ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಶನಿವಾರದಿಂದ (ಮಾ.22) ಶುರುವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಆರ್ಸಿಬಿ ಮತ್ತು ಕೆಕೆಆರ್ ತಂಡಗಳು ಕಣಕ್ಕಿಳಿಯಲಿವೆ. ಇನ್ನು ಮಾರ್ಚ್ 23 ರಂದು ಜರುಗಲಿರುವ 2ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ರಿಯಾನ್ ಪರಾಗ್ ಮುನ್ನಡೆಸಲಿದ್ದಾರೆ.
ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರಿಗೆ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ವಿಕೆಟ್ ಕೀಪಿಂಗ್‌ಗೆ ಅನುಮತಿ ನೀಡಿಲ್ಲ. ಅಲ್ಲದೆ ಸ್ಯಾಮ್ಸನ್ ಬ್ಯಾಟ್ಸ್‌ಮನ್/ಇಂಪ್ಯಾಕ್ಟ್ ಪ್ಲೇಯರ್ ಆಗಿ ಮಾತ್ರ ಆಡಲು ಲಭ್ಯವಿರುತ್ತಾರೆ. ಹೀಗಾಗಿ ಮೊದಲ ಮೂರು ಪಂಧ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಯುವ ಆಟಗಾರ ರಿಯಾನ್ ಪರಾಗ್ ಮುನ್ನಡೆಸಲಿದ್ದಾರೆ.
ಕಳೆದ ತಿಂಗಳು ಬೆರಳಿನ ಶಸ್ತ್ರಚಿಕಿತ್ಸೆಯ ಒಳಗಾಗಿದ್ದ ಸ್ಯಾಮ್ಸನ್ ಕೀಪಿಂಗ್ ಮಾಡುವಷ್ಟು ಫಿಟ್ನೆಸ್ ಹೊಂದಿಲ್ಲ. ಹೀಗಾಗಿ ಅವರನ್ನು ಮೊದಲ ಮೂರು ಪಂದ್ಯಗಳಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಅಥವಾ ಬ್ಯಾಟರ್ ಆಗಿ ಮಾತ್ರ ಕಣಕ್ಕಿಳಿಸಲು ರಾಜಸ್ಥಾನ್ ರಾಯಲ್ಸ್ಗೆ ಸೂಚಿಸಲಾಗಿದೆ.
ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಕಡೆಯಿಂದ ಸಿಕ್ಕ ಈ ಸೂಚನೆಯ ಬೆನ್ನಲ್ಲೇ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ರಿಯಾನ್ ಪರಾಗ್ ಅವರನ್ನು ನಾಯಕನಾಗಿ ಆಯ್ಕೆ ಮಾಡಿಕೊಂಡಿದೆ. ಇನ್ನು ಸಂಜು ಸ್ಯಾಮ್ಸನ್ ಬದಲಿಗೆ ರಾಜಸ್ಥಾನ್ ರಾಯಲ್ಸ್ ಧ್ರುವ್ ಜುರೇಲ್ ಅವರನ್ನು ವಿಕೆಟ್ ಕೀಪರ್ ಆಗಿ ಬಳಸಿಕೊಳ್ಳಲಿದೆ.
💪 Update: Sanju will be playing our first three games as a batter, with Riyan stepping up to lead the boys in these matches! 💗 pic.twitter.com/FyHTmBp1F5
— Rajasthan Royals (@rajasthanroyals) March 20, 2025
ರಾಜಸ್ಥಾನ್ ರಾಯಲ್ಸ್ ತಂಡ: ಸಂಜು ಸ್ಯಾಮ್ಸನ್ (ನಾಯಕ), ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಶಿಮ್ರೋನ್ ಹೆಟ್ಮೆಯರ್, ಸಂದೀಪ್ ಶರ್ಮಾ, ಜೋಫ್ರಾ ಆರ್ಚರ್, ವನಿಂದು ಹಸರಂಗ, ಮಹೇಶ್ ತೀಕ್ಷಣ, ಆಕಾಶ್ ಮಧ್ವಾಲ್, ಕುಮಾರ್ ಕಾರ್ತಿಕೇಯ ಸಿಂಗ್, ನಿತೀಶ್ ರಣಾ, ತುಷಾರ್ ದೇಶಪಾಂಡೆ, ಶುಭಂ ದುಬೆ, ಯದುವೀರ್ ಚರಕ್, ಫಝಲ್ ಹಕ್ ಫಾರೂಕಿ, ವೈಭವ್ ಸೂರ್ಯವಂಶಿ, ಕ್ವೇನಾ ಮಫಕಾ, ಕುನಾಲ್ ರಾಥೋರ್, ಅಶೋಕ್ ಶರ್ಮಾ.