IPL 2025: SRH vs MI ಮ್ಯಾಚ್ ಮೇಲೆ ಫಿಕ್ಸಿಂಗ್ ಆರೋಪ
IPL 2025 SRH vs MI: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) 41ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡವು 20 ಓವರ್ಗಳಲ್ಲಿ 143 ರನ್ ಕಲೆಹಾಕಿತು. ಈ ಸುಲಭ ಗುರಿಯನ್ನು ಮುಂಬೈ ಇಂಡಿಯನ್ಸ್ ತಂಡವು ಕೇವಲ 15.4 ಓವರ್ಗಳಲ್ಲಿ ಚೇಸ್ ಮಾಡಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 41ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ (SRH) ವಿರುದ್ಧ ಮುಂಬೈ ಇಂಡಿಯನ್ಸ್ (MI) ತಂಡ ಭರ್ಜರಿ ಜಯ ಸಾಧಿಸಿದೆ. ಹೈದರಾಬಾದ್ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ.
ಅದರಲ್ಲೂ ಅಗ್ರ ಕ್ರಮಾಂಕದ ಬ್ಯಾಟರ್ಗಳ ಅತ್ಯಂತ ನೀರಸ ಪ್ರದರ್ಶನ ನೀಡಿದ್ದರು. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಸ್ಪೋಟಕ ಇನಿಂಗ್ಸ್ ಆಡಿದ ಹೆನ್ರಿಕ್ ಕ್ಲಾಸೆನ್ 71 ರನ್ ಸಿಡಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಸನ್ರೈಸರ್ಸ್ ಹೈದರಾಬಾದ್ ತಂಡವು 20 ಓವರ್ಗಳಲ್ಲಿ 143 ರನ್ ಕಲೆಹಾಕಿತು.
ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 15.4 ಓವರ್ಗಳಲ್ಲಿ 146 ರನ್ ಬಾರಿಸಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಫಿಕ್ಸಿಂಗ್ ಆರೋಪ ಮಾಡಿದ್ದಾರೆ. ಅಲ್ಲದೆ ಇನ್ನೂ ಕೆಲವರು ಫಿಕ್ಸಿಂಗ್ ನಡೆದಿರುವ ಅನುಮಾನಗಳನ್ನು ಸಹ ವ್ಯಕ್ತಪಡಿಸಿದ್ದಾರೆ.
ಏಕೆಂದರೆ ಈ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕರಾದ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಅತ್ಯಂತ ಸುಲಭವಾಗಿ ವಿಕೆಟ್ ಕೈಚೆಲ್ಲಿದ್ದರು.
That moment when only the Umpire and Ishan Kishan remembered the script but other Mumbai players forgot and didn’t appeal. Chaos 🤣🤣😭#SRHvsMI #MIvsSRH pic.twitter.com/pIpfRfJaBj
— Aditya Chandel (@meme_doc_19) April 23, 2025
ಆ ಬಳಿಕ ಬಂದ ಇಶಾನ್ ಕಿಶನ್, ಅಂಪೈರ್ ಔಟ್ ನೀಡದಿದ್ದರೂ, ಪೆವಿಲಿಯನ್ ಕಡೆ ಹೆಜ್ಜೆ ಹಾಕಿದ್ದರು. ಇಂಟ್ರೆಸ್ಟಿಂಗ್ ವಿಷಯ ಎಂದರೆ, ಚೆಂಡು ಇಶಾನ್ ಕಿಶನ್ ಅವರ ಬ್ಯಾಟ್ಗೆ ತಾಗಿರಲಿಲ್ಲ. ಇದಾಗ್ಯೂ ಡಿಆರ್ಎಸ್ ತೆಗೆದುಕೊಳ್ಳದೇ ಎಡಗೈ ದಾಂಡಿಗ ಪೆವಿಲಿಯನ್ಗೆ ಮರಳಿದ್ದೇಕೆ ಎಂದು ಅನೇಕು ಪ್ರಶ್ನಿಸಿದ್ದಾರೆ.
