AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಆರ್​ಸಿಬಿ ಕ್ಯಾಂಪ್ ಸೇರಿಕೊಂಡ ಕೊಹ್ಲಿ; ಕಿಂಗ್ ರಾಯಲ್ ಎಂಟ್ರಿ ಹೇಗಿತ್ತು? ವಿಡಿಯೋ ನೋಡಿ

Virat Kohli Joins RCB Training Camp: ಐಪಿಎಲ್ 2025 ಟೂರ್ನಮೆಂಟ್ ಮಾರ್ಚ್ 22 ರಂದು ಆರಂಭವಾಗಲಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ಇತ್ತೀಚೆಗೆ ಆರ್‌ಸಿಬಿ ತರಬೇತಿ ಶಿಬಿರ ಸೇರಿಕೊಂಡಿದ್ದಾರೆ. ಕೊಹ್ಲಿಯ ಆಗಮನವು ಆರ್‌ಸಿಬಿ ತಂಡಕ್ಕೆ ಹೆಚ್ಚಿನ ಉತ್ಸಾಹ ತುಂಬಿದೆ. ರಜತ್ ಪಾಟಿದಾರ್ ನಾಯಕತ್ವದಲ್ಲಿ ಆಡುವ ಆರ್‌ಸಿಬಿ ತನ್ನ ಮೊದಲ ಐಪಿಎಲ್ ಪ್ರಶಸ್ತಿಯನ್ನು ಗೆಲ್ಲಲು ಬಯಸುತ್ತದೆ. ಕೊಹ್ಲಿಯ ಉತ್ತಮ ಫಾರ್ಮ್ ಐಪಿಎಲ್ ನಲ್ಲೂ ಮುಂದುವರಿಯುವ ನಿರೀಕ್ಷೆ ಅಭಿಮಾನಿಗಳಲ್ಲಿದೆ.

IPL 2025: ಆರ್​ಸಿಬಿ ಕ್ಯಾಂಪ್ ಸೇರಿಕೊಂಡ ಕೊಹ್ಲಿ; ಕಿಂಗ್ ರಾಯಲ್ ಎಂಟ್ರಿ ಹೇಗಿತ್ತು? ವಿಡಿಯೋ ನೋಡಿ
Virat Kohli
ಪೃಥ್ವಿಶಂಕರ
|

Updated on:Mar 15, 2025 | 4:37 PM

Share

18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ 2025 ರ (IPL 2025) ಆರಂಭಕ್ಕೆ ಈಗ ಕೆಲವೇ ದಿನಗಳು ಬಾಕಿ ಇವೆ. ಮಾರ್ಚ್ 22 ರಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದೊಂದಿಗೆ ಐಪಿಎಲ್ ಪಂದ್ಯಾವಳಿ ಆರಂಭವಾಗಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಈಗಾಗಲೇ ನೆಟ್ಸ್​ನಲ್ಲಿ ಸಾಕಷ್ಟು ಬೆವರು ಹರಿಸುತ್ತಿವೆ. ಎರಡು ತಂಡಗಳು ಭಾಗಶಃ ಆಟಗಾರರು ತಮ್ಮ ತಮ್ಮ ತಂಡಗಳ ಕ್ಯಾಂಪ್ ಸೇರಿಕೊಂಡಿದ್ದು, ಅಭ್ಯಾಸದಲ್ಲಿ ನಿರತವಾಗಿವೆ. ಇತ್ತ ರಜತ್ ಪಾಟಿದರ್ ನಾಯಕತ್ವದಲ್ಲಿ ಮೊದಲ ಬಾರಿಗೆ ಕಣಕ್ಕಿಳಿಯುತ್ತಿರುವ ಆರ್​ಸಿಬಿ (RCB) ಕೂಡ ಕಳೆದ ಕೆಲವು ದಿನಗಳಿಂದ ಅಭ್ಯಾಸ ಶಿಬಿರ ನಡೆಸುತ್ತಿದ್ದು, ಇದೀಗ ಈ ಶಿಬಿರಕ್ಕೆ ತಂಡದ ಬ್ಯಾಟಿಂಗ್ ಜೀವಾಳ ಕಿಂಗ್ ಕೊಹ್ಲಿಯ (Virat Kohli) ಎಂಟ್ರಿಯಾಗಿದೆ.

ತಂಡಕ್ಕೆ ಎಂಟ್ರಿಕೊಟ್ಟ ವಿರಾಟ್

ವಾಸ್ತವವಾಗಿ ಚಾಂಪಿಯನ್ಸ್ ಟ್ರೋಫಿಯನ್ನು ಆಡುವ ಸಲುವಾಗಿ ಟೀಂ ಇಂಡಿಯಾದೊಂದಿಗೆ ದುಬೈನಲ್ಲಿದ್ದ ವಿರಾಟ್ ಕೊಹ್ಲಿ ಕೆಲವೇ ದಿನಗಳ ಹಿಂದೆ ಭಾರತಕ್ಕೆ ಬಂದಿಳಿದಿದ್ದರು. ಇತ್ತ ಕೊಹ್ಲಿ ಅನುಪಸ್ಥಿತಿಯಲ್ಲಿ ಆರ್​ಸಿಬಿ, ಉಳಿದ ಆಟಗಾರರೊಂದಿಗೆ ಅಭ್ಯಾಸ ಶುರು ಮಾಡಿತ್ತು. ತಂಡದ ನೂತನ ನಾಯಕ ರಜತ್ ಪಾಟಿದರ್​ನಿಂದ ಹಿಡಿದು, ವಿದೇಶಿ ಆಟಗಾರರು ಸೇರಿದಂತೆ ತಂಡದ ಭಾಗಶಃ ಆಟಗಾರರು ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿದ್ದರು. ಆದರೆ ವಿರಾಟ್ ಕೊಹ್ಲಿ ಅನುಪಸ್ಥಿತಿ ಮಾತ್ರ ಎದ್ದು ಕಾಣುತ್ತಿತ್ತು.

