AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಹೋಯ್ತಾ ಇರು ಎಂದ ವರುಣ್ ಚಕ್ರವರ್ತಿಗೆ ಬಿತ್ತು ದಂಡ

IPL 2025 KKR vs CSK: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 57ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 179 ರನ್ ಕಲೆಹಾಕಿತು. ಈ ಗುರಿಯನ್ನು ಚೆನ್ನೈ ಸೂಪರ್ ಕಿಂಗ್ಸ್ 19.4 ಓವರ್​ಗಳಲ್ಲಿ ಚೇಸ್ ಮಾಡಿ 2 ವಿಕೆಟ್​ಗಳ ಜಯ ಸಾಧಿಸಿದೆ.

VIDEO: ಹೋಯ್ತಾ ಇರು ಎಂದ ವರುಣ್ ಚಕ್ರವರ್ತಿಗೆ ಬಿತ್ತು ದಂಡ
Varun Chakaravarthy
ಝಾಹಿರ್ ಯೂಸುಫ್
|

Updated on: May 08, 2025 | 10:24 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 57ನೇ ಪಂದ್ಯದಲ್ಲಿ ಐಪಿಎಲ್​ನ ನೀತಿ ಸಂಹಿತೆ ಉಲ್ಲಂಘಿಸಿದಕ್ಕಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಸ್ಪಿನ್ನರ್ ವರುಣ್ ಚಕ್ರವರ್ತಿಗೆ (Varun Chakaravarthy) ಅವರಿಗೆ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಲಾಗಿದೆ. ಹಾಗೆಯೇ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡದ ನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಅಜಿಂಕ್ಯ ರಹಾನೆ 48 ರನ್ ಬಾರಿಸಿದರೆ, ಮನೀಶ್ ಪಾಂಡೆ 36 ರನ್ ಕಲೆಹಾಕಿದರು. ಇನ್ನು ಆ್ಯಂಡ್ರೆ ರಸೆಲ್ 38 ರನ್ ಚಚ್ಚಿದ್ದರು. ಈ ಮೂಲಕ ಕೆಕೆಆರ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 179 ರನ್ ಕಲೆಹಾಕಿತು.

ಇದನ್ನೂ ಓದಿ
Image
ಬೋಲ್ಡ್ ಫೋಟೋಗೆ ಬೌಲ್ಡ್ ಆಗಿ ಸ್ಪಷ್ಟನೆ ನೀಡಿದ ವಿರಾಟ್ ಕೊಹ್ಲಿ
Image
IPL 2025: ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು
Image
IPL 2025: ಕರುಣ್ ನಾಯರ್ ಡಕೌಟ್: ಈ ಬಾರಿ ಮುಂಬೈ ಇಂಡಿಯನ್ಸ್ ಚಾಂಪಿಯನ್ಸ್?
Image
IPL ನಲ್ಲಿ ಬದಲಾವಣೆ: ರೌಂಡ್ ರಾಬಿನ್ ಸ್ವರೂಪ, ಒಂದು ತಂಡಕ್ಕೆ 18 ಪಂದ್ಯ

180 ರನ್​ಗಳ ಗುರಿ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ಆಯುಷ್ ಮ್ಹಾತ್ರೆ ಹಾಗೂ ಡೆವೊನ್ ಕಾನ್ವೆ ಶೂನ್ಯಕ್ಕೆ ಔಟಾಗಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ಉರ್ವಿನ್ ಪಟೇಲ್ ಕೇವಲ 11 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್​ನೊಂದಿಗೆ 31 ರನ್ ಬಾರಿಸಿದರು.

ಆ ಬಳಿಕ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಡೆವಾಲ್ಡ್ ಬ್ರೆವಿಸ್ ಕೇವಲ 25 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 52 ರನ್ ಚಚ್ಚಿದ್ದರು.

ವರುಣ್ ಚಕ್ರವರ್ತಿ ಆಕ್ರೋಶ:

ಮಧ್ಯಮ ಕ್ರಮಾಂಕದಲ್ಲಿ ಡೆವಾಲ್ಡ್ ಬ್ರೆವಿಸ್ ಆಡಿದ ಬಿರುಸಿನ ಬ್ಯಾಟಿಂಗ್​ನಿಂದಾಗಿ ಕೆಕೆಆರ್ ಪರ ವಾಲಿದ್ದ ಪಂದ್ಯವು ಸಿಎಸ್​ಕೆಯತ್ತ ಸಾಗಿತು. ಈ ಹಂತದಲ್ಲಿ ದಾಳಿಗಿಳಿದ ವರುಣ್ ಚಕ್ರವರ್ತಿ ಡೆವಾಲ್ಡ್ ಬ್ರೆವಿಸ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಇತ್ತ ಬ್ರೆವಿಸ್ ಔಟ್ ಆಗುತ್ತಿದ್ದಂತೆ, ವರುಣ್ ಚಕ್ರವರ್ತಿ ಹೋಯ್ತಾ ಇರು ಎಂದು ಕೈ ಸನ್ನೆ ಮಾಡುವ ಮೂಲಕ ಸಿಎಸ್​ಕೆ ಬ್ಯಾಟರ್​ಗೆ ಬೀಳ್ಕೊಡುಗೆ ನೀಡಿದ್ದರು.

ವರುಣ್ ಚಕ್ರವರ್ತಿಯ ಈ ವರ್ತನೆಗೆ ಇದೀಗ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಲಾಗಿದೆ. ಹಾಗೆಯೇ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ.

ವರುಣ್ ಚಕ್ರವರ್ತಿ ವಿಡಿಯೋ:

ಗೆದ್ದು ಬೀಗಿದ ಸಿಎಸ್​ಕೆ:

ಈ ಪಂದ್ಯದಲ್ಲಿ ಕೆಕೆಆರ್ ನೀಡಿದ 180 ರನ್​ಗಳ ಗುರಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.4 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಸಿಎಸ್​ಕೆ ತಂಡವು 2 ವಿಕೆಟ್​ಗಳ ರೋಚಕ ಗೆಲುವು ದಾಖಲಿಸಿದೆ.

ಇದನ್ನೂ ಓದಿ: IPL 2025: ಪ್ಲೇಆಫ್ ಪಂದ್ಯಗಳಿಗೆ ರೊಮಾರಿಯೊ ಶೆಫರ್ಡ್ ಡೌಟ್

ಈ ಗೆಲುವಿನ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲೇ ಉಳಿದಿದೆ. ಈವರೆಗೆ ಆಡಿದ 12 ಪಂದ್ಯಗಳಲ್ಲಿ ಸಿಎಸ್​ಕೆ ತಂಡವು 3 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದರೆ, 9 ಪಂದ್ಯಗಳಲ್ಲಿ ಸೋಲನುಭವಿಸಿದೆ.

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು