AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

200ಕ್ಕೂ ಹೆಚ್ಚು ಪೋಸ್ಟ್‌ ತೆಗೆದು ಹಾಕಿದ ಅರ್ಷದೀಪ್ ಸಿಂಗ್..!

IPL 2026 Punjab Kings: ಈ ಬಾರಿಯ ಐಪಿಎಲ್​ನ ಮೊದಲಾರ್ಧದಲ್ಲಿ ಆಡಿದ 7 ಪಂದ್ಯಗಳ ಮೂಲಕ ಪಂಜಾಬ್ ಕಿಂಗ್ಸ್ ಒಟ್ಟು 13 ಅಂಕಗಳನ್ನು ಕಲೆಹಾಕಿದ್ದರು. ಇದಾದ ಬಳಿಕ ಪಡೆದಿದ್ದು ಕೇವಲ 2 ಅಂಕಗಳು ಮಾತ್ರ. ಅಂದರೆ ದ್ವಿತೀಯಾರ್ಧದಲ್ಲಿ ಪಂಜಾಬ್ ಕಿಂಗ್ಸ್ 7 ಪಂದ್ಯಗಳಲ್ಲಿ ಗೆದ್ದಿರುವುದು ಒಂದು ಮ್ಯಾಚ್ ಮಾತ್ರ. 

200ಕ್ಕೂ ಹೆಚ್ಚು ಪೋಸ್ಟ್‌ ತೆಗೆದು ಹಾಕಿದ ಅರ್ಷದೀಪ್ ಸಿಂಗ್..!
Arshdeep Singh Image Credit source: IPL
ಝಾಹಿರ್ ಯೂಸುಫ್
|

Updated on:May 26, 2026 | 12:33 PM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಿಂದ ಪಂಜಾಬ್ ಕಿಂಗ್ಸ್ ಹೊರಬೀಳುತ್ತಿದ್ದಂತೆ ತಂಡದ ಪ್ರಮುಖ ವೇಗಿ ಅರ್ಷದೀಪ್ ಸಿಂಗ್ ತನ್ನ ಇನ್​ಸ್ಟಾಗ್ರಾಮ್ ಖಾತೆಗೆ ಮೇಜರ್ ಸರ್ಜರಿ ಮಾಡಿದ್ದಾರೆ. ಅದು ಕೂಡ ಬರೋಬ್ಬರಿ ತನ್ನ ಬಯೋದಿಂದ ಪಂಜಾಬ್ ಕಿಂಗ್ಸ್ ತಂಡದ ಹೆಸರಿನ್ನು ರಿಮೂವ್ ಮಾಡುವ ಜೊತೆಗೆ, 234 ಪೋಸ್ಟ್​ಗಳನ್ನು ಡಿಲೀಟ್ ಅಥವಾ ಆರ್ಕೈವ್ ಮಾಡುವ ಮೂಲಕ ಎಂಬುದೇ ಅಚ್ಚರಿ.

ಇತ್ತ 234 ಪೋಸ್ಟ್‌ಗಳನ್ನು ಡಿಲೀಟ್ ಅಥವಾ ಆರ್ಕೈವ್ ಮಾಡಿರುವ ಕಾರಣ ಅವರ ಪ್ರೊಫೈಲ್‌ನಲ್ಲಿ ಈಗ ಕೇವಲ 44 ಪೋಸ್ಟ್​ಗಳು ಮಾತ್ರ ಕಾಣಿಸಿಕೊಳ್ಳುತ್ತಿದೆ. ಇದರ ಜೊತೆಗೆ ಅರ್ಷದೀಪ್​ ಸಿಂಗ್ ತಮ್ಮ ಪ್ರೊಫೈಲ್ ಚಿತ್ರವನ್ನು (DP) ಬದಲಾಯಿಸಿದ್ದು, ಬಯೋದಲ್ಲಿದ್ದ ಪ್ರಮುಖ ವಿವರಗಳನ್ನೂ ತೆಗೆದುಹಾಕಿದ್ದಾರೆ.

ಪಂಜಾಬ್ ಕಿಂಗ್ಸ್ ಆಟಗಾರನ ಈ ದಿಢೀರ್ ಬದಲಾವಣೆಗೆ ಏನು ಕಾರಣ ಎಂಬುದು ಇನ್ನೂ ಕೂಡ ಬಹಿರಂಗವಾಗಿಲ್ಲ. ಇದಾಗ್ಯೂ ಐಪಿಎಲ್ ವೇಳೆ ನಡೆದ ಕೆಲ ಘಟನೆಗಳಿಂದಾಗಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಐಪಿಎಲ್​ ವೇಳೆ ಏನಾಗಿತ್ತು?

