Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಕಾವ್ಯ ತಂಡಕ್ಕೆ ಬೆದರಿಕೆ, ಬ್ಲ್ಯಾಕ್‌ಮೇಲ್..! ಎಸ್​ಆರ್​ಹೆಚ್ ತವರು ಪಂದ್ಯಗಳು ಬೇರೆಡೆಗೆ ಶಿಫ್ಟ್?

IPL 2025 SRH-HCA Conflict: ಸನ್‌ರೈಸರ್ಸ್ ಹೈದರಾಬಾದ್ ತಂಡವು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಜೊತೆಗಿನ ವಿವಾದದಿಂದಾಗಿ ತನ್ನ ತನ್ನ ತವರು ಪಂದ್ಯಗಳನ್ನು ಬೇರೆಡೆ ಸ್ಥಳಾಂತರಿಸುವ ಬಗ್ಗೆ ಪರಿಗಣಿಸುತ್ತಿದೆ. HCA ಉಚಿತ ಟಿಕೆಟ್‌ಗಳನ್ನು ಒತ್ತಾಯಿಸುತ್ತಿರುವುದರಿಂದ ಈ ವಿವಾದ ಉದ್ಭವಿಸಿದೆ ಎಂದು ವರದಿಯಾಗಿದೆ. SRH ತಂಡವು HCA ವಿರುದ್ಧ ಬೆದರಿಕೆ ಮತ್ತು ಬ್ಲ್ಯಾಕ್‌ಮೇಲ್ ಆರೋಪಗಳನ್ನು ಹೊರಿಸಿದೆ.

IPL 2025: ಕಾವ್ಯ ತಂಡಕ್ಕೆ ಬೆದರಿಕೆ, ಬ್ಲ್ಯಾಕ್‌ಮೇಲ್..! ಎಸ್​ಆರ್​ಹೆಚ್ ತವರು ಪಂದ್ಯಗಳು ಬೇರೆಡೆಗೆ ಶಿಫ್ಟ್?
ಸನ್​ರೈಸರ್ಸ್​ ಹೈದರಾಬಾದ್
Follow us
ಪೃಥ್ವಿಶಂಕರ
|

Updated on:Mar 31, 2025 | 10:05 AM

ಹೈದರಾಬಾದ್‌ನಲ್ಲಿರುವ ತನ್ನ ತವರು ಮೈದಾನವಾದ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ರನ್​ಗಳ ಮಳೆಯನ್ನೇ ಹರಿಸಿ ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡುತ್ತಿರುವ ಕಾವ್ಯಾ ಮಾರನ್ ಒಡೆತನದ ಸನ್‌ರೈಸರ್ಸ್ ಹೈದರಾಬಾದ್ (SunRisers Hyderabad) ಫ್ರಾಂಚೈಸಿ ಇದೀಗ ತನ್ನ ತವರು ಪಂದ್ಯಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಯೋಚಿಸುತ್ತಿದೆ ಎಂದು ವರದಿಯಾಗಿದೆ. ಮೇಲೆ ಹೇಳಿದಂತೆ ಪ್ರಸ್ತುತ SRH ತಂಡ ತನ್ನ ಎಲ್ಲಾ ತವರು ಪಂದ್ಯಗಳನ್ನು ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಡುತ್ತದೆ. ಆದರೆ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ​​(HCA) ಜೊತೆಗಿನ ನಿರಂತರ ವಿವಾದದಿಂದಾಗಿ ಎಸ್​ಆರ್​ಹೆಚ್ ಫ್ರಾಂಚೈಸಿ ತನ್ನ ತವರು ಮೈದಾನವನ್ನು ಬದಲಿಸಲು ನೋಡುತ್ತಿದೆ ಎಂದು ವರದಿಯಾಗಿದೆ.

