AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಿಯ ಕೈವಾಡ, 2 ಘಟನೆ ನಡೀತು… ಅಭಿಮಾನಿಗಳು ಬಂದ್ರು, ವಿಶೇಷ ಅತಿಥಿಗಳು ಆಗಮಿಸಿದ್ರು!

IPL 2025 RCB vs KKR: ಇಂಡಿಯನ್ ಪ್ರೀಮಿಯರ್ ಲೀಗ್​ನ 58ನೇ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-ಕೊಲ್ಕತ್ತಾ ನೈಟ್ ರೈಡರ್ಸ್​ ನಡುವಣ ಈ ಪಂದ್ಯದ ವೇಳೆ ವಿರಾಟ್ ಕೊಹ್ಲಿ (Virat Kohli) ಅಭಿಮಾನಿಗಳು ವೈಟ್ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದರು.

ವಿಧಿಯ ಕೈವಾಡ, 2 ಘಟನೆ ನಡೀತು... ಅಭಿಮಾನಿಗಳು ಬಂದ್ರು, ವಿಶೇಷ ಅತಿಥಿಗಳು ಆಗಮಿಸಿದ್ರು!
Virat Kohli
ಝಾಹಿರ್ ಯೂಸುಫ್
|

Updated on:May 18, 2025 | 9:06 AM

Share

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ… ಐಪಿಎಲ್​ನ 58ನೇ ಪಂದ್ಯ. ವಿರಾಟ್ ಕೊಹ್ಲಿ (Virat Kohli) ಟೆಸ್ಟ್​ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಬಳಿಕ ಕಣಕ್ಕಿಳಿಯುತ್ತಿರುವ ಮೊದಲ ಪಂದ್ಯ. ಅತ್ತ ಸೋಷಿಯಲ್ ಮೀಡಿಯಾ ಮೂಲಕ ನಿವೃತ್ತಿ ಘೋಷಿಸಿದ್ದರಿಂದ ವಿರಾಟ್ ಕೊಹ್ಲಿ ಅಭಿಮಾನಿಗಳು ತನ್ನ ನೆಚ್ಚಿನ ಆಟಗಾರನಿಗೆ ವಿಶೇಷ ಗೌರವ ಸೂಚಿಸಲು ನಿರ್ಧರಿಸಿದ್ದರು. ಅದಕ್ಕಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ವೇಳೆ ಎಲ್ಲರೂ ವೈಟ್ ಟಿ ಶರ್ಟ್​​ನಲ್ಲಿ ಆಗಮಿಸಬೇಕೆಂದು ಆರ್​ಸಿಬಿ ಅಭಿಮಾನಿಗಳು ಮನವಿ ಮಾಡಿದ್ದರು.

ಈ ಮನವಿಗೆ ಅತ್ಯುತ್ತಮ ಸ್ಪಂದನೆ ವ್ಯಕ್ತವಾಗಿತ್ತು. ಶನಿವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಗ್ಯಾಲರಿಯಲ್ಲಿ ವಿರಾಟ್ ಕೊಹ್ಲಿ ಹೆಸರಿನ ವೈಟ್ ಜೆರ್ಸಿಗಳು ರಾರಾಜಿಸಿದವು. ಅನೇಕು ಬಿಳಿ ಬಣ್ಣದ ವಸ್ತ್ರದಲ್ಲಿ ಕಾಣಿಸಿಕೊಂಡರು. ಹೀಗೆ ಟೆಸ್ಟ್ ಕ್ರಿಕೆಟ್​ನ ಕಿಂಗ್​ಗೆ ಗೌರವಯುತ ವಿದಾಯ ಹೇಳಲು ಅಭಿಮಾನಿಗಳು ಪ್ಲ್ಯಾನ್ ರೂಪಿಸಿದ್ದರು. ಆದರೆ ವಿಧಿಯಾಟ… ಈ ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡಿತು.

