AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs KKR: ಸತತ ನಾಲ್ಕನೇ ಪಂದ್ಯದಲ್ಲೂ ಸೋತ ಕೆಕೆಆರ್

Chennai Super Kings vs Kolkata Knight Riders: ಐಪಿಎಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈವರೆಗೆ 33 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಸಿಎಸ್​ಕೆ ತಂಡ 21 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಕೆಕೆಆರ್ ಗೆದ್ದಿರುವುದು 11 ಪಂದ್ಯಗಳಲ್ಲಿ. ಇನ್ನು ಒಂದು ಮ್ಯಾಚ್ ಕಾರಣಾಂತರದಿಂದ ರದ್ದಾಗಿತ್ತು.

CSK vs KKR: ಸತತ ನಾಲ್ಕನೇ ಪಂದ್ಯದಲ್ಲೂ ಸೋತ ಕೆಕೆಆರ್
Kkr
ಝಾಹಿರ್ ಯೂಸುಫ್
|

Updated on: Apr 14, 2026 | 11:31 PM

Share

IPL 2026: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 21ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡದ ನಾಯಕ ಅಜಿಂಕ್ಯ ರಹಾನೆ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡಕ್ಕೆ ಸಂಜು ಸ್ಯಾಮ್ಸನ್ (48) ಸ್ಫೋಟಕ ಆರಂಭ ಒದಗಿಸಿದ್ದರು. ಮತ್ತೊಂದೆಡೆ ಆಯುಷ್ ಮ್ಹಾತ್ರೆ ಕೂಡ 17 ಎಸೆತಗಳಲ್ಲಿ 38 ರನ್ ಚಚ್ಚಿದ್ದರು.

ಇವರ ಬಳಿಕ ಬಂದ ಡೆವಾಲ್ಡ್ ಬ್ರೆವಿಸ್ 41 ರನ್​ಗಳ ಕೊಡುಗೆ ನೀಡಿದರೆ, ಸರ್ಫರಾಝ್ ಖಾನ್ 23 ರನ್ ಬಾರಿಸಿದರು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 192 ರನ್​ ಕಲೆಹಾಕಿತು.

193 ರನ್​ಗಳ ಗುರಿ:

193 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ಫಿನ್ ಅಲೆನ್ ಕೇವಲ 1 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇನ್ನು ಓಪನರ್ ಆಗಿ ಕಣಕ್ಕಿಳಿದ ಸುನಿಲ್ ನರೈನ್ 24 ರನ್​ ಬಾರಿಸಿ ಇನಿಂಗ್ಸ್ ಅಂತ್ಯಗೊಳಿಸಿದರೆ, ಅಂಗ್​ಕ್ರಿಶ್ ರಘುವಂಶಿ 27 ರನ್​ಗಳೊಂದಿಗೆ ಪೆವಿಲಿಯನ್​ಗೆ ಹಿಂತಿರುಗಿದರು.

ಇದರ ಬೆನ್ನಲ್ಲೇ ನಾಯಕ ಅಜಿಂಕ್ಯ ರಹಾನೆ (28) ಕೂಡ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಕಣಕ್ಕಿಳಿದ ಕ್ಯಾಮರೋನ್ ಗ್ರೀನ್ (0) ರನ್ನು ಶೂನ್ಯಕ್ಕೆ ಕ್ಲೀನ್ ಬೌಲ್ಡ್ ಮಾಡುವಲ್ಲಿ ಸ್ಪಿನ್ನರ್ ನೂರ್ ಅಹ್ಮದ್ ಯಶಸ್ವಿಯಾದರು. ಇದರ ಬೆನ್ನಲ್ಲೇ ರಿಂಕು ಸಿಂಗ್ (6) ಕೂಡ ಔಟಾದರು.

ಪರಿಣಾಮ ಕೊನೆಯ 5 ಓವರ್​ಗಳಲ್ಲಿ ಕೆಕೆಆರ್ ತಂಡಕ್ಕೆ ಗೆಲ್ಲಲು ಬರೋಬ್ಬರಿ 86 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಜೊತೆಗೂಡಿದ ರಮಣ್​ದೀಪ್ ಸಿಂಗ್ ಹಾಗೂ ರೋವ್​ಮನ್ ಪೊವೆಲ್ ಒಂದಷ್ಟು ಹೊತ್ತು ಕ್ರೀಸ್ ಕಚ್ಚಿ ನಿಂತರೂ ತಂಡವನ್ನು ಗೆಲುವಿನ ಸಮೀಪಕ್ಕೆ ತಲುಪಿಸಲು ಸಾಧ್ಯವಾಗಿಲ್ಲ.

ಅಂತಿಮವಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​​ಗಳಲ್ಲಿ 7 ವಿಕೆಟ್ ಕಳೆದುಕೊಂಡು 160 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿದೆ. ಈ ಮೂಲಕ ಸಿಎಸ್​ಕೆ ತಂಡ 32 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅಂಕ ಪಟ್ಟಿಯಲ್ಲಿ 8ನೇ ಸ್ಥಾನಕ್ಕೇರಿದೆ.

ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಸರ್ಫರಾಝ್ ಖಾನ್, ಶಿವಂ ದುಬೆ, ಡೆವಾಲ್ಡ್ ಬ್ರೆವಿಸ್, ಜೇಮಿ ಓವರ್ಟನ್, ನೂರ್ ಅಹ್ಮದ್, ಅನ್ಶುಲ್ ಕಂಬೋಜ್, ಗುರ್ಜಪ್ನೀತ್ ಸಿಂಗ್, ಖಲೀಲ್ ಅಹ್ಮದ್, ಅಕಿಲ್ ಹೊಸೈನ್ (ಇಂಪ್ಯಾಕ್ಟ್ ಪ್ಲೇಯರ್)

ಇದನ್ನೂ ಓದಿ: RCB vs LSG: ವಿರಾಟ್ ಕೊಹ್ಲಿ ಆಡ್ತಾರಾ, ಇಲ್ವಾ? ಕೊನೆಗೂ ಸಿಕ್ತು ಉತ್ತರ

ಕೊಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ಅಜಿಂಕ್ಯ ರಹಾನೆ (ನಾಯಕ), ಕ್ಯಾಮರೋನ್ ಗ್ರೀನ್, ಆಂಗ್​ಕ್ರಿಶ್ ರಘುವಂಶಿ (ವಿಕೆಟ್ ಕೀಪರ್), ರೋವ್​ಮನ್ ಪೊವೆಲ್, ರಿಂಕು ಸಿಂಗ್, ಸುನಿಲ್ ನರೈನ್, ರಮಣ್​ದೀಪ್ ಸಿಂಗ್, ಅನುಕುಲ್ ರಾಯ್, ವರುಣ್ ಚಕ್ರವರ್ತಿ, ವೈಭವ್ ಅರೋರಾ, ಕಾರ್ತಿಕ್ ತ್ಯಾಗಿ.

Follow Us
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