Ipl 2026
Image Credit source: IPL
IPL 2026 Final: ಇಂಡಿಯನ್ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಅಹಮದಾಬಾದ್ನಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ವೇಳೆ ಮಳೆ ಬಂದರೆ ಪಂದ್ಯ ಆಯೋಜಿಸುವುದು ಹೇಗೆ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ…
ಫೈನಲ್ ಪಂದ್ಯವನ್ನು ಪೂರ್ಣಗೊಳಿಸಲು ಐಪಿಎಲ್ ರೈನ್ ರೂಲ್ಸ್ ಅನ್ನು ಪರಿಚಯಿಸಲಾಗಿದೆ. ಈ ನಿಯಮಗಳ ಮೂಲಕ ಐಪಿಎಲ್ನ ಅಂತಿಮ ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ. ಹಾಗಿದ್ರೆ ಫೈನಲ್ ಪಂದ್ಯಕ್ಕೆ ಮಳೆ ಅಡಚಣೆಯನ್ನು ಉಂಟು ಮಾಡಿದರೆ ಯಾವೆಲ್ಲಾ ನಿಯಮಗಳು ಅನ್ವಯವಾಗಲಿದೆ ಎಂದು ನೋಡೋಣ…
- ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯವು ರಾತ್ರಿ 7.30 ಕ್ಕೆ ಶುರುವಾಗಲಿದೆ. ಒಂದು ವೇಳೆ ಮಳೆಯಿಂದಾಗಿ ಪಂದ್ಯ ಶುರುವಾಗುವುದು ವಿಳಂಬವಾದರೆ ಹೆಚ್ಚುವರಿ 120 ನಿಮಿಷಗಳನ್ನು ತೆಗೆದುಕೊಳ್ಳಲಾಗುತ್ತದೆ. ಅದರಂತೆ ರಾತ್ರಿ 9.40 ರೊಳಗೆ ಪಂದ್ಯ ಶುರುವಾದರೆ ಯಾವುದೇ ಓವರ್ ಕಡಿತ ಇರುವುದಿಲ್ಲ. 2 ತಂಡಗಳು 20 ಓವರ್ಗಳನ್ನು ಆಡಲಿದೆ.
- ಮಳೆಯಿಂದ ಅಥವಾ ಇನ್ನಿತರೆ ಕಾರಣಗಳಿಂದ ವಿಳಂಬವಾಗಿ ರಾತ್ರಿ 9.40 ರ ಬಳಿಕ ಪಂದ್ಯ ಆರಂಭವಾಗುವುದಾರೆ, ಓವರ್ಗಳ ಕಡಿತ ಮಾಡಲಾಗುತ್ತದೆ. ಅಲ್ಲದೆ ಆ ಬಳಿಕ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಬೇಕಿದ್ದರೆ ಉಭಯ ತಂಡಗಳು ಕನಿಷ್ಠ 5 ಓವರ್ಗಳನ್ನು ಆಡಿರಬೇಕು.
- ಇನ್ನು ನಿಗದಿತ ಸಮಯದೊಳಗೆ ಪಂದ್ಯ ನಡೆಯದಿದ್ದರೆ ಹೆಚ್ಚುವರಿ ಸಮಯ ತೆಗೆದುಕೊಳ್ಳಲಾಗುತ್ತದೆ. ಈ ಮೂಲಕ 5 ಓವರ್ಗಳ ಪಂದ್ಯವನ್ನು ಆಯೋಜಿಸಲಿದೆ. ಅದರಂತೆ ಮಧ್ಯರಾತ್ರಿ 1.30 ರೊಳಗೆ 5 ಓವರ್ಗಳ ಪಂದ್ಯವನ್ನು ಆಯೋಜಿಸಲು ಮುಂದಾಗಲಿದ್ದಾರೆ.
- ಒಂದು ವೇಳೆ ಮಧ್ಯರಾತ್ರಿ 1.30 ರೊಳಗೆ 5 ಓವರ್ಗಳ ಪಂದ್ಯ ಆಯೋಜಿಸಲು ಸಾಧ್ಯವಾಗದಿದ್ದರೆ ಮಾತ್ರ ಪಂದ್ಯವನ್ನು ಮೀಸಲು ದಿನದಾಟಕ್ಕೆ ಮುಂದೂಡಲಾಗುತ್ತದೆ. ಅದರಂತೆ ಸೋಮವಾರ ಫೈನಲ್ ಪಂದ್ಯವನ್ನು ಮರು ಆಯೋಜಿಸಲಿದ್ದಾರೆ.
- ಒಂದು ವೇಳೆ ಮಳೆಯಿಂದಾಗಿ ಮೀಸಲು ದಿನದಾಟದಲ್ಲೂ ಕನಿಷ್ಠ 5 ಓವರ್ಗಳ ಪಂದ್ಯ ನಡೆಸಲು ಸಾಧ್ಯವಾಗದೇ ಇದ್ದರೆ ಮಾತ್ರ ಫೈನಲ್ ಪಂದ್ಯವನ್ನು ರದ್ದುಗೊಳಿಸಲಾಗುತ್ತದೆ. ಅಲ್ಲದೆ ಲೀಗ್ ಹಂತದ 70 ಪಂದ್ಯಗಳ ನಂತರ ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರಸ್ಥಾನ ಅಲಂಕರಿಸಿದ ತಂಡವನ್ನು ಚಾಂಪಿಯನ್ಸ್ ಎಂದು ಘೋಷಿಸಲಾಗುತ್ತದೆ.
ಇದನ್ನೂ ಓದಿ: ಐಪಿಎಲ್ನಲ್ಲಿ ಈ 3 ನಿಯಮ ಬದಲಿಸಿ: ಸಚಿನ್ ತೆಂಡೂಲ್ಕರ್ ಸಲಹೆ!
ಅಂದರೆ ಮೀಸಲು ದಿನದಾಟದಲ್ಲೂ ಪಂದ್ಯ ನಡೆಯದಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಆಗಲಿದೆ. ಏಕೆಂದರೆ ಈ ಬಾರಿಯ ಐಪಿಎಲ್ನ ಅಂಕ ಪಟ್ಟಿಯಲ್ಲಿ ಆರ್ಸಿಬಿ ತಂಡ ಮೊದಲ ಸ್ಥಾನ ಅಲಂಕರಿಸಿದರೆ, ಗುಜರಾತ್ ಟೈಟಾನ್ಸ್ ತಂಡ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ಮಳೆಯಿಂದಾಗಿ ಅಥವಾ ಇನ್ನಿತರೆ ಕಾರಣಗಳಿಂದಾಗಿ ಮೀಸಲು ದಿನದಾಟದಲ್ಲೂ ಪಂದ್ಯ ನಡೆಯದೇ, ಮ್ಯಾಚ್ ರದ್ದಾದರೆ ಆರ್ಸಿಬಿ ತಂಡವನ್ನು ವಿಜಯಿ ಎಂದು ಘೋಷಿಸಲಾಗುತ್ತದೆ.