ಇನ್ನು ಇಶಾನ್ ಕಿಶನ್ ಔಟಾದ ಬಳಿಕ ನಗುತ್ತಾ ಸಾಗುತ್ತಿರುವ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನೇ ಮುಂದಿಟ್ಟು ಸಹ ಅನೇಕು ಮ್ಯಾಚ್ ಫಿಕ್ಸ್ ಆಗಿರುವ ಸಾಧ್ಯತೆಗಳಿವೆ ಎಂದಿದ್ದಾರೆ.
IPL IS FIXED FELLAS !!!!!
Ishan Kishan, playing for Mumbai Indians, walks off without a nick — and not a single appeal from MI?
We always knew how MI got 5 trophies… Thanks to Ambani & the umpires! Once a fixer, always a fixer.#SRHvMI #SRHvsMI #IPL2025 pic.twitter.com/79HgwSYwpt
— Vishal Rawat (@rawat_official_) April 23, 2025
ಹಾಗೆಯೇ ಬ್ಯಾಟಿಂಗ್ ಸ್ನೇಹಿ ಪಿಚ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಪ್ರಮುಖ ಬ್ಯಾಟರ್ಗಳು ಕ್ರೀಸ್ ಕಚ್ಚಿ ನಿಲ್ಲಲು ಪರದಾಡಿರುವ ಬಗ್ಗೆ ಕೂಡ ಹಲವರು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ.
Seriously why 🧐
No Bat & No Gloves involved Not Even Apeal From Mumbai Indians and ishan kishan walked Out Look at Umpire 🤡#SRHvsMI Sunrisers Hyderabad
— ANKITA KUMARI (@ankitajkhs) April 23, 2025
ಒಟ್ಟಿನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಗೆಲುವಿನ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಫಿಕ್ಸಿಂಗ್ ಆರೋಪ ಕೇಳಿ ಬಂದಿದ್ದು, ಆದರೆ ಇದಕ್ಕೆ ಯಾವುದೇ ಪುರಾವೆಗಳಿಲ್ಲ ಎಂಬುದೇ ಸತ್ಯ.
My opinion on Ishan’s incident today, please go through it and share your observations
At First, when he missed the delivery, he initially turned back and went to the crease – Keeper hasn’t appealed, Bowler hasn’t appealed – It’s the umpire who is signalling to the fielders on… pic.twitter.com/Kkn8H1SeVh
— Vikram (@vikramvamsi33) April 23, 2025
ಅಲ್ಲದೆ ಬಿಸಿಸಿಐನ ಭ್ರಷ್ಟಾಚಾರ ವಿರೋಧಿ ಸಂಸ್ಥೆಯು ಪ್ರತಿ ಪಂದ್ಯದ ಮೇಲೆ ನಿರಂತರವಾಗಿ ನಿಗಾ ಇಡುತ್ತದೆ. ಹೀಗಾಗಿ ಮ್ಯಾಚ್ ಫಿಕ್ಸಿಂಗ್ ಆರೋಪಗಳು ಸಂಪೂರ್ಣವಾಗಿ ಸುಳ್ಳು ಎಂದು ಕೆಲ ದಿನಗಳ ಹಿಂದೆಯಷ್ಟೇ ಬಿಸಿಸಿಐ ಸ್ಪಷ್ಟನೆ ನೀಡಿತ್ತು.
ಇದನ್ನೂ ಓದಿ: ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗನ ಪುತ್ರ, ಸರ್ಫರಾಝ್ ಖಾನ್ ಗೆಳತಿ..!
ಹೀಗಾಗಿ ಸನ್ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯದ ಫಿಕ್ಸಿಂಗ್ ಆರೋಪಕ್ಕೆ ಯಾವುದೇ ಹುರುಳಿಲ್ಲ ಎನ್ನಬಹುದು.