಾ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಾಜ್ಯಪಾಲೆ ಡಾ. ಸುಧಾ ಯಾದವ್ ತ್ಯಾಗವನ್ನು ಕೊಂಡಾಡಿದ ಪ್ರಧಾನಿ ಮೋದಿ
ರಾಜ್ಯಪಾಲೆ ಡಾ. ಸುಧಾ ಯಾದವ್ ತ್ಯಾಗವನ್ನು ಕೊಂಡಾಡಿದ ಪ್ರಧಾನಿ ಮೋದಿ
ಬಿಗ್ ಬಾಸ್ ಕನ್ನಡ: ಸ್ವಾಭಿಮಾನ ಬಿಟ್ಟು ನಾನು ಆಟ ಆಡಲ್ಲ; ಶಪಥ ಮಾಡಿದ ಗಾನವಿ
ಬಿಗ್ ಬಾಸ್ ಕನ್ನಡ: ಸ್ವಾಭಿಮಾನ ಬಿಟ್ಟು ನಾನು ಆಟ ಆಡಲ್ಲ; ಶಪಥ ಮಾಡಿದ ಗಾನವಿ
ಮೇಕೆದಾಟು ಯೋಜನೆಗೆ ಪ್ರಧಾನಿ ಮೋದಿ ಅನುಮತಿ ಕೋರಿದ ಸಿಎಂ ಡಿಕೆಶಿ
ಮೇಕೆದಾಟು ಯೋಜನೆಗೆ ಪ್ರಧಾನಿ ಮೋದಿ ಅನುಮತಿ ಕೋರಿದ ಸಿಎಂ ಡಿಕೆಶಿ
ವಿಶ್ವದ ಮೊದಲ 'ಟಿಲ್ಟೆಡ್ ಎಲ್‌ಇಡಿ ತಾರಾಲಯ' ಉದ್ಘಾಟಿಸಿದ ಪ್ರಧಾನಿ
ವಿಶ್ವದ ಮೊದಲ 'ಟಿಲ್ಟೆಡ್ ಎಲ್‌ಇಡಿ ತಾರಾಲಯ' ಉದ್ಘಾಟಿಸಿದ ಪ್ರಧಾನಿ
ವಿಶ್ವದ ಮೊದಲ ಟಿಲ್ಟೆಡ್ ಎಲ್​ಇಡಿ ತಾರಾಲಯ 'ಕಾಸ್ಮೋಸ್' ಉದ್ಘಾಟಿಸಿದ ಮೋದಿ
ವಿಶ್ವದ ಮೊದಲ ಟಿಲ್ಟೆಡ್ ಎಲ್​ಇಡಿ ತಾರಾಲಯ 'ಕಾಸ್ಮೋಸ್' ಉದ್ಘಾಟಿಸಿದ ಮೋದಿ
ಪ್ರಧಾನಿ ಮೋದಿ ಎದುರು ಸಾಲು ಸಾಲು ಬೇಡಿಕೆಯಿಟ್ಟ ಸಿಎಂ ಡಿ.ಕೆ. ಶಿವಕುಮಾರ್
ಪ್ರಧಾನಿ ಮೋದಿ ಎದುರು ಸಾಲು ಸಾಲು ಬೇಡಿಕೆಯಿಟ್ಟ ಸಿಎಂ ಡಿ.ಕೆ. ಶಿವಕುಮಾರ್
ಹೆಚ್​ಡಿ ದೇವೇಗೌಡರ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಹೆಚ್​​ಡಿ ಕುಮಾರಸ್ವಾಮಿ
ಹೆಚ್​ಡಿ ದೇವೇಗೌಡರ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಹೆಚ್​​ಡಿ ಕುಮಾರಸ್ವಾಮಿ
ಡಿಕೆ ಶಿವಕುಮಾರ್ ಕೈ ಹಿಡಿದು ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟಿಸಿದ ಮೋದಿ
ಡಿಕೆ ಶಿವಕುಮಾರ್ ಕೈ ಹಿಡಿದು ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟಿಸಿದ ಮೋದಿ
Live: ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಚಾಲನೆ
Live: ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಚಾಲನೆ
ನಮ್ಮ ಮೆಟ್ರೋ ಗುಲಾಬಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ನಮ್ಮ ಮೆಟ್ರೋ ಗುಲಾಬಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