AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಮರುಪರಿಶೀಲನೆ!

ಬ್ಯಾಟರ್‌ಗಳಿಗೆ ರನ್ ಮಳೆ ಸುರಿಸಲು ವರವಾಗಿದ್ದರೂ, ಆಲ್‌ರೌಂಡರ್‌ಗಳ ಪಾಲಿಗೆ ಕಂಟಕವಾಗಿರುವ 'ಇಂಪ್ಯಾಕ್ಟ್ ಪ್ಲೇಯರ್' ರೂಲ್ ಈಗ ಅಗ್ನಿಪರೀಕ್ಷೆಗೆ ಸಜ್ಜಾಗಿದೆ. ಈ ನಿಯಮವು ಕೇವಲ ಮನರಂಜನೆಯೇ ಅಥವಾ ಕ್ರಿಕೆಟ್‌ನ ನೈಜ ಸಮತೋಲನವನ್ನು ಹಾಳುಮಾಡುತ್ತಿದೆಯೇ ಎಂಬ ಚರ್ಚೆಗಳು ನಡೆಯುತ್ತಿರುವಾಗಲೇ, ಬಿಸಿಸಿಐ ಸದ್ಯಕ್ಕೆ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಈ ಬಗ್ಗೆ ದೇವಜಿತ್ ಸೈಕಿಯಾ ಹಂಚಿಕೊಂಡಿರುವ ಪ್ರಮುಖ ಅಂಶಗಳು ಇಲ್ಲಿವೆ."

IPL 2026: ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಮರುಪರಿಶೀಲನೆ!
Impact Player Rule
ಝಾಹಿರ್ ಯೂಸುಫ್
|

Updated on: May 03, 2026 | 12:34 PM

Share

ಐಪಿಎಲ್ 2026ರ ನಂತರ ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮಕ್ಕೆ ಕೊನೆ ಹಾಡಲಾಗುತ್ತದೆಯೇ? ಈ ಪ್ರಶ್ನೆಗೆ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಉತ್ತರ ನೀಡಿದ್ದಾರೆ. ಸದ್ಯದ ಕ್ರಿಕೆಟ್ ವೇಗಕ್ಕೆ ಹೊಸ ಆಯಾಮ ನೀಡಿರುವ ಈ ನಿಯಮದ ಪರ-ವಿರೋಧ ಚರ್ಚೆಗಳ ನಡುವೆ, ಮಂಡಳಿಯ ಮುಂದಿನ ನಡೆಯೇನು ಎಂಬುದು ಈಗ ಎಲ್ಲರ ಗಮನ ಸೆಳೆದಿದೆ. ಏಕೆಂದರೆ ಈ ನಿಯಮವನ್ನು ಮರುಪರಿಶೀಲಿಸುವುದಾಗಿ ಬಿಸಿಸಿಐ ಕಡೆಯಿಂದ ಅಧಿಕೃತ ಹೇಳಿಕೆ ಹೊರಬಿದ್ದಿದೆ. ಈ ಕುರಿತು ಬಿಸಿಸಿಐನಿಂದ ಸಿಕ್ಕಿರುವ ಮಾಹಿತಿ ಈ ಕೆಳಗಿನಂತಿದೆ…

  • ತಕ್ಷಣದ ಬದಲಾವಣೆ ಇಲ್ಲ: ಪ್ರಸಕ್ತ ಸೀಸನ್‌ನ ಮಧ್ಯದಲ್ಲಿ ನಿಯಮದಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ. ಮೇ 31 ರಂದು ನಡೆಯಲಿರುವ ಫೈನಲ್ ಪಂದ್ಯದವರೆಗೆ ಹಾಲಿ ನಿಯಮವೇ ಮುಂದುವರಿಯಲಿದೆ.
  •  ಫ್ರಾಂಚೈಸಿಗಳಿಂದ ದೂರುಗಳಿಲ್ಲ: ಮಾಧ್ಯಮಗಳಲ್ಲಿ ಮತ್ತು ಆಟಗಾರರಲ್ಲಿ ಈ ಬಗ್ಗೆ ಭಿನ್ನಾಭಿಪ್ರಾಯಗಳಿದ್ದರೂ, ಯಾವುದೇ ಐಪಿಎಲ್ ತಂಡಗಳು ಈ ನಿಯಮವನ್ನು ತೆಗೆದುಹಾಕುವಂತೆ ಬಿಸಿಸಿಐಗೆ ಅಧಿಕೃತವಾಗಿ ಮನವಿ ಮಾಡಿಲ್ಲ ಎಂದು ಸೈಕಿಯಾ ಹೇಳಿದ್ದಾರೆ.
  •  ಮನರಂಜನೆಯ ಅಂಶ: ಈ ನಿಯಮವು ಪಂದ್ಯಗಳಿಗೆ ಹೆಚ್ಚಿನ ವೇಗ ಮತ್ತು ಕುತೂಹಲ ನೀಡಿದೆ. ತಂಡಗಳು 260ಕ್ಕೂ ಹೆಚ್ಚು ರನ್ ಗಳಿಸಲು ಈ ನಿಯಮ ಸಹಕಾರಿಯಾಗಿದೆ, ಇದು ಪ್ರೇಕ್ಷಕರಿಗೆ ಸಂಪೂರ್ಣ ಮನರಂಜನೆ ನೀಡುತ್ತಿದೆ ಎಂಬುದು ಬಿಸಿಸಿಐನ ಅಭಿಪ್ರಾಯ.
  • ಟೀಕೆಗಳು: ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯಂತಹ ಹಿರಿಯ ಆಟಗಾರರು ಈ ನಿಯಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಆಲ್‌ರೌಂಡರ್‌ಗಳ ಬೆಳವಣಿಗೆಗೆ ಇಂಪ್ಯಾಕ್ಟ್ ಪ್ಲೇಯರ್ ನಿಯಮ ಮಾರಕವಾಗಿದೆ ಮತ್ತು ಪಂದ್ಯವನ್ನು ’12 ವರ್ಸಸ್ 12′ ಆಟವನ್ನಾಗಿ ಮಾಡಿದೆ ಎಂಬುದು ಮಾಜಿ ಕ್ರಿಕೆಟಿಗರು ಸೇರಿದಂತೆ ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಬಿಸಿಸಿಐ ಮುಂದಿನ ನಡೆ:

2026ರ ಸೀಸನ್ ಮುಗಿದ ನಂತರ, ಬಿಸಿಸಿಐ ಪದಾಧಿಕಾರಿಗಳು, ತಂಡದ ಮಾಲೀಕರು ಮತ್ತು ತಜ್ಞರೊಂದಿಗೆ ಸಭೆ ನಡೆಸಿ ಈ ನಿಯಮವನ್ನು ಮುಂದಿನ 2027ರ ಸೀಸನ್‌ನಲ್ಲಿ ಮುಂದುವರಿಸಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸಲಿದ್ದಾರೆ.

ಅಂದರೆ ಈ ಬಾರಿಯ ಐಪಿಎಲ್ ಬಳಿಕ ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಭವಿಷ್ಯ ನಿರ್ಧಾರವಾಗಲಿದೆ. ಈ ನಿಒಯಮವನ್ನು ತೆಗೆದು ಹಾಕಿದರೆ, ಆಡುವ ಬಳಗದಲ್ಲಿ 11 ಆಟಗಾರರು ಮಾತ್ರ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಸಿಕ್ಸರ್‌ನಿಂದ ಗಾಯಗೊಂಡ ಅಭಿಮಾನಿಗೆ ಭರ್ಜರಿ ಗಿಫ್ಟ್​ ನೀಡಿದ ಪಂಜಾಬ್ ಕಿಂಗ್ಸ್

ಪ್ರಸ್ತುತ ಇಂಪ್ಯಾಕ್ಟ್ ಪ್ಲೇಯರ್ ನಿಯಮದಡಿ ಒಟ್ಟು 12 ಆಟಗಾರರಿಗೆ ಅವಕಾಶ ಸಿಗುತ್ತಿದೆ. ಅಂದರೆ 11+1 ಆಟಗಾರರನ್ನು ಕಣಕ್ಕಿಳಿಸಲಾಗುತ್ತಿದೆ. ಇದೀಗ ಈ ನಿಯಮವನ್ನು ಮರುಪರಿಶೀಲಿಸುವುದಾಗಿ ಬಿಸಿಸಿಐ ತಿಳಿಸಿರುವ ಕಾರಣ ಐಪಿಎಲ್​ 2027 ರಿಂದ ಇಂಪ್ಯಾಕ್ಟ್ ಪ್ಲೇಯರ್ ನಿಯಮವನ್ನು ತೆಗೆದು ಹಾಕುವ ಸಾಧ್ಯತೆಯಿದೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ವಿಜಯೇಂದ್ರ ವ್ಯಂಗ್ಯ
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ವಿಜಯೇಂದ್ರ ವ್ಯಂಗ್ಯ
ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್
ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್
ರಸ್ತೆಯಲ್ಲಿ ಕಸಗುಡಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ರಸ್ತೆಯಲ್ಲಿ ಕಸಗುಡಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
‘ಸಿದ್ದರಾಮಯ್ಯ ಈ ದೇಶ ಕಂಡ ಅತ್ಯಂತ ಗೌರವಾನ್ವಿತ ಸಿಎಂ’: ನಟ ಸುಂದರ್ ರಾಜ್
‘ಸಿದ್ದರಾಮಯ್ಯ ಈ ದೇಶ ಕಂಡ ಅತ್ಯಂತ ಗೌರವಾನ್ವಿತ ಸಿಎಂ’: ನಟ ಸುಂದರ್ ರಾಜ್