AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ತಂಡದ ನಾಯಕ ಯಾರೆಂದು ತಿಳಿಸಿದ CSK

IPL 2026 CSK: ಐಪಿಎಲ್ 2026ರ ಮಿನಿ ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು 15 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಹಾಗೆಯೇ 10 ಆಟಗಾರರನ್ನು ತಂಡದಿಂದ ರಿಲೀಸ್ ಮಾಡಿದೆ. ಇದರ ಜೊತೆಗೆ ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅವರನ್ನು ರಾಜಸ್ಥಾನ್ ರಾಯಲ್ಸ್​ಗೆ ನೀಡಿ ಸಂಜು ಸ್ಯಾಮ್ಸನ್ ಅವರನ್ನು ಖರೀದಿಸಿದೆ.

IPL 2026: ತಂಡದ ನಾಯಕ ಯಾರೆಂದು ತಿಳಿಸಿದ CSK
CSK
ಝಾಹಿರ್ ಯೂಸುಫ್
|

Updated on:Nov 16, 2025 | 2:05 PM

Share

ಇಂಡಿಯನ್ ಪ್ರೀಮಿಯರ್ ಲೀಗ್ (IPL 2026)​ ಸೀಸನ್-19 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುವವರು ಯಾರು? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಸಂಜು ಸ್ಯಾಮ್ಸನ್ ಎಂಟ್ರಿ. ರಾಜಸ್ಥಾನ್ ರಾಯಲ್ಸ್ ತಂಡದ ನಾಯಕರಾಗಿದ್ದ ಸಂಜು ಸ್ಯಾಮ್ಸನ್ ಅವರನ್ನು ಸಿಎಸ್​ಕೆ ಟ್ರೇಡ್ ಮಾಡಿಕೊಂಡಿದೆ. ಅದರಂತೆ ಮುಂದಿನ ಸೀಸನ್​ನಲ್ಲಿ ಸ್ಯಾಮ್ಸನ್ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿಯಲಿದ್ದಾರೆ.

ಅತ್ತ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಕಾರಣ ಸಂಜು ಸ್ಯಾಮ್ಸನ್ ಅವರಿಗೆ ನಾಯಕತ್ವ ನೀಡಲಿದೆಯಾ ಎಂಬ ಕುತೂಹಲ ಅಭಿಮಾನಿಗಳಲ್ಲಿತ್ತು. ಇದರೊಂದಿಗೆ ಮಹೇಂದ್ರ ಸಿಂಗ್ ಧೋನಿ ಕೊನೆಯ ಬಾರಿ ಸಿಎಸ್​ಕೆ ತಂಡವನ್ನು ಮುನ್ನಡೆಸಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬಂದಿದ್ದವು.

ಆದರೀಗ ರುತುರಾಜ್ ಗಾಯಕ್ವಾಡ್ ಅವರನ್ನೇ ನಾಯಕನನ್ನಾಗಿ ಮುಂದುವರೆಸುವುದಾಗಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ತಿಳಿಸಿದೆ. 2024 ರಲ್ಲಿ ಸಿಎಸ್​ಕೆ ತಂಡದ ನಾಯಕನಾಗಿ ಆಯ್ಕೆಯಾಗಿದ್ದ ರುತುರಾಜ್ ಕಳೆದ ಸೀಸನ್​ನಲ್ಲಿ ಗಾಯದ ಕಾರಣ ಕಣಕ್ಕಿಳಿದಿರಲಿಲ್ಲ. ಹೀಗಾಗಿ ಧೋನಿ ತಂಡವನ್ನು ಮುನ್ನಡೆಸಿದ್ದರು.

ಆದರೆ ಐಪಿಎಲ್ 2026 ರಲ್ಲಿ ಧೋನಿ ನಾಯಕನಾಗಿ ಕಾಣಿಸಿಕೊಳ್ಳುವುದಿಲ್ಲ ಎಂದು ಸಿಎಸ್​ಕೆ ತಿಳಿಸಿದೆ. ಅಷ್ಟೇ ಅಲ್ಲದೆ ಸಂಜು ಸ್ಯಾಮ್ಸನ್ ಅವರಿಗೂ ಕ್ಯಾಪ್ಟನ್ ಪಟ್ಟ ನೀಡಲಾಗುತ್ತಿಲ್ಲ ಎಂಬುದನ್ನು ಸಹ ಖಚಿತಪಡಿಸಿದೆ. ಇದರ ಜೊತೆಗೆ ರುತುರಾಜ್ ಗಾಯಕ್ವಾಡ್ ಅವರೇ ಐಪಿಎಲ್ 2026 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಸಿಎಸ್​ಕೆ ಫ್ರಾಂಚೈಸಿಯು ಅಧಿಕೃತವಾಗಿ ತಿಳಿಸಿದೆ.

ಇದರೊಂದಿಗೆ 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರುತುರಾಜ್ ಗಾಯಕ್ವಾಡ್ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯ ನಾಯಕನಾಗಿ ಕಾಣಿಸಿಕೊಳ್ಳುವುದು ಖಚಿತವಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್‌ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಎಂಎಸ್ ಧೋನಿ, ಸಂಜು ಸ್ಯಾಮ್ಸನ್ (ರಾಜಸ್ಥಾನ್ ರಾಯಲ್ಸ್​ನಿಂದ ಟ್ರೇಡ್), ಡೆವಾಲ್ಡ್ ಬ್ರೆವಿಸ್, ಉರ್ವಿಲ್ ಪಟೇಲ್, ಶಿವಂ ದುಬೆ, ಜೇಮಿ ಓವರ್‌ಟನ್, ರಾಮಕೃಷ್ಣ ಘೋಷ್, ನೂರ್ ಅಹ್ಮದ್, ಖಲೀಲ್ ಅಹ್ಮದ್, ಅನ್ಶುಲ್ ಕಂಬೋಜ್, ಗುರ್ಜಪ್ನೀತ್ ಸಿಂಗ್, ಶ್ರೇಯಸ್ ಗೋಪಾಲ್, ನಾಥನ್ ಎಲ್ಲಿಸ್, ಮುಖೇಶ್ ಚೌಧರಿ.

ಇದನ್ನೂ ಓದಿ: IPL 2026: ಇಬ್ಬರು OP…  RCB ಎಷ್ಟು ಆಟಗಾರರನ್ನು ಖರೀದಿಸಬಹುದು?

ಸಿಎಸ್​ಕೆ ರಿಲೀಸ್ ಮಾಡಿದ ಆಟಗಾರರು: ರವೀಂದ್ರ ಜಡೇಜಾ (ರಾಜಸ್ಥಾನ್ ರಾಯಲ್ಸ್‌ಗೆ ಟ್ರೇಡ್), ರಚಿನ್ ರವೀಂದ್ರ, ಡೆವೊನ್ ಕಾನ್ವೇ, ಸ್ಯಾಮ್ ಕರನ್ (ರಾಜಸ್ಥಾನ್ ರಾಯಲ್ಸ್‌ಗೆ ಟ್ರೇಡ್), ದೀಪಕ್ ಹೂಡಾ, ವಿಜಯ್ ಶಂಕರ್, ಶೇಕ್ ರಶೀದ್, ಮತೀಶ ಪತಿರಾಣ, ಕಮಲೇಶ್ ನಾಗರಕೋಟಿ, ರಾಹುಲ್ ತ್ರಿಪಾಠಿ, ವಂಶ್ ಬೇಡಿ, ಆಂಡ್ರೆ ಸಿದ್ದಾರ್ಥ್.

Published On - 2:03 pm, Sun, 16 November 25

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