ಇದಾಗ್ಯೂ ಪಂದ್ಯ ನಡೆಯಬಹುದು ಎಂಬ ಆಶಾಭಾವನೆಯೊಂದಿಗೆ ಅಭಿಮಾನಿಗಳು ಕಾದು ಕುಳಿತರು. ಆದರೆ ನಿರಂತರ ಸುರಿದ ಮಳೆಯಿಂದಾಗಿ ಪಂದ್ಯವನ್ನು ರದ್ದುಗೊಳಿಸದೇ ಬೇರೆ ದಾರಿ ಇರಲಿಲ್ಲ. ಅಂತಿಮವಾಗಿ ಆರ್​​ಸಿಬಿ-ಕೆಕೆಆರ್ ನಡುವಣ ಪಂದ್ಯವನ್ನು ರದ್ದುಗೊಳಿಸಲಾಯಿತು.

ಇದರ ನಡುವೆ ಎರಡು ಘಟನೆಗಳು ನಡೀತು. ಅಭಿಮಾನಿಗಳು ಶ್ವೇತ ವಸ್ತ್ರದಲ್ಲಿ ಆಗಮಿಸಿದ್ದರು. ಅತ್ತ ಬಿಳಿ ಪಾರಿವಾಳಗಳ ಹಿಂಡು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಹಾರಾಡುತ್ತಿರುವುದು ಕಂಡು ಬಂತು. ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಅಲ್ಲದೆ ಇದು ಪ್ರಕೃತಿಯೇ ವಿರಾಟ್ ಕೊಹ್ಲಿಗೆ ಕಾವ್ಯಾತ್ಮಕವಾಗಿ ನೀಡಿದ ಎಂದು ಅನೇಕರು ಬಣ್ಣಿಸಿದ್ದಾರೆ.

ಅಂದರೆ ಒಂದೆಡೆ ಅಭಿಮಾನಿಗಳಿಂದ ವೈಟ್ ಜೆರ್ಸಿ ಗೌರವ ಸಿಕ್ಕರೆ, ಮತ್ತೊಂದೆಡೆ ಚಿನ್ನಸ್ವಾಮಿ ಸ್ಟೇಡಿಯಂ ಮೇಲೆ ಬಿಳಿ ಪಾರಿವಾಳ ಕಾಣಿಸಿಕೊಂಡಿದೆ. ಹೀಗಾಗಿಯೇ ಇದನ್ನು ದೇವರಿಂದ ಕಿಂಗ್ ಕೊಹ್ಲಿಗೆ ಸಿಕ್ಕ ಗೌರವ ಎಂದು ವರ್ಣಿಸಲಾಗುತ್ತಿದೆ.

ಪಾರಿವಾಳಗಳ ವಿಡಿಯೋ:

ಒಟ್ಟಿನಲ್ಲಿ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ ಇನ್ಮುಂದೆ ಭಾರತದ ಪರ ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ. ಅದು ಕೂಡ ಕೇವಲ 27 ಪಂದ್ಯಗಳಲ್ಲಿ ಮಾತ್ರ. ಅಂದರೆ 2027ರ ಏಕದಿನ ವಿಶ್ವಕಪ್​ವರೆಗೆ ಟೀಮ್ ಇಂಡಿಯಾ ಕೇವಲ 27 ಏಕದಿನ ಪಂದ್ಯಗಳನ್ನು ಮಾತ್ರ ಆಡಲಿದೆ.

ಇದನ್ನೂ ಓದಿ: IPL 2025: ಇಂದು 2 ತಂಡಗಳು ಗೆದ್ದರೆ RCB ಪ್ಲೇಆಫ್​ಗೆ..!

ಈ ಎಲ್ಲಾ ಪಂದ್ಯಗಳಲ್ಲೂ ವಿರಾಟ್ ಕೊಹ್ಲಿ ಕಣಕ್ಕಿಳಿದರೆ, ಬ್ಲೂ ಜೆರ್ಸಿಯಲ್ಲಿ ಕಿಂಗ್ ಕೊಹ್ಲಿಯನ್ನು 27 ದಿನಗಳ ಕಾಲ ನೋಡಬಹುದು. ಇಲ್ಲದಿದ್ದರೆ ಪ್ರತಿ ವರ್ಷ ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗುವರೆಗೆ ಕಾಯಲೇಬೇಕು.

Published On - 9:04 am, Sun, 18 May 25

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು