AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026 Final: ಫೈನಲ್ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ?

IPL 2026 Final GT vs RCB: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್ 2026) ಫೈನಲ್ ಪಂದ್ಯದ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ ಎಂಬ ಪ್ರಶ್ನೆ ಮೂಡುವುದು ಸಹಜ. ಇದಕ್ಕಾಗಿಯೇ ಬಿಸಿಸಿಐ ಐಪಿಎಲ್ ರೈನ್ ರೂಲ್ಸ್ ಅನ್ನು ಪರಿಚಯಿಸಿದೆ. ಈ ನಿಯಮ ಐಪಿಎಲ್ ಫೈನಲ್ ಪಂದ್ಯಕ್ಖೂ ಅನ್ವಯವಾಗಲಿದೆ.

IPL 2026 Final: ಫೈನಲ್ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ?
Ipl 2026 Image Credit source: IPL
ಝಾಹಿರ್ ಯೂಸುಫ್
|

Updated on:May 31, 2026 | 12:03 PM

Share

IPL 2026 Final: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಅಹಮದಾಬಾದ್​ನಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಗುಜರಾತ್ ಟೈಟಾನ್ಸ್​ (GT) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ವೇಳೆ ಮಳೆ ಬಂದರೆ ಪಂದ್ಯ ಆಯೋಜಿಸುವುದು ಹೇಗೆ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ…

ಫೈನಲ್ ಪಂದ್ಯವನ್ನು ಪೂರ್ಣಗೊಳಿಸಲು ಐಪಿಎಲ್ ರೈನ್ ರೂಲ್ಸ್ ಅನ್ನು ಪರಿಚಯಿಸಲಾಗಿದೆ. ಈ ನಿಯಮಗಳ ಮೂಲಕ ಐಪಿಎಲ್​ನ ಅಂತಿಮ ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ. ಹಾಗಿದ್ರೆ ಫೈನಲ್ ಪಂದ್ಯಕ್ಕೆ ಮಳೆ ಅಡಚಣೆಯನ್ನು ಉಂಟು ಮಾಡಿದರೆ ಯಾವೆಲ್ಲಾ ನಿಯಮಗಳು ಅನ್ವಯವಾಗಲಿದೆ ಎಂದು ನೋಡೋಣ…

  • ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯವು ರಾತ್ರಿ 7.30 ಕ್ಕೆ ಶುರುವಾಗಲಿದೆ. ಒಂದು ವೇಳೆ ಮಳೆಯಿಂದಾಗಿ ಪಂದ್ಯ ಶುರುವಾಗುವುದು ವಿಳಂಬವಾದರೆ ಹೆಚ್ಚುವರಿ 120 ನಿಮಿಷಗಳನ್ನು ತೆಗೆದುಕೊಳ್ಳಲಾಗುತ್ತದೆ. ಅದರಂತೆ ರಾತ್ರಿ 9.40 ರೊಳಗೆ ಪಂದ್ಯ ಶುರುವಾದರೆ ಯಾವುದೇ ಓವರ್​ ಕಡಿತ ಇರುವುದಿಲ್ಲ. 2 ತಂಡಗಳು 20 ಓವರ್​ಗಳನ್ನು ಆಡಲಿದೆ.
  • ಮಳೆಯಿಂದ ಅಥವಾ ಇನ್ನಿತರೆ ಕಾರಣಗಳಿಂದ ವಿಳಂಬವಾಗಿ ರಾತ್ರಿ 9.40 ರ ಬಳಿಕ ಪಂದ್ಯ ಆರಂಭವಾಗುವುದಾರೆ, ಓವರ್​ಗಳ ಕಡಿತ ಮಾಡಲಾಗುತ್ತದೆ. ಅಲ್ಲದೆ ಆ ಬಳಿಕ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಬೇಕಿದ್ದರೆ ಉಭಯ ತಂಡಗಳು ಕನಿಷ್ಠ 5 ಓವರ್​ಗಳನ್ನು ಆಡಿರಬೇಕು.
  • ಇನ್ನು ನಿಗದಿತ ಸಮಯದೊಳಗೆ ಪಂದ್ಯ ನಡೆಯದಿದ್ದರೆ ಹೆಚ್ಚುವರಿ ಸಮಯ ತೆಗೆದುಕೊಳ್ಳಲಾಗುತ್ತದೆ. ಈ ಮೂಲಕ 5 ಓವರ್​ಗಳ ಪಂದ್ಯವನ್ನು ಆಯೋಜಿಸಲಿದೆ. ಅದರಂತೆ ಮಧ್ಯರಾತ್ರಿ 1.30 ರೊಳಗೆ 5 ಓವರ್​ಗಳ ಪಂದ್ಯವನ್ನು ಆಯೋಜಿಸಲು ಮುಂದಾಗಲಿದ್ದಾರೆ.
  • ಒಂದು ವೇಳೆ ಮಧ್ಯರಾತ್ರಿ 1.30 ರೊಳಗೆ 5 ಓವರ್​ಗಳ ಪಂದ್ಯ ಆಯೋಜಿಸಲು ಸಾಧ್ಯವಾಗದಿದ್ದರೆ ಮಾತ್ರ ಪಂದ್ಯವನ್ನು ಮೀಸಲು ದಿನದಾಟಕ್ಕೆ ಮುಂದೂಡಲಾಗುತ್ತದೆ. ಅದರಂತೆ ಸೋಮವಾರ ಫೈನಲ್ ಪಂದ್ಯವನ್ನು ಮರು ಆಯೋಜಿಸಲಿದ್ದಾರೆ.
  • ಒಂದು ವೇಳೆ ಮಳೆಯಿಂದಾಗಿ ಮೀಸಲು ದಿನದಾಟದಲ್ಲೂ ಕನಿಷ್ಠ 5 ಓವರ್​ಗಳ ಪಂದ್ಯ ನಡೆಸಲು ಸಾಧ್ಯವಾಗದೇ ಇದ್ದರೆ ಮಾತ್ರ ಫೈನಲ್ ಪಂದ್ಯವನ್ನು ರದ್ದುಗೊಳಿಸಲಾಗುತ್ತದೆ. ಅಲ್ಲದೆ ಲೀಗ್​ ಹಂತದ 70 ಪಂದ್ಯಗಳ ನಂತರ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ತಂಡವನ್ನು ಚಾಂಪಿಯನ್ಸ್ ಎಂದು ಘೋಷಿಸಲಾಗುತ್ತದೆ.

ಇದನ್ನೂ ಓದಿ: ಐಪಿಎಲ್​ನಲ್ಲಿ ಈ 3 ನಿಯಮ ಬದಲಿಸಿ: ಸಚಿನ್ ತೆಂಡೂಲ್ಕರ್ ಸಲಹೆ!

ಅಂದರೆ ಮೀಸಲು ದಿನದಾಟದಲ್ಲೂ ಪಂದ್ಯ ನಡೆಯದಿದ್ದರೆ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಚಾಂಪಿಯನ್ ಆಗಲಿದೆ. ಏಕೆಂದರೆ ಈ ಬಾರಿಯ ಐಪಿಎಲ್​ನ ಅಂಕ ಪಟ್ಟಿಯಲ್ಲಿ ಆರ್​ಸಿಬಿ ತಂಡ ಮೊದಲ ಸ್ಥಾನ ಅಲಂಕರಿಸಿದರೆ, ಗುಜರಾತ್ ಟೈಟಾನ್ಸ್ ತಂಡ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ಮಳೆಯಿಂದಾಗಿ ಅಥವಾ ಇನ್ನಿತರೆ ಕಾರಣಗಳಿಂದಾಗಿ ಮೀಸಲು ದಿನದಾಟದಲ್ಲೂ ಪಂದ್ಯ ನಡೆಯದೇ, ಮ್ಯಾಚ್ ರದ್ದಾದರೆ ಆರ್​ಸಿಬಿ ತಂಡವನ್ನು ವಿಜಯಿ ಎಂದು ಘೋಷಿಸಲಾಗುತ್ತದೆ.

Published On - 11:53 am, Sun, 31 May 26

Follow Us
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