AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ ತಂಡಗಳಿಗೆ 7 ಪುಟಗಳ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟ

IPL 2026 Rules: ಐಪಿಎಲ್​ ಅಂಗಳದಲ್ಲಿ ಪಂದ್ಯಗಳ ಅಬ್ಬರ ಜೋರಾಗಿರುವ ಬೆನ್ನಲ್ಲೇ, ಮೈದಾನದ ಹೊರಗಿನ ಶಿಸ್ತು ಮತ್ತು ಸುರಕ್ಷತೆಯ ಬಗ್ಗೆ ಬಿಸಿಸಿಐ ಚಾಟಿ ಬೀಸಿದೆ. ಇತ್ತೀಚಿನ ದಿನಗಳಲ್ಲಿ ಕಂಡುಬಂದ ಕೆಲವು ಆಶಿಸ್ತಿನ ಘಟನೆಗಳು ಮತ್ತು ಭದ್ರತಾ ಲೋಪಗಳನ್ನು ಗಂಭೀರವಾಗಿ ಪರಿಗಣಿಸಿರುವ ಕ್ರಿಕೆಟ್ ಮಂಡಳಿ, ಎಲ್ಲಾ 10 ಫ್ರಾಂಚೈಸಿಗಳಿಗೆ 7 ಪುಟಗಳ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಜಾರಿಗೆ ತಂದಿದೆ.

ಐಪಿಎಲ್ ತಂಡಗಳಿಗೆ 7 ಪುಟಗಳ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟ
Ipl 2026
ಝಾಹಿರ್ ಯೂಸುಫ್
|

Updated on: May 09, 2026 | 10:13 AM

Share

ಇಂಡಿಯನ್ ಪ್ರೀಮಿಯರ್ ಲೀಗ್ (IPL) ವೇಳೆ ಆಟಗಾರರ ಸುರಕ್ಷತೆ ಮತ್ತು ಪಂದ್ಯದ ಪಾರದರ್ಶಕತೆಯನ್ನು ಕಾಪಾಡುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮಹತ್ವದ ಹೆಜ್ಜೆ ಇರಿಸಿದೆ. ಇತ್ತೀಚಿನ ದಿನಗಳಲ್ಲಿ ಕಂಡುಬಂದ ಕೆಲವು ಅಶಿಸ್ತಿನ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ, ಎಲ್ಲಾ 10 ಫ್ರಾಂಚೈಸಿಗಳಿಗೆ 7 ಪುಟಗಳ ವಿಸ್ತೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಮಾರ್ಗಸೂಚಿಯ ಪ್ರಮುಖ ಅಂಶಗಳು ಇಲ್ಲಿವೆ:

ಹನಿ ಟ್ರ್ಯಾಪ್ ಬಗ್ಗೆ ಎಚ್ಚರಿಕೆ: ಆಟಗಾರರು ಮತ್ತು ಸಿಬ್ಬಂದಿಗಳು ‘ಹನಿ ಟ್ರ್ಯಾಪ್’ ಜಾಲಕ್ಕೆ ಬೀಳದಂತೆ ಬಿಸಿಸಿಐ ಎಚ್ಚರಿಸಿದೆ. ಅಪರಿಚಿತ ವ್ಯಕ್ತಿಗಳೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಹೊರಗಡೆ ವ್ಯವಹರಿಸುವಾಗ ಹೆಚ್ಚಿನ ಜಾಗರೂಕತೆ ವಹಿಸುವಂತೆ ಸೂಚಿಸಲಾಗಿದೆ.

ಹೋಟೆಲ್ ಕೊಠಡಿಗಳಿಗೆ ನಿರ್ಬಂಧ: ತಂಡದ ವ್ಯವಸ್ಥಾಪಕರ ಪೂರ್ವಾನುಮತಿ ಇಲ್ಲದೆ ಯಾವುದೇ ಹೊರಗಿನ ವ್ಯಕ್ತಿಗಳು ಆಟಗಾರರ ಅಥವಾ ಕೋಚಿಂಗ್ ಸಿಬ್ಬಂದಿಯ ಹೋಟೆಲ್ ಕೊಠಡಿಗಳಿಗೆ ಪ್ರವೇಶಿಸುವಂತಿಲ್ಲ. ಭೇಟಿಗಾಗಿ ಹೋಟೆಲ್‌ನ ಸಾರ್ವಜನಿಕ ಸ್ಥಳಗಳನ್ನು ಮಾತ್ರ ಬಳಸಲು ಸೂಚಿಸಲಾಗಿದೆ.

ಸಂಚಾರಕ್ಕೆ ಅನುಮತಿ ಕಡ್ಡಾಯ: ಆಟಗಾರರು ಅಥವಾ ಸಿಬ್ಬಂದಿ ಹೋಟೆಲ್ ಆವರಣದಿಂದ ಹೊರಗೆ ಹೋಗಬೇಕಾದಲ್ಲಿ, ನಿಯೋಜಿತ ಭದ್ರತಾ ಸಂಪರ್ಕ ಅಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಎಲ್ಲಿಗೆ ಹೋಗುತ್ತಿದ್ದಾರೆ ಎಂಬ ಮಾಹಿತಿಯನ್ನು ನೀಡುವುದು ಕಡ್ಡಾಯ.

ಮಾನ್ಯತಾ ಕಾರ್ಡ್‌ಗಳ ಬಳಕೆ: ಸ್ಟೇಡಿಯಂ, ಹೋಟೆಲ್ ಮತ್ತು ಅಭ್ಯಾಸದ ಅವಧಿಯಲ್ಲಿ ಆಟಗಾರರು, ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವಾಗಲೂ ತಮ್ಮ ಮಾನ್ಯತಾ ಕಾರ್ಡ್‌ಗಳನ್ನು (Accreditation Cards) ಧರಿಸಿರಬೇಕು. ಇದು ಭದ್ರತಾ ತಪಾಸಣೆಯನ್ನು ಸುಗಮಗೊಳಿಸಲು ಸಹಕಾರಿ.

ಮಾಲೀಕರಿಗೆ ಡಗೌಟ್ ನಿರ್ಬಂಧ: ಪಂದ್ಯ ನಡೆಯುತ್ತಿರುವ ಸಮಯದಲ್ಲಿ ತಂಡದ ಮಾಲೀಕರು ಡಗೌಟ್‌ನಲ್ಲಿರುವ ಆಟಗಾರರು ಅಥವಾ ಮ್ಯಾನೇಜರ್‌ಗಳೊಂದಿಗೆ ಸಂವಹನ ನಡೆಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಪಂದ್ಯದ ಮೇಲೆ ಯಾವುದೇ ಬಾಹ್ಯ ಪ್ರಭಾವ ಬೀರದಂತೆ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಕೃನಾಲ್ ಪಾಂಡ್ಯ ಕಾಲರ್ ಪಟ್ಟಿ ಹಿಡಿದ ನಿಕೋಲಸ್ ಪೂರನ್!

ಬಿಸಿಸಿಐ ಈ ನಿರ್ಧಾರಕ್ಕೆ ಕಾರಣವೇನು?

ಐಪಿಎಲ್‌ನಂತಹ ದೊಡ್ಡ ಮಟ್ಟದ ಟೂರ್ನಿಯಲ್ಲಿ ಭ್ರಷ್ಟಾಚಾರ ಮತ್ತು ಫಿಕ್ಸಿಂಗ್‌ನಂತಹ ಚಟುವಟಿಕೆಗಳು ನಡೆಯದಂತೆ ತಡೆಯುವುದು ಬಿಸಿಸಿಐನ ಮುಖ್ಯ ಉದ್ದೇಶವಾಗಿದೆ.

ಪ್ರಸಕ್ತ ಸೀಸನ್‌ನಲ್ಲಿ ಆಟಗಾರರು, ಸಿಬ್ಬಂದಿ ಮತ್ತು ತಂಡದ ಅಧಿಕಾರಿಗಳಿಂದ ಹಲವಾರು “ಅಕ್ರಮಗಳು” ಮತ್ತು ಭದ್ರತಾ ನಿಯಮಗಳ ಉಲ್ಲಂಘನೆ ನಡೆದಿರುವುದು ಬಿಸಿಸಿಐ ಗಮನಕ್ಕೆ ಬಂದಿದೆ.

ಇದೀಗ ಟೂರ್ನಿಯ ಘನತೆಗೆ, ಆಟಗಾರರ ಖಾಸಗಿತನಕ್ಕೆ ಮತ್ತು ಭದ್ರತೆಗೆ ಯಾವುದೇ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಈ ನಿಯಮಗಳನ್ನು ಜಾರಿಗೆ ತರಲಾಗಿದೆ. ಈ ನಿಯಮಗಳನ್ನು ಉಲ್ಲಂಘಿಸುವ ತಂಡ ಅಥವಾ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಸಿಸಿಐ ಎಚ್ಚರಿಕೆ ನೀಡಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More