AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಹೈದರಾಬಾದ್‌ ವಿರುದ್ಧ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದ ಮುಂಬೈ

SRH Suffers Home Defeat: ಸನ್‌ರೈಸರ್ಸ್ ಹೈದರಾಬಾದ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್‌ಗಳಿಂದ ಸೋತಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ 143 ರನ್ ಗಳಿಸಿತು. ತಂಡದ ಪರ ಕ್ಲಾಸೆನ್ (71) ಮತ್ತು ಅಭಿನವ್ (43) ಉತ್ತಮ ಪ್ರದರ್ಶನ ನೀಡಿದರು. ಆದರೆ ಮುಂಬೈ ರೋಹಿತ್ ಶರ್ಮಾ ಅವರ ಅರ್ಧಶತಕದ ನೆರವಿನಿಂದ ಸುಲಭವಾಗಿ ಗುರಿ ತಲುಪಿತು.

IPL 2025: ಹೈದರಾಬಾದ್‌ ವಿರುದ್ಧ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದ ಮುಂಬೈ
Srh Vs Mi
ಪೃಥ್ವಿಶಂಕರ
|

Updated on:Apr 23, 2025 | 11:06 PM

Share

ಸನ್‌ರೈಸರ್ಸ್ ಹೈದರಾಬಾದ್‌ (SRH) ತಂಡ ತನ್ನ ತವರಿನಲ್ಲಿ ಮತ್ತೊಂದು ಸೋಲು ಅನುಭವಿಸಿದೆ. ತನ್ನ 8ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ (MI) ತಂಡವನ್ನು ಎದುರಿಸಿದ್ದ ಸನ್‌ರೈಸರ್ಸ್ 7 ವಿಕೆಟ್​ಗಳ ಹೀನಾಯ ಸೋಲು ಅನುಭವಿಸಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡ 20 ಓವರ್​ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 143 ರನ್ ಗಳಿಸಿತು. ತಂಡದ ಪರ ಕ್ಲಾಸೆನ್ 71 ರನ್ ಮತ್ತು ಅಭಿನವ್ 43 ರನ್ ಗಳಿಸಿದರು. ಮುಂಬೈ ಪರ ಟ್ರೆಂಟ್ ಬೌಲ್ಟ್ ನಾಲ್ಕು ವಿಕೆಟ್ ಪಡೆದರೆ, ದೀಪಕ್ ಚಹಾರ್ ಎರಡು ವಿಕೆಟ್ ಪಡೆದರು. ಈ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ ರೋಹಿತ್ ಶರ್ಮಾ (Rohit Sharma) ಅವರ ಅಮೋಘ ಅರ್ಧಶತಕದ ನೆರವಿನಿಂದ ಇನ್ನು 26 ಎಸೆತಗಳು ಬಾಕಿ ಇರುವಂತೆಯೇ ಜಯದ ನಗೆ ಬೀರಿತು.

ಹೈದರಾಬಾದ್​ಗೆ ಆರಂಭಿಕ ಆಘಾತ

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಹೈದರಾಬಾದ್ ತಂಡ ಕಳಪೆ ಆರಂಭ ಕಂಡಿತು. ತಂಡವು 20 ಕ್ಕಿಂತ ಕಡಿಮೆ ಸ್ಕೋರ್‌ಗೆ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು. ಟ್ರಾವಿಸ್ ಹೆಡ್ (0), ಅಭಿಷೇಕ್ ಶರ್ಮಾ (8), ಇಶಾನ್ ಕಿಶನ್ (1) ಮತ್ತು ನಿತೀಶ್ ರೆಡ್ಡಿ (2) ದೊಡ್ಡ ಸ್ಕೋರ್‌ಗಳನ್ನು ಗಳಿಸುವಲ್ಲಿ ವಿಫಲರಾದರು. ಇದಾದ ನಂತರ, ಹೆನ್ರಿಕ್ ಕ್ಲಾಸೆನ್ ಮತ್ತು ಅಭಿನವ್ ಮನೋಹರ್ ತಂಡದ ಇನ್ನಿಂಗ್ಸ್ ಜವಾಬ್ದಾರಿಯನ್ನು ವಹಿಸಿಕೊಂಡರು. ಇವರಿಬ್ಬರ ನಡುವೆ ಆರನೇ ವಿಕೆಟ್‌ಗೆ 99 ರನ್‌ಗಳ ಬೃಹತ್ ಪಾಲುದಾರಿಕೆ ಇತ್ತು.

