AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಸೋಲಿನಿಂದ ಕಂಗೆಟ್ಟ ಕೆಕೆಆರ್ ತಂಡದ ನಾಯಕನಿಗೆ ದಂಡದ ಬರೆ..!

CSK vs KKR: ಐಪಿಎಲ್​ನ 22ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 192 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 160 ರನ್​ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಸಿಎಸ್​ಕೆ ತಂಡ 32 ರನ್​ಗಳ ಜಯ ಸಾಧಿಸಿದೆ.

IPL 2026: ಸೋಲಿನಿಂದ ಕಂಗೆಟ್ಟ ಕೆಕೆಆರ್ ತಂಡದ ನಾಯಕನಿಗೆ ದಂಡದ ಬರೆ..!
Ajinkya Rahane
ಝಾಹಿರ್ ಯೂಸುಫ್
|

Updated on: Apr 15, 2026 | 11:06 AM

Share

IPL 2026: ಐಪಿಎಲ್ 2026ರ 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ನಾಯಕ ಅಜಿಂಕ್ಯ ರಹಾನೆ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

ಏಪ್ರಿಲ್ 14 ರಂದು ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್ ತಂಡವು ನಿಗದಿತ ಸಮಯದೊಳಗೆ ತನ್ನ ಓವರ್‌ಗಳನ್ನು ಪೂರ್ಣಗೊಳಿಸಲು ವಿಫಲವಾಗಿದೆ. ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಇದು ಕನಿಷ್ಠ ಓವರ್ ರೇಟ್ ಅಪರಾಧವಾಗಿದ್ದು, ಪ್ರಸಕ್ತ ಸೀಸನ್‌ನಲ್ಲಿ ಕೆಕೆಆರ್ ತಂಡದ ಮೊದಲ ತಪ್ಪಾದ ಕಾರಣ ನಾಯಕನಿಗೆ 12 ಲಕ್ಷ ರೂ.ಗಳ ದಂಡ ವಿಧಿಸಿ ಐಪಿಎಲ್ ಆಡಳಿತ ಮಂಡಳಿ ಆದೇಶಿಸಿದೆ.

ಐಪಿಎಲ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ.

ಇನ್ನು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ ಎಲ್ಲಾ ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.

ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಅಲ್ಲದೆ ನಾಯಕನಿಗೆ ಡಿಮೆರಿಟ್ ಪಾಯಿಂಟ್ ನೀಡಲಾಗುತ್ತದೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 12 ಲಕ್ಷ ಅಥವಾ ಅವರ ಪಂದ್ಯದ ಶುಲ್ಕದ 50% ದಂಡವನ್ನು ವಿಧಿಸಲಾಗುತ್ತದೆ.

ಇನ್ನು ನಾಯಕ ನಾಯಕನ ಖಾತೆಯಲ್ಲಿ ಡಿಮೆರಿಟ್ ಪಾಯಿಂಟ್‌ಗಳು ಒಂದು ನಿರ್ದಿಷ್ಟ ಮಿತಿಯನ್ನು (ಉದಾಹರಣೆಗೆ 3 ವರ್ಷಗಳಲ್ಲಿ 4 ಪಾಯಿಂಟ್ಸ್) ಮೀರಿದಾಗ ಮಾತ್ರ ಪಂದ್ಯದ ನಿಷೇಧ ಹೇರಬಹುದು. ಅಂದರೆ ಅತ್ಯಂತ ಗಂಭೀರ ಅಥವಾ ಅತಿ ಹೆಚ್ಚು ಬಾರಿ ತಪ್ಪು ಮಾಡಿದಾಗ ಮಾತ್ರ ನಾಯಕನನ್ನು ಒಂದು ಪಂದ್ಯದಿಂದ ನಿಷೇಧಿಸಲಾಗುತ್ತದೆ.

ಇದನ್ನೂ ಓದಿ: ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್​ವೆಲ್

ಸೋಲಿನಿಂದ ಕಂಗೆಟ್ಟಿರುವ ಕೆಕೆಆರ್​:

ಐಪಿಎಲ್​ 2026 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈವರೆಗೆ 5 ಪಂದ್ಯಗಳನ್ನಾಡಿದೆ. ಈ ಐದು ಪಂದ್ಯಗಳಲ್ಲಿ 4 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯವು ಮಳೆಯಿಂದಾಗಿ ರದ್ದಾದ ಕಾರಣ ಸೋಲಿನಿಂದ ಪಾರಾಗಿದೆ. ಇದೀಗ ಸಿಎಸ್​ಕೆ ವಿರುದ್ಧದ ಸೋಲಿನ ಬೆನ್ನಲ್ಲೇ ಸ್ಲೋ ಓವರ್ ರೇಟ್ ತಪ್ಪಿಗಾಗಿ ಕೆಕೆಆರ್ ತಂಡದ ನಾಯಕ ದಂಡದ ಶಿಕ್ಷೆಗೆ ಒಳಗಾಗಿದ್ದಾರೆ.

Follow Us