RR vs KKR: ಕೆಕೆಆರ್​ ತಂಡದಿಂದ ಹೊರಬಿದ್ದ ಸ್ಟಾರ್ ಪ್ಲೇಯರ್..! ರಾಜಸ್ಥಾನ್ ತಂಡದಲ್ಲೂ ಬದಲಾವಣೆ

| Updated By: ಪೃಥ್ವಿಶಂಕರ

Updated on: Mar 26, 2025 | 7:28 PM

RR vs KKR Playing 11: ಗುವಾಹಟಿಯಲ್ಲಿ ರಾಜಸ್ಥಾನ ಮತ್ತು ಕೋಲ್ಕತ್ತಾ ನಡುವೆ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಕೋಲ್ಕತ್ತಾ ತಂಡ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ರಾಜಸ್ಥಾನ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಎರಡೂ ತಂಡಗಳ ಪ್ಲೇಯಿಂಗ್ 11 ನಲ್ಲಿ ಬದಲಾವಣೆ ಆಗಿದ್ದು, ಕೆಕೆಆರ್ ತಂಡದಿಂದ ಸುನೀಲ್ ನರೈನ್ ಹೊರಬಿದ್ದಿದ್ದರೆ, ರಾಜಸ್ಥಾನ್ ತಂಡದಿಂದ ಫರೂಕಿ ಹೊರಬಿದ್ದಿದ್ದಾರೆ.

RR vs KKR: ಕೆಕೆಆರ್​ ತಂಡದಿಂದ ಹೊರಬಿದ್ದ ಸ್ಟಾರ್ ಪ್ಲೇಯರ್..! ರಾಜಸ್ಥಾನ್ ತಂಡದಲ್ಲೂ ಬದಲಾವಣೆ
Kkr Vs Rr
Follow us on

2025 ರ ಐಪಿಎಲ್ (IPL 2025) ಅನ್ನು ಸೋಲಿನೊಂದಿಗೆ ಆರಂಭಿಸಿದ್ದ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ (RR vs KKR) ತಂಡಗಳು ಮತ್ತೆ ಗೆಲುವಿನ ಹಾದಿಗೆ ಮರಳಲು ಎದುರು ನೋಡುತ್ತಿವೆ. ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೋತರೆ, ಸನ್‌ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನವನ್ನು ಸೋಲಿಸಿತ್ತು. ಹೀಗಾಗಿ ಎರಡು ತಂಡಗಳು ಮೊದಲ ಗೆಲುವಿನ ನಿರೀಕ್ಷೆಯಲ್ಲಿವೆ. ಇನ್ನು ಈ ಪಂದ್ಯದಲ್ಲೂ ಸಂಜು ಸ್ಯಾಮ್ಸನ್ ನಾಯಕನಾಗಿ ಆಡುತ್ತಿಲ್ಲ. ಅವರ ಬದಲಿಗೆ ರಿಯಾನ್ ಪರಾಗ್ ರಾಜಸ್ಥಾನ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಕೆಕೆಆರ್ ನಾಯಕ ಅಜಿಂಕ್ಯಾ ರಹಾನೆ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದರ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದೆ.

ಒಂದೊಂದು ಬದಲಾವಣೆ

ಈ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ನಾಯಕ ರಹಾನೆ ಮೊದಲು ಬೌಲಿಂಗ್ ಮಾಡುವುದಾಗಿ ತಿಳಿಸಿದರು. ಆ ಬಳಿಕ ಪ್ಲೇಯಿಂಗ್ 11 ಬಗ್ಗೆ ಮಾಹಿತಿ ನೀಡಿದ ರಹಾನೆ, ಈ ಪಂದ್ಯದಲ್ಲಿ ಸುನಿಲ್ ನರೈನ್ ಆಡುತ್ತಿಲ್ಲ. ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಸ್ಥಾನದಲ್ಲಿ ಮೊಯೀನ್ ಅಲಿ ಆಡಲಿದ್ದಾರೆ ಎಂದಿದ್ದಾರೆ. ಇತ್ತ ರಾಜಸ್ಥಾನ ನಾಯಕ ರಿಯಾನ್ ಪರಾಗ್ ಕೂಡ ತಮ್ಮ ತಂಡದಲ್ಲಿ ಬದಲಾವಣೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದು ಫಜಲ್ಹಕ್ ಫಾರೂಕಿ ಬದಲಿಗೆ ವನಿಂದು ಹಸರಂಗ ಆಡಲಿದ್ದಾರೆ ಎಂದರು.

ಉಭಯ ತಂಡಗಳ ಪ್ಲೇಯಿಂಗ್ 11

ರಾಜಸ್ಥಾನ ರಾಯಲ್ಸ್: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ನಿತೀಶ್ ರಾಣಾ, ರಿಯಾನ್ ಪರಾಗ್ (ನಾಯಕ), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮಾಯೆರ್, ವನಿಂದು ಹಸರಂಗ, ಜೋಫ್ರಾ ಆರ್ಚರ್, ಮಹೀಶ್ ತೀಕ್ಷಣ, ತುಷಾರ್ ದೇಶಪಾಂಡೆ, ಸಂದೀಪ್ ಶರ್ಮಾ.

ಕೋಲ್ಕತ್ತಾ ನೈಟ್ ರೈಡರ್ಸ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ (ನಾಯಕ), ರಿಂಕು ಸಿಂಗ್, ಮೋಯಿನ್ ಅಲಿ, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಸ್ಪೆನ್ಸರ್ ಜಾನ್ಸನ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

RR vs KKR Live Score, IPL 2025: ಟಾಸ್ ಗೆದ್ದ ಕೆಕೆಆರ್; ರಾಜಸ್ಥಾನ್ ಮೊದಲು ಬ್ಯಾಟಿಂಗ್

ಮುಖಾಮುಖಿ ದಾಖಲೆ

ರಾಜಸ್ಥಾನ ಮತ್ತು ಕೆಕೆಆರ್ ತಂಡಗಳ ಮುಖಾಮುಖಿಯ ಬಗ್ಗೆ ಹೇಳುವುದಾದರೆ, ಐಪಿಎಲ್‌ನಲ್ಲಿ ಇಲ್ಲಿಯವರೆಗೆ ರಾಜಸ್ಥಾನ ಮತ್ತು ಕೆಕೆಆರ್ ನಡುವೆ ಒಟ್ಟು 29 ಪಂದ್ಯಗಳು ನಡೆದಿದ್ದು, ಎರಡೂ ತಂಡಗಳು ತಲಾ 14 ಪಂದ್ಯಗಳನ್ನು ಗೆದ್ದಿವೆ, ಉಳಿದಂತೆ ಒಂದು ಪಂದ್ಯವು ಫಲಿತಾಂಶವಿಲ್ಲದೆ ಕೊನೆಗೊಂಡಿದೆ.

 

Published On - 7:25 pm, Wed, 26 March 25