AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ 2026ರಲ್ಲಿ ನಿವೃತ್ತಿ ಘೋಷಿಸಲಿದ್ದಾರೆ ಈ ಐದು ಆಟಗಾರರು?

2026ರ ಐಪಿಎಲ್ ಬಳಿಕ ಐದು ಪ್ರಮುಖ ಆಟಗಾರರು ನಿವೃತ್ತಿ ಘೋಷಿಸುವ ಸಾಧ್ಯತೆ ಎನ್ನಲಾಗಿದೆ. ಎಂ.ಎಸ್. ಧೋನಿ ಸೇರಿದಂತೆ ಅನೇಕ ಹೆಸರುಗಳು ಮುನ್ನೆಲೆಗೆ ಬಂದಿವೆ. ವಯಸ್ಸು, ಅಂತರಾಷ್ಟ್ರೀಯ ನಿವೃತ್ತಿ ಮತ್ತು ಇತ್ತೀಚಿನ ಪ್ರದರ್ಶನಗಳು ಅವರ ನಿರ್ಗಮನಕ್ಕೆ ಕಾರಣಗಳಾಗಿವೆ. ಈ ಸೀಸನ್ ಈ ಕ್ರಿಕೆಟ್ ದಂತಕಥೆಗಳಿಗೆ ಕೊನೆಯ ಸೀಸನ್ ಆಗಬಹುದು.

ಐಪಿಎಲ್ 2026ರಲ್ಲಿ ನಿವೃತ್ತಿ ಘೋಷಿಸಲಿದ್ದಾರೆ ಈ ಐದು ಆಟಗಾರರು?
ನಿವೃತ್ತಿ ಪಡೆಯಲಿರೋ ಆಟಗಾರರು
ರಾಜೇಶ್ ದುಗ್ಗುಮನೆ
|

Updated on:Mar 24, 2026 | 7:49 AM

Share

2026ರ ಐಪಿಎಲ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಬಾರಿ ಬೆಂಗಳೂರಿನಲ್ಲಿ ಮೊದಲ ಪಂದ್ಯ ನಡೆಯುತ್ತಿರುವುದು ವಿಶೇಷ. ಹಾಲಿ ಚಾಂಪಿಯನ್ಸ್ ಆರ್​​ಸಿಬಿ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಈ ಬಾರಿ ಎಲ್ಲಾ ತಂಡಗಳಲ್ಲಿ ಕೆಲವು ಬದಲಾವಣೆಗಳನ್ನು ಕೂಡ ಮಾಡಲಾಗಿದೆ. ಪ್ರಮುಖ ಆಟಗಾರರು ಬೇರೆ ಬೇರೆ ತಂಡ ಸೇರಿದ್ದಾರೆ. ಈ ಮಧ್ಯೆ ಈ ಬಾರಿಯ ಐಪಿಎಲ್ ಬಳಿಕ ಐದು ಆಟಗಾರರು ಐಪಿಎಲ್​​ನಿಂದ ಹೊರ ಹೋಗಲಿದ್ದಾರೆ ಎನ್ನುವ ಮಾತಿದೆ.

ಎಂಎಸ್ ಧೋನಿ

ಐಪಿಎಲ್ ಇತಿಹಾಸದಲ್ಲಿ ಹಲವು ದಾಖಲೆ ಬರೆದ ಎಂಎಸ್​ ಧೋನಿ ಈಗ 45ನೇ ವಯಸ್ಸಿಗೆ ಕಾಲಿಡುತ್ತಿದ್ದಾರೆ. ಅವರು ಈಗ ಆಡುತ್ತಿರುವುದು 19ನೇ ಸೀಸನ್. ಇಲ್ಲಿಯವರೆಗೆ ಟೂರ್ನಿಯಲ್ಲಿ ಅತಿ ಹೆಚ್ಚು ಪಂದ್ಯಗಳನ್ನು (278) ಆಡಿರುವುದು ಧೋನಿ ಹೆಚ್ಚುಗಾರಿಕೆ. ಅವರ ನಿವೃತ್ತಿ ಬಗ್ಗೆ ಆಗಾಗ ಸುದ್ದಿಗಳು ಹರಿದಾಡಿಯೇ ಇತ್ತು. ಆದರೆ, ಅದು ನಿಜವಾಗಿಲ್ಲ. ಇದು ಅವರ ಕೊನೆಯ ಸೀಸನ್ ಆಗಬಹುದು. ಈಗಾಗಲೇ ತಮ್ಮ ಎನರ್ಜಿ ಕಡಿಮೆ ಆಗುತ್ತಿರುವುದಾಗಿ ಧೋನಿ ಹೇಳಿಕೆ ನೀಡಿದ್ದಾರೆ. ರುತುರಾಜ್ ಗಾಯಕ್ವಾಡ್ ನಾಯಕನಾಗಿದ್ದು, ಸಂಜು ಸ್ಯಾಮ್ಸನ್ ಕೂಡ ಸಿಎಸ್​ಕೆ ಆಗಮಿಸಿದ್ದಾರೆ.

