AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಹೈದರಾಬಾದ್‌ ಆರಂಭಿಕ ಟ್ರಾವಿಸ್ ಹೆಡ್​ಗೆ ಕೊರೊನಾ ಪಾಸಿಟಿವ್

Travis Head Tests Positive for COVID-19: ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಟಗಾರ ಟ್ರಾವಿಸ್ ಹೆಡ್ ಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ಅವರು ಲಕ್ನೋ ವಿರುದ್ಧದ ಪಂದ್ಯವನ್ನು ತಪ್ಪಿಸಿಕೊಳ್ಳುವರು. ತಂಡದ ಕೋಚ್ ಡೇನಿಯಲ್ ವೆಟ್ಟೋರಿ ಈ ಸುದ್ದಿಯನ್ನು ಬಹಿರಂಗಪಡಿಸಿದ್ದಾರೆ. ಹೆಡ್ ಆಸ್ಟ್ರೇಲಿಯಾದಲ್ಲಿದ್ದಾಗ ಸೋಂಕಿಗೆ ಒಳಗಾಗಿದ್ದು, ಭಾರತಕ್ಕೆ ತಡವಾಗಿ ಆಗಮಿಸುತ್ತಾರೆ. ಈ ಘಟನೆ ಐಪಿಎಲ್ ನಲ್ಲಿ ನಾಲ್ಕು ವರ್ಷಗಳ ನಂತರ ಮೊದಲ ಕೋವಿಡ್ ಪ್ರಕರಣವಾಗಿದೆ.

IPL 2025: ಹೈದರಾಬಾದ್‌ ಆರಂಭಿಕ ಟ್ರಾವಿಸ್ ಹೆಡ್​ಗೆ ಕೊರೊನಾ ಪಾಸಿಟಿವ್
Travis Head
Follow us
ಪೃಥ್ವಿಶಂಕರ
|

Updated on:May 18, 2025 | 6:34 PM

ಅರ್ಧಕ್ಕೆ ನಿಂತಿದ್ದ 2025 ರ ಐಪಿಎಲ್ (IPL 2025) ಸೀಸನ್ ಮತ್ತೆ ಪ್ರಾರಂಭವಾಗಿದೆ. ಆದರೆ ಅಷ್ಟರಲ್ಲಿ ಒಂದು ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಐಪಿಎಲ್‌ನಲ್ಲಿ ಆಡುತ್ತಿರುವ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡದ ಸ್ಟಾರ್ ವಿದೇಶಿ ಆಟಗಾರ ಟ್ರಾವಿಸ್ ಹೆಡ್​​ಗೆ (Travis Head) ಕೊರೊನಾ ಸೋಂಕು ತಗುಲಿದೆ. ಇದರಿಂದಾಗಿ ಅವರು ಸಮಯಕ್ಕೆ ಸರಿಯಾಗಿ ಭಾರತಕ್ಕೆ ಬರಲು ಸಾಧ್ಯವಾಗಿಲ್ಲ. ಹೀಗಾಗಿ ಹೆಡ್ ತಂಡದ ಮುಂದಿನ ಪಂದ್ಯದಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್‌ಗೆ ಕೊರೊನಾ ವೈರಸ್ (COVID-19) ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ತಂಡದ ಮುಖ್ಯ ಕೋಚ್ ಡೇನಿಯಲ್ ವೆಟ್ಟೋರಿ ಭಾನುವಾರ ಬಹಿರಂಗಪಡಿಸಿದ್ದಾರೆ.

ಆಸ್ಟ್ರೇಲಿಯಾದಲ್ಲಿರುವ ಟ್ರಾವಿಸ್ ಹೆಡ್

ಭಾರತ-ಪಾಕಿಸ್ತಾನ ಉದ್ವಿಗ್ನತೆಯಿಂದಾಗಿ ಐಪಿಎಲ್ 2025 ಅನ್ನು ಅರ್ಧಕ್ಕೆ ನಿಲ್ಲಿಸಲಾಯಿತು. ಇದರಿಂದಾಗಿ ಎಲ್ಲಾ ವಿದೇಶಿ ಆಟಗಾರರು ತಮ್ಮ ಮನೆಗಳಿಗೆ ಮರಳಿದ್ದರು. ಎಲ್ಲಾರಂತೆ ಟ್ರಾವಿಸ್ ಹೆಡ್ ಕೂಡ ತನ್ನ ದೇಶ ಆಸ್ಟ್ರೇಲಿಯಾಕ್ಕೆ ಮರಳಿದ್ದರು. ಆದರೆ ಹೈದರಾಬಾದ್‌ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಭಾರತಕ್ಕೆ ಮರಳಿದಾಗ, ಟ್ರಾವಿಸ್ ಹೆಡ್ ಅವರೊಂದಿಗೆ ಭಾರತಕ್ಕೆ ಬಂದಿರಲಿಲ್ಲ. ಇದೀಗ ಇದರ ಹಿಂದಿನ ಕಾರಣ ಬಹಿರಂಗಗೊಂಡಿದ್ದು, ಹೆಡ್​ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಸನ್‌ರೈಸರ್ಸ್ ತನ್ನ ಮುಂದಿನ ಪಂದ್ಯದಲ್ಲಿ ಮೇ 19, ಸೋಮವಾರ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ ಆದರೆ ಹೆಡ್ ಆ ಪಂದ್ಯದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ.