ಅರ್ಷದೀಪ್ ಸಿಂಗ್ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಕ್ಕೂ ಮುನ್ನ ಮಾಡಿದ ವಿಡಿಯೋದಲ್ಲಿ ತಿಲಕ್ ವರ್ಮಾ ಅವರನ್ನು ಅಂಧೇರಾ ಎಂದು ಕರೆಯುತ್ತಿರುವುದು ಸೆರೆಯಾಗಿತ್ತು. ತಿಲಕ್ ವರ್ಮಾ ಅವರ ಮೈ ಬಣ್ಣವನ್ನು ಪ್ರಸ್ತಾಪಿಸಿ ಮಾಡಲಾಗಿದ್ದ ಈ ವಿಡಿಯೋ ವಿರುದ್ಧ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದವು.

ಹಾಗೆಯೇ ಪಂಜಾಬ್ ಕಿಂಗ್ಸ್ ತಂಡದ ಸಹ-ಆಟಗಾರ ಪ್ರಿಯಾಂಶ್ ಆರ್ಯ ಅವರನ್ನು ಅಣಕಿಸುವಂತೆ ಅವರು ಕೆಲ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಇದರ ಜೊತೆಗೆ ಅರ್ಷದೀಪ್ ಸಿಂಗ್ ಹಂಚಿಕೊಂಡ ವಿಡಿಯೋದಲ್ಲಿ ಯುಜ್ವೇಂದ್ರ ಚಹಲ್ ವೇಪ್ ಮಾಡುತ್ತಿರುವುದು ಕೂಡ ಕಂಡು ಬಂದಿತ್ತು. ಹೀಗೆ ಮೈದಾನದಲ್ಲಿನ ಪಂದ್ಯಕ್ಕಿಂತ ಹೆಚ್ಚಾಗಿ ಅರ್ಷದೀಪ್ ಸಿಂಗ್ ತನ್ನ ವಿಡಿಯೋಗಳ ಮೂಲಕ ಸುದ್ದಿಯಲ್ಲಿದ್ದರು.

ಕಳಪೆ ಪ್ರದರ್ಶನ:

ಪಂಜಾಬ್ ಕಿಂಗ್ಸ್ ತಂಡದ ಪ್ರಮುಖ ವೇಗಿಯಾಗಿ ಗುರುತಿಸಿಕೊಂಡಿದ್ದ ಅರ್ಷದೀಪ್ ಸಿಂಗ್ ಈ ಬಾರಿ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಆಡಿದ 14 ಪಂದ್ಯಗಳಿಂದ ಪಡೆದಿರುವುದು ಕೇವಲ 14 ವಿಕೆಟ್​ಗಳು ಮಾತ್ರ. ಅಲ್ಲದೆ ಪ್ರತಿ ಓವರ್​ಗೆ 10 ಕ್ಕಿಂತ ಹೆಚ್ಚಿನ ಸರಾಸರಿಯನ್ನು ರನ್ ಬಿಟ್ಟು ಕೊಟ್ಟಿದ್ದರು.

ಇದನ್ನೂ ಓದಿ: ಟ್ರೋಲ್ ಮಾಡಿದವರಿಗೆ ಶ್ರೇಷ್ಠಾ ಅಯ್ಯರ್ ತಿರುಗೇಟು!

ಈ ಎಲ್ಲಾ ಕಳಪೆ ಪ್ರದರ್ಶನ ನಡುವೆ ಅರ್ಷದೀಪ್ ಸಿಂಗ್ ಮಾತ್ರ ವಿಡಿಯೋ ಚಿತ್ರೀಕರಣದೊಂದಿಗೆ ಸುದ್ದಿಯಲ್ಲಿದ್ದರು. ಇದೀಗ ಪಂಜಾಬ್ ಕಿಂಗ್ಸ್ ತಂಡ ಸೋತು ಐಪಿಎಲ್​ನಿಂದ ನಿರ್ಗಮಿಸಿದೆ. ಈ ನಿರ್ಗಮನದೊಂದಿಗೆ ಅರ್ಷದೀಪ್ ಸಿಂಗ್ ಮನೆಗೆ ತೆರಳಿದ್ದಾರೆ. ಅತ್ತ ಮನೆಗೆ ತೆರಳಿದ ಬೆನ್ನಲ್ಲೇ ಅರ್ಷದೀಪ್ ಸಿಂಗ್ ಬರೋಬ್ಬರಿ 234 ವಿಡಿಯೋಗಳನ್ನು ಡಿಲೀಟ್ ಅಥವಾ ಅಥವಾ ಆರ್ಕೈವ್ ಮಾಡಿರುವುದು ವಿಶೇಷ.

Published On - 11:46 am, Tue, 26 May 26

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