AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 782 ದಿನಗಳ ಹಿಂದೆ ನುಡಿದಿದ್ದ ಭವಿಷ್ಯವನ್ನು ನಿಜ ಮಾಡಿದ ರಿಯಾನ್ ಪರಾಗ್

Riyan Parag's 5 Sixes in an Over: ರಾಜಸ್ಥಾನ್ ರಾಯಲ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋತಿರಬಹುದು ಆದರೆ ರಿಯಾನ್ ಪರಾಗ್ ಅವರ ಅದ್ಭುತ ಇನಿಂಗ್ಸ್ ಎಲ್ಲರ ಗಮನ ಸೆಳೆದಿದೆ. ಒಂದೇ ಓವರ್‌ನಲ್ಲಿ 5 ಸಿಕ್ಸರ್‌ಗಳನ್ನು ಬಾರಿಸಿ ಅವರು 782 ದಿನಗಳ ಹಿಂದೆ ಮಾಡಿದ್ದ ಭವಿಷ್ಯವಾಣಿಯನ್ನು ನಿಜ ಮಾಡಿದರು. ಅವರ 95 ರನ್‌ಗಳ ಇನಿಂಗ್ಸ್‌ನಲ್ಲಿ 8 ಸಿಕ್ಸರ್‌ಗಳು ಮತ್ತು 6 ಬೌಂಡರಿಗಳಿದ್ದವು.

IPL 2025: 782 ದಿನಗಳ ಹಿಂದೆ ನುಡಿದಿದ್ದ ಭವಿಷ್ಯವನ್ನು ನಿಜ ಮಾಡಿದ ರಿಯಾನ್ ಪರಾಗ್
Riyan Parag
ಪೃಥ್ವಿಶಂಕರ
|

Updated on: May 04, 2025 | 10:16 PM

Share

ಕೋಲ್ಕತ್ತಾ ನೈಟ್ ರೈಡರ್ಸ್​ ವಿರುದ್ಧದ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ್ (KKR vs RR) ಸೋತಿರಬಹುದು. ಆದರೆ ತಂಡದ ನಾಯಕ ರಿಯಾನ್ ಪರಾಗ್ (Riyan Parag) ಏಕಾಂಗಿಯಾಗಿ ಕೆಕೆಆರ್ ತಂಡವನ್ನು ಹಿಮ್ಮೆಟ್ಟಿಸುವ ಪ್ರಯತ್ನ ಮಾಡಿದರು. ಆದರೆ ತಂಡದ ಉಳಿದ ಬ್ಯಾಟರ್​​ಗಳಿಂದ ಅವರಿಗೆ ಸಾಥ್ ಸಿಗದ ಕಾರಣ ತಂಡ ಸೋಲಿಗೆ ಶರಣಾಗಬೇಕಾಯಿತು. ಆದಾಗ್ಯೂ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಸಿಕ್ಸರ್‌ಗಳ ಮಳೆ ಸುರಿಸಿದ ಪರಾಗ್, ಕೆಕೆಆರ್ ಬೌಲರ್‌ಗಳಲ್ಲಿ ಭಯವನ್ನು ಹುಟ್ಟಿಸಿದರು. ಅದರಲ್ಲೂ ಒಂದೇ ಓವರ್‌ನಲ್ಲಿ ಸತತ 5 ಸಿಕ್ಸರ್‌ಗಳನ್ನು ಬಾರಿಸಿದ ಪರಾಗ್ ಒಂದು ಕ್ಷಣ ಕೆಕೆಆರ್ ತಂಡಕ್ಕೆ ಸೋಲಿನ ಆತಂಕವನ್ನು ಮೂಡಿಸಿದರು. ಆದರೆ ಕೊನೆಯಲ್ಲಿ ಸೋಲಿಗೆ ಕೊರಳೊಡ್ಡಿದರಾದರೂ 782 ದಿನಗಳ ಹಿಂದೆ ನುಡಿದಿದ್ದ ಭವಿಷ್ಯವಾಣಿಯನ್ನು ನಿಜ ಮಾಡುವಲ್ಲಿ ಯಶಸ್ವಿಯಾದರು.