ಮುಂದಿನ ಪಂದ್ಯಕ್ಕೆ ಅಲಭ್ಯ

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸನ್‌ರೈಸರ್ಸ್ ಕೋಚ್ ವೆಟ್ಟೋರಿ, ‘ಹೆಡ್ ಆಸ್ಟ್ರೇಲಿಯಾದಲ್ಲಿದ್ದಾಗ ಕೊರೊನಾವೈರಸ್ ಸೋಂಕಿಗೆ ತುತ್ತಾಗಿದ್ದಾರೆ. ಇದರಿಂದಾಗಿ ಅವರು ತಕ್ಷಣ ಭಾರತಕ್ಕೆ ಮರಳಲು ಸಾಧ್ಯವಾಗಲಿಲ್ಲ. ಇದೀಗ ಅವರು ಸೋಮವಾರ ಬೆಳಿಗ್ಗೆ ಇಲ್ಲಿಗೆ ತಲುಪುತ್ತಾರೆ. ಈ ಕಾರಣದಿಂದಾಗಿ ಅವರು ಲಕ್ನೋ ವಿರುದ್ಧ ಆಡಲು ಸಾಧ್ಯವಾಗುವುದಿಲ್ಲ, ಆದರೆ ಮುಂದಿನ ಪಂದ್ಯದಲ್ಲಿ ಆಡುತ್ತಾರೋ ಇಲ್ಲವೋ ಎಂಬುದು ಅವರು ಬಂದ ನಂತರವೇ ನಿರ್ಧರಿಸಲಾಗುವುದು ಎಂದು ವೆಟ್ಟೋರಿ ಹೇಳಿದ್ದಾರೆ. ಆದಾಗ್ಯೂ, ಹೆಡ್ ಅನುಪಸ್ಥಿತಿಯು ಹೈದರಾಬಾದ್ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲ ಏಕೆಂದರೆ ತಂಡವು ಈಗಾಗಲೇ ಪ್ಲೇಆಫ್​ನಿಂದ ಹೊರಬಿದ್ದಿದೆ.

IPL 2025: ಆರ್​ಸಿಬಿಗೆ ಬಲ ತುಂಬಿದ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್; ವಿಡಿಯೋ

4 ವರ್ಷಗಳ ನಂತರ ಐಪಿಎಲ್‌ನಲ್ಲಿ ಕೊರೊನಾ ಸದ್ದು!

ಅಚ್ಚರಿಯ ವಿಷಯವೆಂದರೆ ಕಳೆದ 4 ವರ್ಷಗಳಲ್ಲಿ ಐಪಿಎಲ್‌ನಲ್ಲಿ ಕೊರೊನಾವೈರಸ್ ಸೋಂಕಿನ ಮೊದಲ ಪ್ರಕರಣ ಇದಾಗಿರಬಹುದು. ಇದಕ್ಕೂ ಮೊದಲು, ಐಪಿಎಲ್ 2021 ರ ಸೀಸನ್​ನಲ್ಲಿ ಕೊರೊನಾವೈರಸ್ ಪ್ರಕರಣಗಳು ವರದಿಯಾಗಿದ್ದವು. ಇದರಿಂದಾಗಿ ಪಂದ್ಯಾವಳಿಯನ್ನು ಅರ್ಧಕ್ಕೆ ನಿಲ್ಲಿಸಬೇಕಾಯಿತು ಮತ್ತು ಕೆಲವು ತಿಂಗಳುಗಳ ನಂತರ ಉಳಿದ ಪಂದ್ಯಾವಳಿಯನ್ನು ಯುಎಇಯಲ್ಲಿ ಆಯೋಜಿಸಲಾಯಿತು. ಅಂದಿನಿಂದ, ಮುಂದಿನ ಮೂರು ಸೀಸನ್​ ಯಾವುದೇ ಸಮಸ್ಯೆಗಳಿಲ್ಲದೆ ನಡೆದಿದ್ದವು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:30 pm, Sun, 18 May 25