ಮಿಚೆಲ್ ಸ್ಟಾರ್ಕ್

ಆಸ್ಟ್ರೇಲಿಯಾದ ಲೆಜೆಂಡರಿ ಬೌಲರ್ ಎನಿಸಿಕೊಂಡಿರೋ ಮಿಚೆಲ್ ಸ್ಟಾರ್ಕ್ ಎಷ್ಟೋ ಪಂದ್ಯಗಳ ದಿಕ್ಕನ್ನೇ ಬದಲಿಸಿದ್ದಾರೆ. ಈಗಾಗಲೇ ಅಂತರರಾಷ್ಟ್ರೀಯ ಟಿ20 ಪಂದ್ಯಗಳಿಂದ ನಿವೃತ್ತರಾಗಿದ್ದಾರೆ. ಅವರು ಮುಂಬರುವ ವಿಶ್ವಕಪ್ ಪರಿಗಣಿಸಿ, ಅವರು ಈ ವರ್ಷದ ಬಳಿಕ ಐಪಿಎಲ್​​​ನಿಂದ ಹೊರ ಹೋಗಬಹುದು. ಅವರು ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿದ್ದಾರೆ. ಅವರ ಆಗಮನಕ್ಕೆ ಇನ್ನೂ ಗ್ರೀನ್ ಸಿಗ್ನಲ್ ಸಿಗದ ಕಾರಣ ಆರಂಭದ ಕೆಲ ಪಂದ್ಯಗಳನ್ನು ಅವರು ಮಿಸ್ ಮಾಡಿಕೊಳ್ಳಬಹುದು.

ಇಶಾಂತ್ ಶರ್ಮಾ

ಭಾರತದ ಅನುಭವಿ ವೇಗಿ ಇಶಾಂತ್ ಶರ್ಮಾ ಅವರದ್ದು ಕೂಡ ಇದು ಕೊನೆಯ ಸೀಸನ್ ಎನ್ನಲಾಗುತ್ತಿದೆ. 37 ವರ್ಷದ ಇಶಾಂತ್ ಶರ್ಮಾ ಮೊದಲ ಸೀಸನ್‌ನಿಂದ ಐಪಿಎಲ್​ ಆಡುತ್ತಿದ್ದಾರೆ. ಅವರು ಗುಜರಾತ್ ಟೈಟನ್ಸ್​​ನಲ್ಲಿ ಇದ್ದು, ಅವರು ಐಪಿಎಲ್​ಗೆ ನಿವೃತ್ತಿ ಘೋಷಿಸೋ ಸಾಧ್ಯತೆ ಇದೆ.

ಇದನ್ನೂ ಓದಿ: 60 ವರ್ಷದವರೆಗೆ ಐಪಿಎಲ್ ಆಡಬೇಕು ಎಂದಿದ್ದಕ್ಕೆ ಧೋನಿ ಏನಂದ್ರು?

ಮನೀಶ್ ಪಾಂಡೆ

ಐಪಿಎಲ್‌ನಲ್ಲಿ ಶತಕ ಗಳಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಮನೀಶ್ ಪಾಂಡೆ. ಕಳೆದ ನಾಲ್ಕೈದು ವರ್ಷಗಳಲ್ಲಿ ಅವರು ಸಾಕಷ್ಟು ಏರಿಳಿತ ಕಂಡಿದ್ದಾರೆ. ಕಳೆದ ಐದು ಸೀಸನ್​​ಗಳಿಂದ ಅವರು ಕಣಕ್ಕೆ ಇಳಿದಿದ್ದು ಕೇವಲ 28 ಪಂದ್ಯಗಳಲ್ಲಿ ಮಾತ್ರ. ಐದು ಸೀಸನ್​​ಗಳಲ್ಲಿ ನಾಲ್ಕು ವಿಭಿನ್ನ ತಂಡಗಳನ್ನು ಪ್ರತಿನಿಧಿಸಿದ್ದಾರೆ. 36 ವರ್ಷದ ಮನೀಶ್ ಪಾಂಡೆ ಕೆಕೆಆರ್‌ನಲ್ಲಿದ್ದಾರೆ. ಅವರು ನಿವೃತ್ತಿ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸುನಿಲ್ ನರೈನ್

ಮನೀಶ್ ಪಾಂಡೆ ಜೊತೆಗೆ, ಕೆಕೆಆರ್‌ನ ಅನುಭವಿ ಆಲ್‌ರೌಂಡರ್ ಸುನಿಲ್ ನರೈನ್‌ಗೆ ಇದು ಕೊನೆಯ ಸೀಸನ್ ಆಗಬಹುದು ಎನ್ನಲಾಗುತ್ತಿದೆ. ಅವರು ಈ ಬಾರಿ ಐಪಿಲ್​​ನಿಂದ ನಿವೃತ್ತಿ ಘೋಷಿಸುತ್ತಾರಾ ಎನ್ನುವ ಕುತೂಹಲ ಮೂಡಿದೆ. ಈ ಸೀಸನ್‌ನಲ್ಲಿ ಅವರ ಬ್ಯಾಟಿಂಗ್ ಮತ್ತು ಬಾಲ್ ಎರಡರಲ್ಲೂ ಪ್ರದರ್ಶನ ನೀಡದಿದ್ದರೆ, ಇದು ಅವರ ಕೊನೆಯ ಸೀಸನ್ ಆಗಬಹುದು.

ಇನ್ನಷ್ಟು ಕ್ರಿಕೆಟ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:44 am, Tue, 24 March 26

Follow Us
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್