
ಮೇ 26 ರ ಮಂಗಳವಾರ ನಡೆದ ಐಪಿಎಲ್ 2026 (IPL 2026) ರ ಕ್ವಾಲಿಫೈಯರ್ 1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದೆ. ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಗುಜರಾತ್ ಟೈಟಾನ್ಸ್ ತಂಡವು ಸೋಲಿನ ಹೊರತಾಗಿಯೂ ಫೈನಲ್ ತಲುಪಲು ಇನ್ನೊಂದು ಅವಕಾಶವನ್ನು ಪಡೆದಿದೆ. ಅದಕ್ಕಾಗಿ ಗುಜರಾತ್ ಕ್ವಾಲಿಫೈಯರ್ 2 ಪಂದ್ಯವನ್ನು ಆಡಬೇಕಾಗುತ್ತದೆ. ಕ್ವಾಲಿಫೈಯರ್ 2 ಪಂದ್ಯದಲ್ಲಿ ಗುಜರಾತ್ಗೆ ಯಾರು ಎದುರಾಗುತ್ತಾರೆ ಎಂಬುದು ಇಂದು ಅಂದರೆ ಮೇ 27 ರಂದು ನಿರ್ಧಾರವಾಗುತ್ತದೆ. ಇಂದು ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್ (SRH vs RR) ತಂಡವನ್ನು ಎದುರಿಸಲಿದೆ. ಈ ಪಂದ್ಯವನ್ನು ಗೆಲ್ಲುವ ತಂಡವು ಕ್ವಾಲಿಫೈಯರ್ 2 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ.
ಐಪಿಎಲ್ ಇತಿಹಾಸದಲ್ಲಿ ಇದುವರೆಗೆ ಹೈದರಾಬಾದ್ ಮತ್ತು ರಾಜಸ್ಥಾನ ನಡುವೆ ಒಟ್ಟು 3 ಪಂದ್ಯಗಳು ನಡೆದಿವೆ. ಈ 23 ಪಂದ್ಯಗಳಲ್ಲಿ ಹೈದರಾಬಾದ್ ಪ್ರಾಬಲ್ಯ ಸಾಧಿಸಿದೆ. ಹೈದರಾಬಾದ್ 14 ಪಂದ್ಯಗಳಲ್ಲಿ ರಾಜಸ್ಥಾನವನ್ನು ಸೋಲಿಸಿದೆ. ರಾಜಸ್ಥಾನ ಹೈದರಾಬಾದ್ ವಿರುದ್ಧ 9 ಪಂದ್ಯಗಳನ್ನು ಗೆದ್ದಿದೆ. ಇನ್ನು ಐಪಿಎಲ್ 2026 ರ ಲೀಗ್ ಹಂತದಲ್ಲಿ ಎರಡೂ ತಂಡಗಳು ಎರಡು ಬಾರಿ ಮುಖಾಮುಖಿಯಾಗಿದ್ದವು. ಈ ಎರಡು ಪಂದ್ಯಗಳಲ್ಲಿ ಸನ್‌ರೈಸರ್ಸ್ ಹೈದರಾಬಾದ್, ರಾಜಸ್ಥಾನ ರಾಯಲ್ಸ್ ತಂಡವನ್ನು ಸೋಲಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.
ನವಚಂಡೀಗಢದ ಮುಲ್ಲನ್‌ಪುರದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯಕ್ಕಾಗಿ ಪಿಚ್ ನಂ. 4 ಅನ್ನು ಬಳಸಲಾಗುವುದು. ಈ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕರವಾಗಿದೆ. ಲೀಗ್ ಹಂತದಲ್ಲಿ ಇದೇ ಪಿಚ್‌ನಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ಪಂದ್ಯ ನಡೆದಿತ್ತು. ಆ ಪಂದ್ಯದಲ್ಲಿ ಪಂಜಾಬ್ ನೀಡಿದ್ದ 223 ರನ್‌ಗಳ ಗುರಿಯನ್ನು ರಾಜಸ್ಥಾನ್ ಬೆನ್ನಟ್ಟಿ ಗೆದ್ದಿತ್ತು. ಈ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ 27 ಎಸೆತಗಳಲ್ಲಿ 51 ರನ್ ಗಳಿಸಿದರೆ, ವೈಭವ್ 16 ಎಸೆತಗಳಲ್ಲಿ 43 ರನ್ ಗಳಿಸಿದರು.
ಅಲ್ಲದೆ ಈ ಪಿಚ್‌ನಲ್ಲಿ ಆಡಲಾದ ಎಲ್ಲಾ ಮೂರು ಪಂದ್ಯಗಳನ್ನು ಚೇಸಿಂಗ್ ತಂಡಗಳು ಗೆದ್ದಿವೆ, ಆದ್ದರಿಂದ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡುವ ಸಾಧ್ಯತೆಯಿದೆ. ಆದಾಗ್ಯೂ, ಹವಾಮಾನವನ್ನು ಪರಿಗಣಿಸಿ , ಮೊದಲ ಎರಡು ಗಂಟೆಗಳಲ್ಲಿ ಫೀಲ್ಡರ್‌ಗಳು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಇದಲ್ಲದೆ, ಮೊದಲು ಬ್ಯಾಟಿಂಗ್ ಮಾಡಿದ ತಂಡವು 220 ರಿಂದ 230 ರನ್ ಕಲೆಹಾಕಿದರೆ, ಅದು ಚೇಸಿಂಗ್ ತಂಡದ ಮೇಲೆ ಹೆಚ್ಚು ಒತ್ತಡವನ್ನುಂಟು ಮಾಡುತ್ತದೆ.
IPL 2026: ಸಿಕ್ಸರ್‌ಗಳ ಶತಕ; ಐಪಿಎಲ್‌ನಲ್ಲಿ ಇತಿಹಾಸ ಬರೆದ ಆರ್ಸಿಬಿ ನಾಯಕ
ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಎಲಿಮಿನೇಟರ್ ಪಂದ್ಯವು ಸಂಜೆ 7:30 ಕ್ಕೆ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಪಿಸಿಎ ಕ್ರೀಡಾಂಗಣದಲ್ಲಿ ಆರಂಭವಾಗಲಿದ್ದು, ಟಾಸ್ ಸಂಜೆ 7 ಗಂಟೆಗೆ ನಡೆಯಲಿದೆ. ಮುಲ್ಲನ್‌ಪುರದಲ್ಲಿ ಇಂದಿನ ಪಂದ್ಯಕ್ಕೆ ಹವಾಮಾನ ಅನುಕೂಲಕರವಾಗಿದ್ದು, ಮಳೆ ಬೀಳುವ ನಿರೀಕ್ಷೆಯಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಉತ್ತರ ಭಾರತದಲ್ಲಿ ತಾಪಮಾನ ಹೆಚ್ಚಾಗಿದೆ. ನ್ಯೂ ಚಂಡೀಗಢ ನಗರವು ಇದಕ್ಕೆ ಹೊರತಾಗಿಲ್ಲ. ಸಂಜೆ 5 ಗಂಟೆಯ ನಂತರವೂ ಇಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗಿರುತ್ತದೆ. ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ಪಂದ್ಯದ ಸಮಯದಲ್ಲಿ ತಾಪಮಾನವು 35 ರಿಂದ 40 ಡಿಗ್ರಿ ಸೆಲ್ಸಿಯಸ್ ನಡುವೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:27 pm, Wed, 27 May 26