AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಮುಖಕ್ಕೆ ಚೆಂಡು ಬಡಿದು ಯುವ ಆಟಗಾರನಿಗೆ ಗಂಭೀರ ಗಾಯ!

Sahil Parakh Injury Update: ಸಾಹಿಲ್ ಪರಾಖ್ ಮಹಾರಾಷ್ಟ್ರದ ನಾಸಿಕ್ ಮೂಲದ ಒಬ್ಬ ಪ್ರತಿಭಾವಂತ ಯುವ ಎಡಗೈ ಬ್ಯಾಟರ್. ಈಗಾಗಲೇ ದೇಶೀಯ ಅಂಗಳದಲ್ಲಿ ಸಂಚಲನ ಸೃಷ್ಟಿಸಿರುವ ಸಾಹಿಲ್ ಅವರನ್ನು ಈ ಬಾರಿಯ ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅವರನ್ನು ₹30 ಲಕ್ಷಕ್ಕೆ ಖರೀದಿಸಿದೆ. ಅದರಂತೆ ಇದೀಗ ಡಿಸಿ ಪಡೆಯ ಭಾಗವಾಗಿರುವ ಸಾಹಿಲ್ ಪರಾಖ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

IPL 2026: ಮುಖಕ್ಕೆ ಚೆಂಡು ಬಡಿದು ಯುವ ಆಟಗಾರನಿಗೆ ಗಂಭೀರ ಗಾಯ!
Sahil Parakh
ಝಾಹಿರ್ ಯೂಸುಫ್
|

Updated on:Apr 25, 2026 | 9:52 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 35ನೇ ಪಂದ್ಯಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಭ್ಯಾಸದ ವೇಳೆ ಯುವ ಬ್ಯಾಟರ್ ಸಾಹಿಲ್ ಪರಾಖ್ ಅವರ ಮುಖಕ್ಕೆ ಬಲವಾಗಿ ಚೆಂಡು ಬಡಿದು, ತೀವ್ರ ಗಾಯಗೊಂಡ ಘಟನೆ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದಿದೆ.

ಘಟನೆ ನಡೆದಿದ್ದು ಹೇಗೆ?

ಶುಕ್ರವಾರ ಸಂಜೆ ನಡೆದ ತರಬೇತಿ ಅವಧಿಯಲ್ಲಿ ಈ ಘಟನೆ ಸಂಭವಿಸಿದೆ. 18 ವರ್ಷದ ಸಾಹಿಲ್ ಪರಾಖ್ ಅವರು ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾಗ, ವೇಗದ ಬೌಲರ್ ಎಸೆದ ಬೌನ್ಸರ್ ಅನ್ನು ಎದುರಿಸುವಲ್ಲಿ ವಿಫಲರಾದರು. ಚೆಂಡು ನೇರವಾಗಿ ಅವರ ಮುಖಕ್ಕೆ (ಹೆಲ್ಮೆಟ್‌ನ ಗ್ರಿಲ್ ನಡುವಿನಿಂದ) ಬಡಿದಿದೆ ಎಂದು ವರದಿಯಾಗಿದೆ. ಚೆಂಡು ತಗುಲಿದ ತಕ್ಷಣ ಸಾಹಿಲ್ ಮೈದಾನದಲ್ಲೇ ಕುಸಿದು ಬಿದ್ದರು.

ಮುಖಕ್ಕೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಸಾಹಿಲ್ ಅವರ ಮುಖದಿಂದ ತೀವ್ರ ರಕ್ತಸ್ರಾವವಾಗುತ್ತಿತ್ತು. ತಕ್ಷಣವೇ ತಂಡದ ವೈದ್ಯಕೀಯ ಸಿಬ್ಬಂದಿ ಮೈದಾನಕ್ಕೆ ಧಾವಿಸಿ ಪ್ರಥಮ ಚಿಕಿತ್ಸೆ ನೀಡಿದರು. ಗಾಯದ ತೀವ್ರತೆ ಹೆಚ್ಚಿದ್ದರಿಂದ, ಅವರನ್ನು ಸ್ಟ್ರೆಚರ್ ಮೂಲಕ ಮೈದಾನದಿಂದ ಹೊರಕ್ಕೆ ಕರೆತರಲಾಯಿತು. ಬಳಿಕ ಕ್ರೀಡಾಂಗಣಕ್ಕೆ ಆಂಬ್ಯುಲೆನ್ಸ್ ತರಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಾರು ಈ ಸಾಹಿಲ್ ಪರಾಖ್?

ಮಹಾರಾಷ್ಟ್ರದ ನಾಸಿಕ್ ಮೂಲದ ಸಾಹಿಲ್ ಪರಾಖ್ ಒಬ್ಬ ಪ್ರತಿಭಾವಂತ ಎಡಗೈ ಬ್ಯಾಟರ್. ಈ ಬಾರಿಯ ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅವರನ್ನು ₹30 ಲಕ್ಷಕ್ಕೆ ಖರೀದಿಸಿತ್ತು.  ಸದ್ಯ ಸಾಹಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮುಖದ ಮೂಳೆ ಮುರಿತವಾಗಿದೆಯೇ ಎಂದು ಪರೀಕ್ಷಿಸಲು ಸ್ಕ್ಯಾನಿಂಗ್ ನಡೆಸಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ಮ್ಯಾನೇಜ್‌ಮೆಂಟ್ ಈ ಬಗ್ಗೆ ಇನ್ನು ಅಧಿಕೃತ ಪ್ರಕಟಣೆ ನೀಡಿಲ್ಲವಾದರೂ, ಸಹ ಆಟಗಾರರು ಮತ್ತು ಅಭಿಮಾನಿಗಳು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್​ vs ಪಂಜಾಬ್ ಕಿಂಗ್ಸ್​:

ಇಂಡಿಯನ್ ಪ್ರೀಮಿಯರ್ ಲೀಗ್​ನ 35ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಸಂಜೆ 3.30 ಕ್ಕೆ ಶುರುವಾಗಲಿದೆ. ಈ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಪಾಲಿಗೆ ತುಂಬಾ ಮಹತ್ವದ್ದು.

ಏಕೆಂದರೆ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲನುಭವಿಸಿತ್ತು. ಇದೀಗ ಮೊದಲಾರ್ಧದ ಮುಕ್ತಾಯಕ್ಕೂ ಮುನ್ನ ಅಂಕ ಪಟ್ಟಿಯಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳಬೇಕಿದ್ದರೆ ಈ ಮ್ಯಾಚ್​ನಲ್ಲಿ ಡೆಲ್ಲಿ ಪಡೆ ಗೆಲ್ಲಲೇಬೇಕು.

ಇದನ್ನೂ ಓದಿ: ನಮ್ಮ ಸೋಲಿಗೆ ಆ ಮೂರು ಓವರ್‌ಗಳೇ ಕಾರಣ: ಶುಭ್​ಮನ್ ಗಿಲ್ ಬೇಸರ

ಅತ್ತ ಪಂಜಾಬ್ ಕಿಂಗ್ಸ್ ತಂಡವು ಆಡಿರುವ 6 ಮ್ಯಾಚ್​ಗಳಲ್ಲಿ 5 ಗೆಲುವು ದಾಖಲಿಸಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದು, ಇಂದಿನ ಪಂದ್ಯದಲ್ಲಿ ಸೋತರೂ ಅಥವಾ ಗೆದ್ದರೂ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಳ್ಳಲಿದೆ.

Published On - 9:52 am, Sat, 25 April 26

Follow Us