ಇದನ್ನೂ ಓದಿ
Image
ಐಪಿಎಲ್‌ನಲ್ಲಿ ಅಧಿಕ ಬಾರಿ ಸೊನ್ನೆಗೆ ಔಟಾದ ಟಾಪ್ 5 ಬ್ಯಾಟರ್​ಗಳಿವರು
Image
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
Image
ಡೆಲ್ಲಿ ವಿರುದ್ಧ ಗೆದ್ದ ಗುಜರಾತ್; ಪಾಯಿಂಟ್ ಪಟ್ಟಿಯಲ್ಲಿ ಬದಲಾವಣೆ
Image
ಆರ್​ಸಿಬಿಗೆ ಸಿಹಿ ಸುದ್ದಿ; ಇಂಜುರಿಯಿಂದ ಚೇತರಿಸಿಕೊಂಡ ಸ್ಟಾರ್ ಬ್ಯಾಟರ್

ಆದರೀಗ ಮೊದಲ ಪಂದ್ಯಕ್ಕೆ ಒಂದು ವಾರ ಉಳಿದಿರುವ ಬೆನ್ನಲ್ಲೇ ರೆಡ್ ಆರ್ಮಿಯನ್ನು ಕಿಂಗ್ ಕೊಹ್ಲಿ ಕೂಡಿಕೊಂಡಿದ್ದಾರೆ. ತಂಡದ ಮಾಜಿ ನಾಯಕ ಹಾಗೂ ತಂಡದ ಜೀವಾಳವಾಗಿರುವ ವಿರಾಟ್ ಕೊಹ್ಲಿಯ ಆಗಮನದ ವಿಡಿಯೋವನ್ನು ಆರ್​ಸಿಬಿ ಫ್ರಾಂಚೈಸಿ ತನ್ನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿಂಗ್ ಕಮಾಲ್

ಈ ಬಾರಿ ಆರ್‌ಸಿಬಿಯನ್ನು ರಜತ್ ಪಾಟಿದಾರ್ ಮುನ್ನಡೆಸಲಿದ್ದಾರೆ, ಆದರೆ ಫ್ರಾಂಚೈಸಿ ಇನ್ನೂ ತನ್ನ ಮೊದಲ ಐಪಿಎಲ್ ಪ್ರಶಸ್ತಿಗಾಗಿ ಕಾಯುತ್ತಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದ ಕೊಹ್ಲಿ ಆಡಿದ್ದ ಐದು ಪಂದ್ಯಗಳಲ್ಲಿ 54.50 ಸರಾಸರಿಯಲ್ಲಿ 218 ರನ್ ಕಲೆಹಾಕಿದ್ದರು. ಇದರಲ್ಲಿ ಒಂದು ಶತಕ ಮತ್ತು ಅರ್ಧಶತಕ ಸೇರಿತ್ತು. ಬಾಂಗ್ಲಾದೇಶ ವಿರುದ್ಧದ ಮೊದಲ ಪಂದ್ಯದಲ್ಲಿ ಅವರು ಉತ್ತಮ ಪ್ರದರ್ಶನ ನೀಡಲಿಲ್ಲ.

ಇದನ್ನೂ ಓದಿ: ಯೋ- ಯೋ ಟೆಸ್ಟ್​ನಲ್ಲಿ ಕಿಂಗ್ ಕೊಹ್ಲಿಯನ್ನೇ ಮೀರಿಸಿದ ನಿತೀಶ್ ರೆಡ್ಡಿ; ಐಪಿಎಲ್​ಗೆ ಫಿಟ್

ಆ ಬಳಿಕ ನಡೆದಿದ್ದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅಜೇಯ ಶತಕ ಬಾರಿಸಿದ್ದ ಕೊಹ್ಲಿ ತಂಡವನ್ನು ಗೆಲುವಿನತ್ತ ಕೊಂಡೊಯ್ದಿದ್ದರು. ಇದಾದ ನಂತರ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಕೊಹ್ಲಿ 84 ರನ್ ಬಾರಿಸಿ ಮತ್ತೊಮ್ಮೆ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದೀಗ ಕೊಹ್ಲಿ ಐಪಿಎಲ್‌ನಲ್ಲಿ ತಮ್ಮ ಛಾಪು ಮೂಡಿಸುವತ್ತ ಗಮನ ಹರಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿನ ಕೊಹ್ಲಿ ಫಾರ್ಮ್ ಐಪಿಎಲ್‌ನಲ್ಲೂ ಮುಂದುವರಿಯಲ್ಲಿ ಎಂಬುದು ಕೊಹ್ಲಿ ಅಭಿಮಾನಿಗಳ ಆಶಯವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:35 pm, Sat, 15 March 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!