ಒಂದೇ ಓವರ್‌ನಲ್ಲಿ 5 ಸಿಕ್ಸರ್‌

ಕೋಲ್ಕತ್ತಾ ನೈಟ್ ರೈಡರ್ಸ್ ಆಲ್ ರೌಂಡರ್ ಮೊಯಿನ್ ಅಲಿ ಬೌಲ್ ಮಾಡಿದ 13 ನೇ ಓವರ್‌ನಲ್ಲಿ ರಿಯಾನ್ ಪರಾಗ್ ಸತತ 5 ಸಿಕ್ಸರ್‌ಗಳನ್ನು ಬಾರಿಸಿದರು. ಈ ಓವರ್‌ನ ಮೊದಲ ಎಸೆತದಲ್ಲಿ ಶಿಮ್ರಾನ್ ಹೆಟ್ಮೆಯರ್ ಒಂದು ರನ್ ಗಳಿಸಿದರೆ, ಪರಾಗ್ ಸ್ಟ್ರೈಕ್‌ಗೆ ಬಂದರು. ನಂತರ ಪರಾಗ್ ಓವರ್‌ನ ಉಳಿದ 5 ಎಸೆತಗಳಲ್ಲಿ ಸತತ 5 ಸಿಕ್ಸರ್‌ಗಳನ್ನು ಬಾರಿಸಿದರು. ಈ ಮೂಲಕ ಅವರು ತಮ್ಮ ಅರ್ಧಶತಕವನ್ನು ಪೂರ್ಣಗೊಳಿಸಿದರು. ಈ ಓವರ್‌ನಲ್ಲಿ ಮೊಯಿನ್ ಅಲಿ ಒಟ್ಟು 32 ರನ್‌ಗಳನ್ನು ನೀಡಿದರು.

ಮುಂದಿನ ಓವರ್‌ನಲ್ಲೂ ತನ್ನ ಆಕ್ರಮಣಕಾರಿ ಆಟ ಮುಂದುವರೆಸಿದ ರಿಯಾನ್, ವರುಣ್ ಚಕ್ರವರ್ತಿ ಎಸೆದ 14ನೇ ಓವರ್​ನ ಎರಡನೇ ಎಸೆತದಲ್ಲಿ ಭರ್ಜರಿ ಸಿಕ್ಸರ್ ಬಾರಿಸಿದರು. ಈ ರೀತಿಯಾಗಿ ಪರಾಗ್ ಸತತ 6 ಎಸೆತಗಳಲ್ಲಿ 6 ಸಿಕ್ಸರ್‌ಗಳನ್ನು ಬಾರಿಸಿದರು. ಅಂತಿಮವಾಗಿ ರಿಯಾನ್ 45 ಎಸೆತಗಳಲ್ಲಿ 6 ಬೌಂಡರಿ ಮತ್ತು 8 ಸಿಕ್ಸರ್‌ಗಳಿಂದ 95 ರನ್ ಗಳಿಸಿ ಔಟಾದರು. ಈ ಮೂಲಕ ಕೇವಲ 5 ರನ್​​ಗಳಿಂದ ಶತಕ ವಂಚಿತರಾದರು.

ಹೇಳಿದ್ದನ್ನು ಮಾಡಿ ತೋರಿಸಿದ ರಿಯಾನ್

ವಾಸ್ತವವಾಗಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಮಾರ್ಚ್ 14, 2023 ರಂದು ತಮ್ಮ ಸೋಶಿಯಲ್ ಮೀಡಿಯಾ ಖಾತೆ ‘X’ ನಲ್ಲಿ ‘ಈ ಐಪಿಎಲ್‌ನಲ್ಲಿ ನಾನು ಒಂದೇ ಓವರ್‌ನಲ್ಲಿ 4 ಸಿಕ್ಸರ್‌ಗಳನ್ನು ಬಾರಿಸುತ್ತೇನೆ ಎಂದು ನನ್ನ ಆತ್ಮಸಾಕ್ಷಿ ಹೇಳುತ್ತಿದೆ ಎಂದು ಬರೆದುಕೊಂಡಿದ್ದರು. ಆದರೆ ಆ ಸಮಯದಲ್ಲಿ, ಅವರ ಪೋಸ್ಟ್ ನೋಡಿದ ಬಹಳಷ್ಟು ಜನರು ಅವರ ಈ ಹೇಳಿಕೆಯನ್ನು ಅಪಹಾಸ್ಯ ಮಾಡಿದ್ದರು. ಜನರು ಏನೇ ಅಪಹಾಸ್ಯ ಮಾಡಿದರೂ ಅದಕ್ಕೆ ಯಾವುದೇ ಪ್ರತಿಕ್ರಿಯೆ ನೀಡದ ರಿಯಾನ್ ಪರಾಗ್ ಇದೀಗ ತಮ್ಮ ಬ್ಯಾಟ್‌ನಿಂದಲೇ ಉತ್ತರ ನೀಡಿದ್ದಾರೆ. 782 ದಿನಗಳ ನಂತರ, ಅಂದರೆ ಮೇ 4, 2025 ರಂದು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಒಂದೇ ಓವರ್‌ನಲ್ಲಿ 5 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಪರಾಗ್ ತಾವು ಹೇಳಿದ್ದನ್ನು ಮಾಡಿ ತೋರಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