DC vs RCB: W,W,W,W,W,W..! ಕೇವಲ 8 ರನ್​ಗೆ 6 ವಿಕೆಟ್ ಕಳೆದುಕೊಂಡ ಡೆಲ್ಲಿ

DC vs RCB IPL 2026: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 39ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ದೆಹಲಿ, ಆರ್​ಸಿಬಿ ವೇಗಿಗಳಾದ ಭುವನೇಶ್ವರ್ ಕುಮಾರ್ ಮತ್ತು ಹೇಜಲ್‌ವುಡ್ ದಾಳಿಗೆ ತತ್ತರಿಸಿ, ಪವರ್‌ಪ್ಲೇನಲ್ಲಿ ಕೇವಲ 13 ರನ್‌ಗಳಿಗೆ 6 ವಿಕೆಟ್‌ಗಳನ್ನು ಕಳೆದುಕೊಂಡು ಭಾರಿ ಸಂಕಷ್ಟಕ್ಕೆ ಸಿಲುಕಿದೆ.

DC vs RCB: W,W,W,W,W,W..! ಕೇವಲ 8 ರನ್​ಗೆ 6 ವಿಕೆಟ್ ಕಳೆದುಕೊಂಡ ಡೆಲ್ಲಿ
Rcb

Updated on: Apr 27, 2026 | 8:42 PM

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಐಪಿಎಲ್ 2026 (IPL 2026) ರ 39ನೇ ಪಂದ್ಯ ದೆಹಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (DC vs RCB) ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ತಂಡ ಕೇವಲ 8 ರನ್​ಗಳಿಗೆ ಪ್ರಮುಖ 6 ವಿಕೆಟ್​ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಆರ್​ಸಿಬಿ ವೇಗಿಗಳಾದ ಭುವನೇಶ್ವರ್ ಕುಮಾರ್ ಹಾಗೂ ಹೇಜಲ್‌ವುಡ್ ಅವರ ದಾಳಿಗೆ ತತ್ತರಿಸಿ ಹೋಗಿರುವ ಡೆಲ್ಲಿ ಬ್ಯಾಟರ್​ಗಳಿಗೆ ಖಾತೆ ತೆರೆಯಲು ಸಾಧ್ಯವಾಗುತ್ತಿಲ್ಲ. ಇದರ ಪರಿಣಾಮವಾಗಿ ಡೆಲ್ಲಿ ತಂಡ ಪವರ್‌ಪ್ಲೇನಲ್ಲಿ ಅಂದರೆ ಮೊದಲ 6 ಓವರ್​ಗಳಲ್ಲಿ ಕೇವಲ 13 ರನ್ ಕಲೆಹಾಕಿ ಬರೋಬ್ಬರಿ 6 ವಿಕೆಟ್​ಗಳನ್ನು ಕಳೆದುಕೊಂಡಿದೆ.

ಮೊದಲ ಓವರ್​ನಲ್ಲೇ ಶಾಕ್

ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್​ಗೆ ವೇಗಿ ಭುವನೇಶ್ವರ್ ಕುಮಾರ್‌ ಓವರ್​ನ ಎರಡನೇ ಎಸೆತದಲ್ಲೇ ಶಾಕ್ ನೀಡಿದರು. ಐಪಿಎಲ್‌ನಲ್ಲಿ ಚೊಚ್ಚಲ ಪಂದ್ಯವನ್ನಾಡಿದ ಸಾಹಿಲ್ ಪರಾಖ್ ಎರಡನೇ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಆರ್​ಸಿಬಿ ಪರ ಎರಡನೇ ಓವರ್‌ ಬೌಲ್ ಮಾಡಲು ಬಂದ ಹೇಜಲ್‌ವುಡ್, ಈ ಓವರ್​ನ ಮೊದಲ ಎಸೆತದಲ್ಲಿ ಕೆಎಲ್ ರಾಹುಲ್ ಅವರನ್ನು ಔಟ್ ಮಾಡಿದರು. ನಂತದ ಎಸೆತದಲ್ಲೇ ಸಮೀರ್ ರಿಜ್ವಿ ಕೂಡ ಔಟ್ ಮಾಡಿದರು.

ನೋಡು ನೋಡುತ್ತಲೇ ಆರು ವಿಕೆಟ್‌

ಹೀಗಾಗಿ ದಕ್ಷಿಣ ಆಫ್ರಿಕಾದ ಅನುಭವಿ ಬ್ಯಾಟರ್ ಟ್ರಿಸ್ಟಾನ್ ಸ್ಟಬ್ಸ್ ಮೇಲೆ ಹೆಚ್ಚಿನ ಜವಾಬ್ದಾರಿ ಇತ್ತು. ಆದರೆ ಮೂರನೇ ಓವರ್‌ ಬೌಲ್ ಮಾಡಲು ಬಂದ ಭುವಿ, ಎರಡನೇ ಎಸೆತದಲ್ಲೇ ಸ್ಟಬ್ಸ್ ಅವರನ್ನು ಔಟ್ ಮಾಡಿದರು. ನಾಯಕ ಅಕ್ಷರ್ ಪಟೇಲ್ ಕೂಡ ಕೇವಲ ಮೂರು ಎಸೆತಗಳನ್ನು ಎದುರಿಸಿ ಜಿತೇಶ್ ಶರ್ಮಾಗೆ ಕ್ಯಾಚ್ ನೀಡಿದರು. ಪಟೇಲ್ ಕೂಡ ಖಾತೆ ತೆರೆಯಲು ವಿಫಲರಾದರು. ನಿತೀಶ್ ರಾಣಾ ಕೂಡ ಹೆಚ್ಚು ತೊಂದರೆ ನೀಡದೆ ಹೇಜಲ್‌ವುಡ್​ಗೆ ಬಲಿಯಾದರು. ಹೀಗಾಗಿ ಡೆಲ್ಲಿ ನೋಡು ನೋಡುತ್ತಲೇ ಆರು ವಿಕೆಟ್‌ಗಳನ್ನು ಕಳೆದುಕೊಂಡಿತು.

DC vs RCB IPL 2026 Live Score: ಡೆಲ್ಲಿ 7ನೇ ವಿಕೆಟ್ ಪತನ

ಭುವಿ-ಹೇಜಲ್​ವುಡ್ ಮಾರಕ ದಾಳಿ

ಇದರ ಪರಿಣಾಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲ 6 ಓವರ್​ಗಳಲ್ಲಿ ಕೇವಲ 13 ರನ್ ಕಲೆಹಾಕಿ ಪ್ರಮುಖ 6 ವಿಕೆಟ್‌ಗಳನ್ನು ಕಳೆದುಕೊಂಡಿತು. ಈ 6 ವಿಕೆಟ್‌ಗಳನ್ನು ಭುವನೇಶ್ವರ್ ಕುಮಾರ್ ಹಾಗೂ ಹೇಜಲ್‌ವುಡ್ ಸಮವಾಗಿ ಹಂಚಿಕೊಂಡರು. ಅಂದರೆ ಭುವನೇಶ್ವರ್ 3 ಓವರ್​ಗಳನ್ನು ಬೌಲ್ ಮಾಡಿ ಕೇವಲ 5 ರನ್ ನೀಡಿ 3 ವಿಕೆಟ್ ಪಡೆದರೆ, ಇತ್ತ ಹೇಜಲ್‌ವುಡ್ ಕೂಡ 3 ಓವರ್​ಗಳನ್ನು ಬೌಲ್ ಮಾಡಿ 8 ರನ್ ನೀಡಿ 3 ವಿಕೆಟ್ ಉರುಳಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:24 pm, Mon, 27 April 26

ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us