ಕ್ಲಾಸೆನ್- ಅಭಿನವ್ ಜೊತೆಯಾಟ

ಕ್ಲಾಸೆನ್ ಈ ಐಪಿಎಲ್‌ನಲ್ಲಿ 34 ಎಸೆತಗಳಲ್ಲಿ ತಮ್ಮ ಮೊದಲ ಅರ್ಧಶತಕವನ್ನು ಪೂರೈಸಿದರು. ಅವರು 44 ಎಸೆತಗಳಲ್ಲಿ 71 ರನ್ ಗಳಿಸುವಲ್ಲಿ ಯಶಸ್ವಿಯಾದರು. ಅದೇ ಸಮಯದಲ್ಲಿ, ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದ ಅಭಿನವ್ ಮನೋಹರ್ 37 ಎಸೆತಗಳನ್ನು ಎದುರಿಸಿ ಎರಡು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳ ಸಹಾಯದಿಂದ 43 ರನ್ ಗಳಿಸಿದರು. ಉಳಿದಂತೆ ಅನಿಕೇತ್ ವರ್ಮಾ 12, ಪ್ಯಾಟ್ ಕಮ್ಮಿನ್ಸ್ 1 ಮತ್ತು ಹರ್ಷಲ್ ಪಟೇಲ್ 1* ರನ್ ಗಳಿಸಿದರು.

ರೋಹಿತ್ ಅರ್ಧಶತಕ

ಹೈದರಾಬಾದ್‌ ನೀಡಿದ ಗುರಿ ಬೆನ್ನಟ್ಟಿದ ಮುಂಬೈ 15.4 ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿ ಪಂದ್ಯವನ್ನು ಗೆದ್ದುಕೊಂಡಿತು. ಮುಂಬೈ ಪರ ರೋಹಿತ್ ಶರ್ಮಾ 70 ರನ್ ಹಾಗೂ ಸೂರ್ಯಕುಮಾರ್ ಯಾದವ್ ಅಜೇಯ 40 ರನ್ ಬಾರಿಸಿ ತಂಡವನ್ನು ಸುಲಭವಾಗಿ ಗೆಲುವಿನ ದಡ ಮುಟ್ಟಿಸಿದರು. ಹೈದರಾಬಾದ್ ಪರ ಜಯದೇವ್ ಉನದ್ಕತ್, ಇಶಾನ್ ಮಾಲಿಂಗ ಮತ್ತು ಜೀಶಾನ್ ಅನ್ಸಾರಿ ತಲಾ ಒಂದು ವಿಕೆಟ್ ಪಡೆದರು.

3ನೇ ಸ್ಥಾನಕ್ಕೇರಿದ ಮುಂಬೈ

ಸತತ ನಾಲ್ಕನೇ ಗೆಲುವಿನೊಂದಿಗೆ, ಮುಂಬೈ ತಂಡವು 10 ಅಂಕ ಮತ್ತು 0.673 ರ ನೆಟ್ ರನ್ ರೇಟ್​ನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿತು. ಏತನ್ಮಧ್ಯೆ, ಸನ್‌ರೈಸರ್ಸ್ ಹೈದರಾಬಾದ್ ಎಂಟು ಪಂದ್ಯಗಳಲ್ಲಿ ಆರರಲ್ಲಿ ಸೋತು ಒಂಬತ್ತನೇ ಸ್ಥಾನದಲ್ಲಿದೆ. ಈಗ ಮುಂಬೈ ಏಪ್ರಿಲ್ 27 ರಂದು ಅಂದರೆ ಭಾನುವಾರ ಲಕ್ನೋವನ್ನು ಎದುರಿಸಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:57 pm, Wed, 23 April 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