
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 57ನೇ ಪಂದ್ಯದಲ್ಲಿ ಐಪಿಎಲ್ನ ನೀತಿ ಸಂಹಿತೆ ಉಲ್ಲಂಘಿಸಿದಕ್ಕಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಸ್ಪಿನ್ನರ್ ವರುಣ್ ಚಕ್ರವರ್ತಿಗೆ (Varun Chakaravarthy) ಅವರಿಗೆ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಲಾಗಿದೆ. ಹಾಗೆಯೇ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡದ ನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಅಜಿಂಕ್ಯ ರಹಾನೆ 48 ರನ್ ಬಾರಿಸಿದರೆ, ಮನೀಶ್ ಪಾಂಡೆ 36 ರನ್ ಕಲೆಹಾಕಿದರು. ಇನ್ನು ಆ್ಯಂಡ್ರೆ ರಸೆಲ್ 38 ರನ್ ಚಚ್ಚಿದ್ದರು. ಈ ಮೂಲಕ ಕೆಕೆಆರ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 179 ರನ್ ಕಲೆಹಾಕಿತು.
180 ರನ್ಗಳ ಗುರಿ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ಆಯುಷ್ ಮ್ಹಾತ್ರೆ ಹಾಗೂ ಡೆವೊನ್ ಕಾನ್ವೆ ಶೂನ್ಯಕ್ಕೆ ಔಟಾಗಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ಉರ್ವಿನ್ ಪಟೇಲ್ ಕೇವಲ 11 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ನೊಂದಿಗೆ 31 ರನ್ ಬಾರಿಸಿದರು.
ಆ ಬಳಿಕ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಡೆವಾಲ್ಡ್ ಬ್ರೆವಿಸ್ ಕೇವಲ 25 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 52 ರನ್ ಚಚ್ಚಿದ್ದರು.
ಮಧ್ಯಮ ಕ್ರಮಾಂಕದಲ್ಲಿ ಡೆವಾಲ್ಡ್ ಬ್ರೆವಿಸ್ ಆಡಿದ ಬಿರುಸಿನ ಬ್ಯಾಟಿಂಗ್ನಿಂದಾಗಿ ಕೆಕೆಆರ್ ಪರ ವಾಲಿದ್ದ ಪಂದ್ಯವು ಸಿಎಸ್ಕೆಯತ್ತ ಸಾಗಿತು. ಈ ಹಂತದಲ್ಲಿ ದಾಳಿಗಿಳಿದ ವರುಣ್ ಚಕ್ರವರ್ತಿ ಡೆವಾಲ್ಡ್ ಬ್ರೆವಿಸ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
ಇತ್ತ ಬ್ರೆವಿಸ್ ಔಟ್ ಆಗುತ್ತಿದ್ದಂತೆ, ವರುಣ್ ಚಕ್ರವರ್ತಿ ಹೋಯ್ತಾ ಇರು ಎಂದು ಕೈ ಸನ್ನೆ ಮಾಡುವ ಮೂಲಕ ಸಿಎಸ್ಕೆ ಬ್ಯಾಟರ್ಗೆ ಬೀಳ್ಕೊಡುಗೆ ನೀಡಿದ್ದರು.
ವರುಣ್ ಚಕ್ರವರ್ತಿಯ ಈ ವರ್ತನೆಗೆ ಇದೀಗ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಲಾಗಿದೆ. ಹಾಗೆಯೇ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ.
— Zsports (@_Zsports) May 8, 2025
ಈ ಪಂದ್ಯದಲ್ಲಿ ಕೆಕೆಆರ್ ನೀಡಿದ 180 ರನ್ಗಳ ಗುರಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.4 ಓವರ್ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಸಿಎಸ್ಕೆ ತಂಡವು 2 ವಿಕೆಟ್ಗಳ ರೋಚಕ ಗೆಲುವು ದಾಖಲಿಸಿದೆ.
ಇದನ್ನೂ ಓದಿ: IPL 2025: ಪ್ಲೇಆಫ್ ಪಂದ್ಯಗಳಿಗೆ ರೊಮಾರಿಯೊ ಶೆಫರ್ಡ್ ಡೌಟ್
ಈ ಗೆಲುವಿನ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲೇ ಉಳಿದಿದೆ. ಈವರೆಗೆ ಆಡಿದ 12 ಪಂದ್ಯಗಳಲ್ಲಿ ಸಿಎಸ್ಕೆ ತಂಡವು 3 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದರೆ, 9 ಪಂದ್ಯಗಳಲ್ಲಿ ಸೋಲನುಭವಿಸಿದೆ.