ವಾಸ್ತವವಾಗಿ ಕಾವ್ಯ ಮಾರನ್ ಒಡೆತನದ ಎಸ್​ಆರ್​ಹೆಚ್ ಫ್ರಾಂಚೈಸಿ, ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ವಿರುದ್ಧ ಬೆದರಿಕೆ ಮತ್ತು ಬ್ಲ್ಯಾಕ್‌ಮೇಲ್ ಆರೋಪಗಳನ್ನು ಹೊರಿಸಿದೆ. ಮಾಧ್ಯಮ ವರದಿಗಳ ಪ್ರಕಾರ, ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್​ನ ಉನ್ನತ ಅಧಿಕಾರಿಗಳು ಉಚಿತ ಟಿಕೆಟ್‌ಗಳಿಗಾಗಿ ಎಸ್​​ಆರ್​ಹೆಚ್ ಫ್ರಾಂಚೈಸಿಗೆ ಬೆದರಿಕೆ ಮತ್ತು ಬ್ಲ್ಯಾಕ್‌ಮೇಲ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಇದು ಫ್ರಾಂಚೈಸಿಯ ಅಸಮಾಧಾನಕ್ಕೆ ಕಾರಣವಾಗಿದ್ದು, ಇದೀಗ ಎಸ್​ಆರ್​ಹೆಚ್ ತಂಡ ಉಳಿದಿರುವ ತನ್ನ ತವರು ಪಂದ್ಯಗಳನ್ನು ಬೇರೆ ಸ್ಥಳಕ್ಕೆ ಸ್ಥಳಾಂತರಿಸುವ ಬಗ್ಗೆ ಯೋಚಿಸುತ್ತಿದೆ ಎಂದು ವರದಿಯಾಗಿದೆ.

HCA ವಿರುದ್ಧ ಗಂಭೀರ ಆರೋಪ

ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ಸನ್‌ರೈಸರ್ಸ್ ಹೈದರಾಬಾದ್ ತಂಡದ ಜನರಲ್ ಮ್ಯಾನೇಜರ್ ಶ್ರೀನಾಥ್ ಟಿಬಿ, ಎಚ್‌ಸಿಎ ಖಜಾಂಚಿ ಸಿಜೆ ಶ್ರೀನಿವಾಸ್ ರಾವ್ ಅವರಿಗೆ ಇಮೇಲ್ ಬರೆಯುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ‘ಎಚ್‌ಸಿಎ, ವಿಶೇಷವಾಗಿ ಎಚ್‌ಸಿಎ ಅಧ್ಯಕ್ಷರ ಈ ಎಲ್ಲಾ ವೃತ್ತಿಪರವಲ್ಲದ ಬೆದರಿಕೆಗಳು ಮತ್ತು ಕ್ರಮಗಳು, ಸನ್‌ರೈಸರ್ಸ್ ನಿಮ್ಮ ಕ್ರೀಡಾಂಗಣದಲ್ಲಿ ಆಡುವುದನ್ನು ನೀವು ಬಯಸುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತವೆ. ಹಾಗಿದ್ದಲ್ಲಿ, ದಯವಿಟ್ಟು ನನಗೆ ಲಿಖಿತವಾಗಿ ತಿಳಿಸಿ, ಇದರಿಂದ ನಾವು ಬೇರೆ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕೆಂದು ನೀವು ಬಯಸುತ್ತೀರಿ ಎಂದು ಬಿಸಿಸಿಐ, ತೆಲಂಗಾಣ ಸರ್ಕಾರ ಮತ್ತು ನಮ್ಮ ನಿರ್ವಹಣೆಗೆ ತಿಳಿಸಬಹುದು.

ಇದನ್ನೂ ಓದಿ
Image
ಹೈದರಾಬಾದ್‌ಗೆ ಪಾಠ ಕಲಿಸಿದ ಪೂರನ್-ಮಾರ್ಷ್
Image
ಅತಿ ವೇಗದ ಅರ್ಧಶತಕ ಸಿಡಿಸಿದ ನಿಕೋಲಸ್ ಪೂರನ್
Image
ಬಲಿಷ್ಠ ಹೈದರಾಬಾದ್​ಗೆ ಸೋಲಿನ ಶಾಕ್ ನೀಡಿದ ಲಕ್ನೋ
Image
ತನ್ನದೇ ದಾಖಲೆ ಮುರಿಯುವುದನ್ನು ಮರೆತ ಹೈದರಾಬಾದ್‌

ಉಚಿತ ಟಿಕೆಟ್‌ಗಳ ಬೇಡಿಕೆ

‘ನಾವು ಕಳೆದ 12 ವರ್ಷಗಳಿಂದ HCA ಜೊತೆ ಕೆಲಸ ಮಾಡುತ್ತಿದ್ದೇವೆ, ಆದರೆ ಕಳೆದ ಸೀಸನ್‌ನಿಂದ ನಾವು ನಿರಂತರ ಸಮಸ್ಯೆಗಳು ಮತ್ತು ಕಿರುಕುಳವನ್ನು ಎದುರಿಸುತ್ತಿದ್ದೇವೆ. ಹಲವು ವರ್ಷಗಳಿಂದ, HCA ಗೆ 3,900 ಉಚಿತ ಟಿಕೆಟ್‌ಗಳಲ್ಲಿ 50 F12A ಬಾಕ್ಸ್ ಟಿಕೆಟ್‌ಗಳನ್ನು ನೀಡಲಾಗಿದೆ. ಆದರೆ ಈಗ ಈ ಬಾಕ್ಸ್‌ನ ಸಾಮರ್ಥ್ಯ ಕೇವಲ 30 ಎಂದು ಹೇಳಲಾಗುತ್ತಿದೆ. ಇದರ ಹೊರತಾಗಿ, ಪ್ರತ್ಯೇಕ ಬಾಕ್ಸ್‌ನಲ್ಲಿ 20 ಹೆಚ್ಚುವರಿ ಉಚಿತ ಟಿಕೆಟ್‌ಗಳಿಗೆ ಬೇಡಿಕೆ ಇಡಲಾಗುತ್ತಿದೆ. ಈ ಬಗ್ಗೆ ನಾವು ನಿಮಗೆ ತಿಳಿಸಿದ್ದೇವೆ. ಇದನ್ನು ಚರ್ಚೆಯ ಮೂಲಕ ಪರಿಹರಿಸಬೇಕೆಂದು ನಾವು ಬಯಸುತ್ತೇವೆ ಎಂದು ಶ್ರೀನಾಥ್ ಇಮೇಲ್‌ನಲ್ಲಿ ಆರೋಪಿಸಿದ್ದಾರೆ ಎಂದು ವರದಿ ಮಾಡಿದೆ.

DC vs SRH Live Score, IPL 2025: ಹೈದರಾಬಾದ್ 7ನೇ ವಿಕೆಟ್ ಪತನ

ವಿವಾದ ಹೇಗೆ ಆರಂಭವಾಯಿತು?

ವಾಸ್ತವವಾಗಿ, ಮಾರ್ಚ್ 27 ರಂದು SRH ಮತ್ತು LSG ನಡುವಿನ ಪಂದ್ಯದ ಸಮಯದಲ್ಲಿ HCA ಪ್ರತಿನಿಧಿಗಳು F3 ಬಾಕ್ಸ್​ನಲ್ಲಿ ಹೆಚ್ಚುವರಿಯಾಗಿ 20 ಟಿಕೆಟ್‌ಗಳನ್ನು ಕೇಳಿದ್ದಾರೆ. ಆದರೆ ಹೆಚ್ಚುವರಿ ಟಿಕೆಟ್‌ಗಳನ್ನು ನೀಡಲು ಫ್ರಾಂಚೈಸಿ ಒಪ್ಪದಿದ್ದಾಗ ಈ ವಿವಾದ ಹುಟ್ಟಿಕೊಂಡಿದೆ. ಐಪಿಎಲ್ ಸಮಯದಲ್ಲಿ ಕ್ರೀಡಾಂಗಣದ ಬಾಡಿಗೆಯನ್ನು ತಾವು ಪಾವತಿಸುತ್ತೇವೆ ಮತ್ತು ಕ್ರೀಡಾಂಗಣದ ಮೇಲೆ ಹಕ್ಕುಗಳನ್ನು ಹೊಂದಿದ್ದೇವೆ ಹೀಗಿರುವಾಗ ಹೆಚ್ಚುವರಿ ಟಿಕೆಟ್‌ಗಳನ್ನು ಉಚಿತವಾಗಿ ನೀಡಲು ಸಾಧ್ಯವಿಲ್ಲ ಎಂಬುದು ಫ್ರಾಂಚೈಸಿಯ ವಾದವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:51 pm, Sun, 30 March 25

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್